ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್: ಸೋತ ದಕ್ಷಿಣ ಆಫ್ರಿಕಾ, ಗೆದ್ದ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ!

ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ಟೀಂ ಇಂಡಿಯಾ 188 ರನ್‌ಗಳ ಬೃಹತ್ ಜಯ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯದ ಗೆಲುವಿನ ಖುಷಿಯಲ್ಲೇ ಭಾರತ ತಂಡ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಭಾರಿ ಜಿಗಿತ ಕಂಡಿದೆ.
4ನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧದ ಜಯದ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದ್ದು ಕೂಡ ಭಾರತ ತಂಡಕ್ಕೆ ವರದಾನವಾಗಿದೆ.
ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ 152 ರನ್‌ಗಳಿಗೆ ಆಲೌಟ್ ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 99 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಮುಖಭಂಗ ಅನುಭವಿಸಿತು.
ಭಾರತ ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಮುನ್ನ ನಾಲ್ಕನೇ ಸ್ಥಾನದಲ್ಲಿತ್ತು, ದಕ್ಷಿಣ ಆಫ್ರಿಕಾ 2ನೇ ಸ್ಥಾನದಲ್ಲಿತ್ತು. ಈ ಟೆಸ್ಟ್‌ನಲ್ಲಿ ಜಯ ಸಾಧಿಸುವ ಮೂಲಕ ಭಾರತ ಎರಡನೇ ಸ್ಥಾನಕ್ಕೆ ಜಿಗಿಯಿತು.

ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಸ್ಥಾನ
ದಕ್ಷಿಣ ಆಫ್ರಿಕಾ ವಿರುದ್ಧದ ಭರ್ಜರಿ ಗೆಲುವಿನ ನಂತರ ಆಸ್ಟ್ರೇಲಿಯಾ 76.92 ಗೆಲುವಿನ ಶೇಕಡಾವಾರು ಅಂಕಗಳೊಂದಿಗೆ (ಪಿಸಿಟಿ) ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2021-2023 ರ ಅವಧಿಯಲ್ಲಿ 13 ಪಂದ್ಯಗಳನ್ನಾಡಿದ್ದು 9 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮೂರು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದರೆ, ಕೇವಲ ಒಂದು ಟೆಸ್ಟ್‌ನಲ್ಲಿ ಮಾತ್ರ ಸೋಲನುಭವಿಸಿದೆ.
ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ದಕ್ಷಿಣ ಆಫ್ರಿಕಾ ತಂಡ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. 54.55 ಗೆಲುವಿನ ಶೇಕಡಾವಾರು ಅಂಕಗಳೊಂದಿಗೆ (ಪಿಸಿಟಿ) ಮೂರನೇ ಸ್ಥಾನದಲ್ಲಿದೆ.
ಬಾಂಗ್ಲಾದೇಶದ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ 55.77 ಶೇಕಡಾವಾರು ಅಂಕಗಳೊಂದಿದೆ (ಪಿಸಿಟಿ) ನಾಲ್ಕನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಮುಂದಿನ ಪಂದ್ಯದಲ್ಲಿ ಕೂಡ ಭಾರತ ಗೆಲುವು ಸಾಧಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಸುಲಭವಾಗಲಿದೆ. ಭಾರತದ ಗೆಲುವಿನ ನಂತರ ಶ್ರೀಲಂಕಾ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿರುವ ಪಾಕಿಸ್ತಾನ
ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಸೋಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದೆ.
ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಕ್ರಮವಾಗಿ 44.44 ಮತ್ತು 42.42 ಶೇಕಡಾವಾರು ಅಂಕಗಳೊಂದಿದೆ (ಪಿಸಿಟಿ) ಐದು ಮತ್ತು ಆರನೇ ಸ್ಥಾನದಲ್ಲಿವೆ. ರಾವಲ್ಪಿಂಡಿ ಮತ್ತು ಮುಲ್ತಾನ್‌ನಲ್ಲಿ ಗೆದ್ದ ನಂತರ ಇಂಗ್ಲೆಂಡ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ವೆಸ್ಟ್ ಇಂಡೀಸ್, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಕ್ರಮವಾಗಿ 40.91, 25.93 ಮತ್ತು 12.12 ರ ಗೆಲುವಿನ ಶೇಕಡಾವಾರುಗಳೊಂದಿಗೆ 7, 8 ಮತ್ತು 9ನೇ ಸ್ಥಾನದಲ್ಲಿವೆ. ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಿದ್ದವು. ಸೌತಾಂಪ್ಟನ್‌ನಲ್ಲಿ ನಡೆದ ಫೈನಲ್‌ನಲ್ಲಿ ನ್ಯೂಜಿಲೆಂಡ್ ಜಯ ಸಾಧಿಸಿತ್ತು.

ಆಸ್ಟ್ರೇಲಿಯಾ ವಿರುದ್ಧ ಗೆಲ್ಲಬೇಕಿದೆ ಭಾರತ
ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧದ ಸರಣಿಯ ನಂತರ 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ನಾಲ್ಕು ಪಂದ್ಯಗಳಲ್ಲಿ ಭಾರತ ತಂಡ ಕನಿಷ್ಠ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡರೂ ಕೂಡ ಫೈನಲ್‌ಗೆ ಸುಲಭವಾಗಿ ಅರ್ಹತೆ ಪಡೆಯಲಿದೆ.
ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದ ಬಳಿಕ ಭಾರತದ ಫೈನಲ್ ತಲುಪುವ ಅವಕಾಶ ಹೆಚ್ಚಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications