WTC Points: ಅಗ್ರ ಸ್ಥಾನದಲ್ಲಿ ಟೀಮ್ ಇಂಡಿಯಾ ಭಧ್ರ, ಎಂಟನೇ ಸ್ಥಾನಕ್ಕೆ ಕುಸಿದ ಇಂಗ್ಲೆಂಡ್
ತವರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಇಂಗ್ಲೆಂಡ್ ವಿರುದ್ಧ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 4-1ರಿಂದ ಗೆದ್ದು ಬೀಗಿದೆ. ಮೊದಲ ಟೆಸ್ಟ್ ನಲ್ಲಿ ಸೋಲು ಕಂಡಿದ್ದ ಟೀಮ್ ಇಂಡಿಯಾ, ವಿಶಾಖಪ್ಟಣಂ, ರಾಜ್‌ಕೋಟ್, ರಾಂಚಿ ಹಾಗೂ ಧರ್ಮಶಾಲಾ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತು. ಈ ಮೂಲಕ ಇಂಗ್ಲೆಂಡ್ ತಂಡದ ಬಜ್ ಬೌಲ್ ತಂತ್ರವನ್ನು ಮೆಟ್ಟಿ ನಿಂತು ಆಡಿ ಅಬ್ಬರಿಸಿತು.
ಶನಿವಾರದಂದು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಅನ್ನು ಭಾರತವು ಇನ್ನಿಂಗ್ಸ್ ಮತ್ತು 64 ರನ್ಗಳಿಂದ ಗೆದ್ದಿದೆ. ಧರ್ಮಶಾಲಾ ಮೈದಾನದಲ್ಲಿ ಮೂರು ದಿನಗಳ ಅಂತರದಲ್ಲಿ ಇಂಗ್ಲೆಂಡ್ ಹೀನಾಯ ಸೋಲು ಕಂಡಿತ್ತು. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) 2023-25 ರ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ 68.51ಅಂಕಗಳು ಕಲೆ ಹಾಕಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆಯಿತು. ಈ ಹಿಂದೆ ಟೀಮ್ ಇಂಡಿಯಾ ಶೇ.64.58 ಅಂಕಗಳಿದ್ದವು.

ಭಾರತ ಅಗ್ರ ಸ್ಥಾನ
ಪ್ರಸ್ತುತ ಡಬ್ಲ್ಯುಟಿಸಿಯಲ್ಲಿ ಭಾರತ ಇದುವರೆಗೆ 9 ಟೆಸ್ಟ್ ಪಂದ್ಯಗಳನ್ನು ಆಡಿದೆ. ಮತ್ತು 6 ರಲ್ಲಿ ಗೆದ್ದಿದೆ. ಭಾರತ ಎರಡು ಪಂದ್ಯಗಳಲ್ಲಿ ಸೋತು ಒಂದು ಪಂದ್ಯ ಡ್ರಾ ಮಾಡಿಕೊಂಡಿತ್ತು. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 4-1 ಅಂತರದಲ್ಲಿ ವಶಪಡಿಸಿಕೊಂಡಿದೆ. 60.00 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು. ಹೀಗಾಗಿ ಭಾರತ ಅಗ್ರಸ್ಥಾನವನ್ನು ತಲುಪಿತು. ಆಸ್ಟ್ರೇಲಿಯಾ ಎರಡನೇ (59.09) ಮೂರು, ಬಾಂಗ್ಲಾದೇಶ (50.00) ನಾಲ್ಕನೇ ಮತ್ತು ಪಾಕಿಸ್ತಾನ (36.66) ಐದನೇ ಸ್ಥಾನದಲ್ಲಿದೆ. ಇಂಗ್ಲೆಂಡ್ 17.5 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.
ಅಶ್ವಿನ್ ಪಂಚ್
ಧರ್ಮಶಾಲಾ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ 218 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತವು ಮೊದಲ ಇನ್ನಿಂಗ್ಸ್‌ನಲ್ಲಿ 477 ರನ್‌ಗಳ ಬೃಹತ್ ಸ್ಕೋರ್ ಮಾಡಿತು. ಭಾರತ 259 ರನ್‌ಗಳ ಪ್ರಬಲ ಮುನ್ನಡೆ ಸಾಧಿಸಿತು. ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಮಾರಕ ದಾಳಿಗೆ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 195 ರನ್‌ಗಳಿಗೆ ಕುಸಿಯಿತು. ಇಂಗ್ಲೆಂಡ್ ಪರ ಜೋ ರೂಟ್ (94) ಗರಿಷ್ಠ ರನ್ ಗಳಿಸಿದರು. ಜಾನಿ ಬೈರ್‌ಸ್ಟೋ ಬ್ಯಾಟ್‌ನಿಂದ 39 ರನ್‌ಗಳು ಬಂದವು. ಅಶ್ವಿನ್ ತಮ್ಮ 100ನೇ ಟೆಸ್ಟ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿದರು. ಭಾರತ ಪರ ಟೆಸ್ಟ್‌ನಲ್ಲಿ ಅತಿ ಹೆಚ್ಚು ಐದು ವಿಕೆಟ್‌ಗಳನ್ನು ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ. ಅವರು 36ನೇ ಬಾರಿಗೆ ಈ ಸಾಧನೆ ಮಾಡಿದರು. ಅನಿಲ್ ಕುಬ್ಳೆ (35 ವಿಕೆಟ್) ಸಾಧನೆ ಹಿಂದಿಕ್ಕಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications