ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಜಯ ಸಾಧಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾನುವಾರ ನಡೆದ ಪಂದ್ಯದಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಟಗಾರರು ಅಮೋಘ ಪ್ರದರ್ಶನ ನೀಡಿದ್ದಾರೆ. ಈಗ ಭಾರತದ ಆಟಗಾರರು ಮುಂದಿನ ಸರಣಿಗಾಗಿ ಕಾಯುತ್ತಿದ್ದಾರೆ. ಅಂದಹಾಗೆ ಭಾರತ ತನ್ನ ಮುಂದಿನ ಸರಣಿಯನ್ನು ಅಕ್ಟೋಬರ್ 2 ರಿಂದ ಆಡಲಿದೆ.
ಭಾರತ ತನ್ನ ಮುಂದಿನ ಸರಣಿಯನ್ನು ತವರಿನಲ್ಲೇ ಆಡಲಿದೆ. ಈ ವೇಳೆ ಟೀಮ್ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿ ಟೀಮ್ ಇಂಡಿಯಾಗೆ ಮಹತ್ವದಾಗಿದೆ. ಈ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಡಿಯಲ್ಲಿ ನಡೆಯುತ್ತಿದ್ದು, ರೋಚಕತೆ ಹುಟ್ಟಿಸಿದೆ. ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯೋಕೆ ಈ ಸರಣಿ ಮಹತ್ವದಾಗಿದೆ.

ಭಾರತ ಈಗಾಗಲೇ ಈ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸರ್ಕಲ್‌ನಲ್ಲಿ 5 ಪಂದ್ಯಗಳನ್ನು ಆಡಿದ್ದು, 2 ಜಯ ಸಾಧಿಸಿದ್ದು, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ವೆಸ್ಟ್ ಇಂಡೀಸ್ ಆಡಿದ 2 ಪಂದ್ಯಗಳಲ್ಲಿ 1 ಸೋಲು, 1 ಡ್ರಾ ಕಂಡಿದ್ದು, ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯಲು ಉಭಯ ತಂಡಗಳಿಗೆ ಈ ಸರಣಿ ಮಹತ್ವದಾಗಿದೆ. ಈ ಸರಣಿಯ ಮೊದಲ ಪಂದ್ಯ ಅಹಮದಾಬಾದ್‌ನಲ್ಲಿ ಅಕ್ಟೋಬರ್ 2 ರಿಂದ ಆರಂಭವಾಗಲಿದೆ. ಇನ್ನು ಎರಡನೇ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಕ್ಟೋಬರ್ 10 ರಿಂದ ಆರಂಭವಾಗಲಿದೆ.
ಇದಾದ ಬಳಿಕ ಟೀಮ್ ಇಂಡಿಯಾ ಬಹುನಿರೀಕ್ಷಿತ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಳ್ಳಲಿದೆ. ಈ ಪ್ರವಾಸ ಅಕ್ಟೋಬರ್ ನಿಂದ ನವೆಂಬರ್ ವರೆಗೆ ನಡೆಯಲಿದೆ. ಈ ಪ್ರವಾಸದಲ್ಲಿ ಮತ್ತೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಂಗಳವನ್ನು ಪ್ರವೇಶಿಸಲಿದ್ದಾರೆ. ಹೀಗಾಗಿ ಈ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ಈಗಾಗಲೇ ಟಿ20 ಹಾಗೂ ಟೆಸ್ಟ್ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದು, ಏಕದಿನ ಸರಣಿಯಲ್ಲಿ ಅಂಗಳಕ್ಕೆ ಇಳಿಯಲಿದ್ದಾರೆ.

ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ತ ಪಡಿಕ್ಕಲ್, ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಶಿಂಗಟನ್ ಸುಂದರ್, ಜಸಪ್ರೀತ್ ಬುಮ್ರಾ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೇಟ್ ಕೀಪರ್), ಮೊಹಮ್ಮದ್. ಸಿರಾಜ್, ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್.