Yashasvi Jaiswal: ಪರ್ತ್‌ನಲ್ಲಿ ಬೌನ್ಸ್ ಬ್ಯಾಕ್ ಆದ ಯಶಸ್ವಿ ಜೈಸ್ವಾಲ್ ಇತಿಹಾಸ
ಪ್ರಸಕ್ತ ವರ್ಷ ಅಮೋಘ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್, ತಮ್ಮ ಫಾರ್ಮ್ ಮುಂದುವರೆಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಮೊದಲ ಇನಿಂಗ್ಸ್‌ನಲ್ಲಿ ಸೊನ್ನೆ ಸುತ್ತಿ ನಿರಾಸೆ ಅನುಭವಿಸಿದ್ದ ಜೈಸ್ವಾಲ್, ಎರಡನೇ ಇನಿಂಗ್ಸ್‌ನಲ್ಲಿ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾದರು. ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ದಾಖಲೆ ನಿರ್ಮಿಸಿದ್ದಾರೆ. ಹಾಗಿದ್ದರೆ ಯಶಸ್ವಿ ಜೈಸ್ವಾಲ್ ನಿರ್ಮಿಸಿದ ದಾಖಲೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.
ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 150 ರನ್ ಸೇರಿಸಿ ನಿರಾಸೆ ಮೂಡಿಸಿತ್ತು. ಈ ವೇಳೆ ಮೊದಲ ವಿಕೆಟ್‌ಗೆ ಆರಂಭಿಕರು 5 ರನ್‌ಗಳ ಕಾಣಿಕೆ ನೀಡಿದರು. ಆಸೀಸ್ ಮೊದಲ ಇನಿಂಗ್ಸ್ ಆರಂಭಿಸಿ ಮೊದಲ ದಿನದಾಟದಂತ್ಯಕ್ಕೆ 7 ವಿಕೆಟ್‌ಗೆ 67 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತು. ಇದಾದ ಬಳಿಕ ಎರಡನೇ ದಿನ ಆಸ್ಟ್ರೇಲಿಯ 104 ರನ್ ಗಳಿಸಿ ಆಲ್ ಔಟ್ ಆಯಿತು. ಇದಾದ ಬಳಿಕ ಮೊದಲ ಇನ್ನಿಂಗ್ಸ್ ವೈಫಲ್ಯದಿಂದ ಪಾಠ ಕಲಿತ ಕೆ.ಎಲ್.ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ನೆರವಾದರು. ಈ ವೇಳೆ ಯಶಸ್ವಿ ಜೈಸ್ವಾಲ್ 15 ರನ್ ಗಳನ್ನು ಬಾರಿಸುತ್ತಿದ್ದಂತೆ ಹೊಸ ಇತಿಹಾಸ ನಿರ್ಮಿಸಿದರು.

ದಾಖಲೆ ಬರೆದ ಯಶಸ್ವಿ
ಯಶಸ್ವಿ ಜೈಸ್ವಾಲ್ ಈ ವರ್ಷ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಟೆಸ್ಟ್‌ನಲ್ಲಿ ಭಾರತದ ಪರ ಈ ವರ್ಷ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಯುವ ಆರಂಭಿಕ ಬ್ಯಾಟ್ಸ್‌ಮನ್ ಜೋ ರೂಟ್ ನಂತರ ಈ ವರ್ಷ 1000 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎಂಬ ಖ್ಯಾತಿ ಜೈಸ್ವಾಲ್, ಪರ್ತ್ ಟೆಸ್ಟ್‌ನ ಪರ್ತ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಜೈಸ್ವಾಲ್ 15 ರನ್ ಗಡಿ ದಾಟುತ್ತಿದ್ದಂತೆ, ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಇತಿಹಾಸ ನಿರ್ಮಿಸಿದರು. ಜೈಸ್ವಾಲ್ ಒಂದೇ ವರ್ಷದಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಎಡಗೈ ಆಟಗಾರ ಎಂಬ ಖ್ಯಾತಿ ತಮ್ಮದಾಗಿಸಿಕೊಂಡರು. ಈ ಮೂಲಕ 16 ವರ್ಷಗಳ ಹಳೆಯ ದಾಖಲೆ ಅಳಿಸಿ ಹಾಕಿದರು. ಗಂಭೀರ್ 2008 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 8 ಟೆಸ್ಟ್ ಪಂದ್ಯಗಳ 16 ಇನ್ನಿಂಗ್ಸ್‌ಗಳಲ್ಲಿ 1134 ರನ್ ಗಳಿಸಿದ್ದರು. ಯಶಸ್ವಿ ಈ ದಾಖಲೆಯನ್ನು ಅಳಸಿ ಹಾಕಿದರು.
ಸಿಕ್ಸರ್ ದಾಖಲೆ
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಯಾರು ಮಾಡದ ಸಾಧನೆ ಮಾಡಿದರು. ಇವರು ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಎರಡು ಸಿಕ್ಸರ್ ಬಾರಿಸುವ ಮೂಲಕ ಇತಿಹಾಸ ಬರೆದರು. ಒಂದೇ ಕ್ಯಾಲೇಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಈ ಮೂಲಕ ನ್ಯೂಜಿಲೆಂಡ್ ತಂಡದ ಬ್ರೆಂಡಮ್ ಮೆಕಲಂ ಅವರ ದಾಖಲೆಯನ್ನು ಅಳಿಸಿ ಹಾಕಿದರು.

ಬ್ರೆಂಡಮ್ ಮೆಕಲಂ 2014ರಲ್ಲಿ ನ್ಯೂಜಿಲೆಂಡ್ ಪರ ಬ್ಯಾಟ್ ಮಾಡಿ 33 ಸಿಕ್ಸರ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ಯಶಸ್ವಿ ಅಳಿಸಿ ಹಾಕಿದರು. ನಾಥನ್ ಲಿಯಾನ್ ಅವರು ಎಸೆದ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ ಸಿಕ್ಸರ್ ಬಾರಿಸುವ ಮೂಲಕ ಒಂದೇ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ 34ನೇ ಸಿಕ್ಸರ್ ಸಿಡಿಸಿ ದಾಖಲೆ ನಿರ್ಮಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications