Asia Cup T20: ಈ ಪ್ಲೇಯರ್‌ಗೆ ಸಿಗಬಹುದು ಬಂಪರ್: ಯಾರದು?
ಏಷ್ಯಾ ಕಪ್‌ಗೆ ಟೀಮ್ ಇಂಡಿಯಾವನ್ನು ಇನ್ನೇನು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ವೇಳೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಯುವ ಆಟಗಾರರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಇಂಗ್ಲೆಂಡ್‌ನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿರುವ ಆಟಗಾರ, ಟಿ20ಗೆ ಟೂರ್ನಿಗೆ ಕಂ ಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ. ಈ ವೇಳ ಒಂದು ವರ್ಷದ ಬಳಿಕ ಸ್ಟಾರ್ ಆಟಗಾರರ ಟೀಮ್ ಇಂಡಿಯಾ ಪರ ಕಣಕ್ಕೆ ಇಳಿಯುವ ಕನಸು ಕಾಣುತ್ತಿದ್ದಾರೆ.
ಏಷ್ಯಾ ಕಪ್‌ಗೆ ಭಾರತ ತಂಡವನ್ನು ಮಂಗಳವಾರ ಮಧ್ಯಾಹ್ನ ಪ್ರಕಟಿಸುವ ಸಾಧ್ಯತೆ ಇದೆ. ಇನ್ನು ಇದೇ ವೇಳೆ ಟೀಮ್ ಇಂಡಿಯಾಕ್ಕೆ ಯಾವೆಲ್ಲಾ ಆಟಗಾರರು ಸೇರಿಕೊಳ್ಳಬಹುದು ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ಎಂಬ ಲೆಕ್ಕಾಚಾರವನ್ನು ಅಭಿಮಾನಿಗಳು ಆರಂಭಿಸಿದ್ದಾರೆ. ಇನ್ನು ಗಿಲ್ ಅವರನ್ನು ತಂಡದ ಹೊಸ ಉಪನಾಯಕನನ್ನಾಗಿ ಮಾಡುವ ಸುದ್ದಿಯೂ ಇತ್ತು. ಆದರೆ ಈಗ ತಂಡದ ಚಿತ್ರಣವೇ ಬದಲಾಗಿದೆ. ಟೀಮ್ ಇಂಡಿಯಾದ ಆರಂಭಿಕ ಆಟಗಾರನ ಸ್ಥಾನಕ್ಕೆ ಈಗ ಯಶಸ್ವಿ ಜೈಸ್ವಾಲ್ ತೀವ್ರ ಪೈಪೋಟಿ ನೀಡುತ್ತಿದ್ದಾರೆ.

ಮಂಗಳವಾರ ಪ್ರಕಟವಾಗುವ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆಯಬಹುದು ಎಂಬ ಲೆಕ್ಕಾಚಾರ ಆರಂಭಿಸಿದ್ದಾರೆ. ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಅವರು ಕಾಣಿಸಿಕೊಳ್ಳುವುದು ಪಕ್ಕಾ ಆಗಿದೆ. ಇನ್ನು ಮೂರನೇ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದೆ. ಇವರಿಗೆ ಏಷ್ಯಾ ಕಪ್ ತಂಡದಲ್ಲಿ ಆಡುವ ಅವಕಾಶ ಸಿಗುತ್ತದೋ ಇಲ್ಲವೋ ಎಂಬ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಆದರೆ ಇವರು ವರ್ಷಗಳ ಬಳಿಕ ತಂಡಕ್ಕೆ ಮರಳುವುದು ಪಕ್ಕಾ ಆದಂತೆ ಆಗಿದೆ.
ಯಶಸ್ವಿ ಸಾಧನೆ
ಯಶಸ್ವಿ ಜೈಸ್ವಾಲ್ ಒಬ್ಬ ಪ್ರತಿಭಾನ್ವಿತ ಎಡಗೈ ಆಟಗಾರ. ಇವರು ಇತ್ತೀಚಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ದಾರೆ. ಇವರು ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.

ಟಿ20 ಫಾರ್ಮೆಟ್‌ನಲ್ಲೂ ಜೈಸ್ವಾಲ್ ಸ್ಥಿರ ಪ್ರದರ್ಶನ ನೀಡಿದ್ದಾರೆ. ಆದರೆ ಈ ಫಾರ್ಮೆಟ್‌ನಲ್ಲಿ ಇವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈಗ ಏನಾದ್ರೂ ಅವಕಾಶಗಳು ಸಿಕ್ಕಲ್ಲಿ ಅಬ್ಬರದ ಪ್ರದರ್ಶನ ನೀಡುವ ಮೂಲಕ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಲು ಪ್ಲ್ಯಾನ್ ಮಾಡಿದ್ದಾರೆ. ಇವರು ಭಾರತದ ಪರ 23 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಈ ವೇಳೆ 723 ರನ್ ಸಿಡಿಸಿದ್ದಾರೆ. ಜೈಸ್ವಾಲ್ ಅವರ ಸರಾಸರಿ 36.15 ಆಗಿದೆ. ಈ ವೇಳೆ ಇವರ ಬ್ಯಾಟ್‌ನಿಂದ 1 ಶತಕ ಹಾಗೂ 5 ಅರ್ಧಶತಕಗಳು ಬಂದಿವೆ. ಇವರಿಗೆ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆಯುತ್ತಾರಾ ಎಂಬುದು ಕಾದುನೋಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications