ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿದೆ. ಹೊಸ ವರ್ಷದ ಆರಂಭದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಪಂದ್ಯವನ್ನು ಆಡಲಿದೆ. ಈಗಾಗಲೇ ಸರಣಿಯಲ್ಲಿ ಹಿನ್ನಡೆ ಅನುಭವಿಸಿರುವ ಟೀಮ್ ಇಂಡಿಯಾ, ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ವಿಶ್ವಾಸವನ್ನು ಹೊಂದಿದೆ.
ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಈ ಪಂದ್ಯ ಗೆದ್ದು ಸರಣಿ ಸಮಬಲಗೊಳಿಸುವ ಗುರಿ ಹೊಂದಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ 22ರ ಹರೆಯದ ಓಪನರ್ ಈ ಪಂದ್ಯದಲ್ಲಿ ಅಬ್ಬರಿಸುವ ಇರಾದೆಯನ್ನು ಹೊಂದಿದ್ದಾರೆ. ಚೊಚ್ಚಲ ಪಂದ್ಯದಲ್ಲೇ ಈ ಯುವಕ 171 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ ಎಲ್ಲರನ್ನೂ ತನ್ನ ನಿಬ್ಬೇರಗಾಗಿಸಿದ್ದರು.

ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಟೀಂ ಇಂಡಿಯಾ ಕನಸು ಮತ್ತೊಮ್ಮೆ ವಿಫಲವಾಗಿದೆ. ಸೆಂಚುರಿಯನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಹೀನಾಯ ಇನ್ನಿಂಗ್ಸ್ ಸೋಲು ಅನುಭವಿಸಿದ ಭಾರತ ಇದೀಗ ಆತಿಥೇಯ ತಂಡಕ್ಕೆ ತಕ್ಕ ಉತ್ತರ ನೀಡುವ ಮೂಲಕ ಎರಡನೇ ಟೆಸ್ಟ್‌ನಲ್ಲಿ ಗೆಲುವು ಸಾಧಿಸುವ ಇರಾದೆಯಲ್ಲಿದೆ.
ಎರಡನೇ ಟೆಸ್ಟ್‌ನ್ಲಿ ಶತಾಯಗತಾಯ ಗೆಲ್ಲಲೇ ಬೇಕು ಎಂಬ ಉದ್ದೇಶವನ್ನು ಹೊಂದಿದ್ದು, ತಂಡದ ಪ್ರತಿಯೊಬ್ಬ ಆಟಗಾರ ತನ್ನ ಜವಾಬ್ದಾರಿಯನ್ನು ಅರಿತು ಆಡಬೇಕಿದೆ. ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ರನ್ ಗಳಿಸಲು ವಿಫಲರಾಗಿದ್ದರು. ಮತ್ತು ಅವರು ಎರಡನೇ ಟೆಸ್ಟ್‌ನಲ್ಲಿ ಮೊದಲ ಟೆಸ್ಟ್‌ನಲ್ಲಿ ಮಾಡಿದ ತಪ್ಪಿನಿಂದ ಪಾಠ ಕಲಿತು ಪುಟಿದೇಳುವ ಕನಸು ಹೊಂದಿದ್ದಾರೆ.

ಯಶಸ್ವಿ ಜೈಸ್ವಾಲ್ ತಮ್ಮ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅಬ್ಬರಿಸಿದ್ದರು. ವೆಸ್ಟ್ ಇಂಡೀಸ್ ವಿರುದ್ಧ ಆಡುವಾಗ, ಅವರು 171 ರನ್‌ಗಳ ಬಿಗ್ ಇನ್ನಿಂಗ್ಸ್ ಕಟ್ಟಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ, ಈ ಯುವಕ ಚೊಚ್ಚಲ ಪಂದ್ಯದಲ್ಲೇ 16 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸುವ ಮೂಲಕ ಶತಕ ಬಾರಿಸಿ ಎಲ್ಲರಿಂದ ಬೆನ್ನುತಟ್ಟಿಸಿಕೊಂಡಿದ್ದರು. ಅಲ್ಲದೆ ಎರಡನೇ ಇನ್ನಿಂಗ್ಸ್‌ನಲ್ಲೂ ಅವರು 9 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 57 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಸೆಂಚುರಿಯನ್ 17 ರನ್ ಗಳಿಸಲು ಅಷ್ಟೇ ಇವರಿಗೆ ಶಕ್ತವಾಗಿತ್ತು. ಮತ್ತು ಎರಡನೇಯಲ್ಲಿ ಕೇವಲ 5 ರನ್ ಗಳಿಸಿತು.
ಭಾರತ ತಂಡ ಕೇಪ್ ಟೌನ್ ಟೆಸ್ಟ್ ಗೆಲ್ಲುವ ಕನಸು ಕಾಣುತ್ತಿದ್ದು, ಇದು ಯಶಸ್ವಿ ಆಗಬೇಕಾದಲ್ಲಿ ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ದೊಡ್ಡ ಜೊತೆಯಾಟದ ಕಾಣಿಕೆ ನೀಡಬೇಕಿದೆ. ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಚೊಚ್ಚಲ ಪಂದ್ಯದಲ್ಲಿ ಆಡಿದ ಇನ್ನಿಂಗ್ಸ್ ನ್ನು ಮತ್ತೊಮ್ಮೆ ಆಡಬೇಕಿದೆ. ಅವರು ಚೊಚ್ಚಲ ಟೆಸ್ಟ್‌ನಲ್ಲಿ 229 ರನ್‌ಗಳ ಸರಿಸಾಟಿಯಿಲ್ಲದ ಜೊತೆಯಾಟವನ್ನು ಮಾಡಿದರು. ದಕ್ಷಿಣ ಆಫ್ರಿಕಾ ವಿರುದ್ಧವೂ ಇದೇ ರೀತಿಯ ಪ್ರದರ್ಶನ ನೀಡುವ ಅಗತ್ಯವಿದೆ. ಒಂದು ವೇಳೆ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಆರಂಭಿಕರಾಗಿ ನೆಲಕಚ್ಚಿ ನಿಂತು ಭಾರತದ ಬೃಹತ್ ಸ್ಕೋರ್ ಮಾಡುವಲ್ಲಿ ಯಶಸ್ವಿ ಆದಲ್ಲಿ ಗೆಲುವಿನ ಆಸೆ ಅರಳುತ್ತದೆ.