For Quick Alerts
ALLOW NOTIFICATIONS  
For Daily Alerts
 

Yashasvi Jaiswal: ಶತಕ ಬಾರಿಸಿ ಎಲೈಟ್‌ ಕ್ಲಬ್‌ಗೆ ಎಂಟ್ರಿ ನೀಡಿದ ಯಶಸ್ವಿ ಜೈಸ್ವಾಲ್

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌, ಏಕದಿನ ಫಾರ್ಮೆಟ್‌ಗೂ ತಾವು ಹೊಂದುವ ಆಟಗಾರ ಎಂಬುದನ್ನು ವಿಶಾಖಪಟ್ಟಣಂನಲ್ಲಿ ತಿಳಿಸಿದ್ದಾರೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡ ಯಶಸ್ವಿ ಜೈಸ್ವಾಲ್‌, ವೈಜಾಗ್‌ನಲ್ಲಿ ಮನಮೋಹಕ ಪ್ರದರ್ಶನ ನೀಡಿ ಆರ್ಭಟಿಸಿದರು. ಇವರು ತಮ್ಮ ಏಕದಿನ ಕ್ರಿಕೆಟ್‌ನ ನಾಲ್ಕನೇ ಪಂದ್ಯದಲ್ಲಿ ದೊಡ್ಡ ಸಾದನೆಯನ್ನು ಮಾಡಿದರು. ಈ ಮೂಲಕ ಭಾರತದ ಪರ ಈ ಸಾಧನೆಯನ್ನು ಕೆಲವೇ ಕೆಲವು ಆಟಗರರು ಮಾಡಿದ ಸಾಧನೆಯನ್ನು ಮಾಡಿ ಬೀಗಿದರು.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಶುಭಮನ್‌ ಗಿಲ್ ಅಲಭ್ಯರಾಗಿದ್ದರು. ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಕುತ್ತಿಗೆಯ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಇವರು ಎರಡನೇ ಟೆಸ್ಟ್ ಹಾಗೂ ಏಕದಿನ ಸರಣಿಯಿಂದ ಹೊರ ನಡೆದಿದ್ದರು. ಶುಭಮನ್‌ ಗಿಲ್‌ ಅವರ ಅನುಪಸ್ಥಿತಿಯಲ್ಲಿ ಆಡುವ ಅವಕಾಶವನ್ನು ಪಡೆದ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಅಮೋಘ ಪ್ರದರ್ಶನ ನೀಡಿದರು. ಇವರು ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿದರು.

ವಿಶಾಖಪಟ್ಟಣಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ನೈಜ ಆಟವನ್ನು ಆಡಿದರು. ಈಗಾಗಲೇ ಭಾರತದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ ಛಾಪು ಮೂಡಿಸಿರುವ ಯಶಸ್ವಿ, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲೂ ತಮ್ಮ ಹೆಜ್ಜೆ ಗುರುತನ್ನು ಮೂಡಿಸುವ ಆಸೆಯನ್ನು ಹೊಂದಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದ, ಯಶಸ್ವಿ ಜೈಸ್ವಾಲ್‌ ಅವರ ಆಟದ ಬಗ್ಗೆ ಪ್ರಶ್ನೆಗಳು ಇದ್ದವು. ಆದರೆ ಈ ಎಲ್ಲ ಪ್ರಶ್ನೆಗಳಿಗೆ ಮೂರನೇ ಪಂದ್ಯದಲ್ಲಿ ಉತ್ತರ ನೀಡಿದರು.

ವಿಶೇಷ ಕ್ಲಬ್‌ಗೆ ಎಂಟ್ರಿ

ಮೊದಲ ಎರಡು ಪಂದ್ಯಗಳಲ್ಲಿ ಮಾಡಿದ ತಪ್ಪನ್ನು ಮಾಡದೆ ಎಚ್ಚರಿಕೆಯಿಂದ ಇನ್ನಿಂಗ್ಸ್‌ ಕಟ್ಟಿದ ಯಶಸ್ವಿ ಜೈಸ್ವಾಲ್‌ ತಮ್ಮ ಕಲಾತ್ಮಕ ಹೊಡೆತದ ಮೂಲಕ ಅಭಿಮಾನಿಗಳ ಮನ ಗೆದ್ದರು. ಇವರು ಆರಂಭದಲ್ಲಿ ಕೊಂಚ ತಾಳ್ಮೆಯಿಂದ ಬ್ಯಾಟ್ ಮಾಡಿ ನಂತರ, ಗೇರ್ ಶಿಫ್ಟ್ ಮಾಡಿದರು. ಇವರು ತಮ್ಮ ಅರ್ಧಶತಕ ಪೂರೈಸಲು 75 ಎಸೆತಗಳನ್ನು ತೆಗೆದುಕೊಂಡರೆ, ಶತಕವನ್ನು ಪೂರೈಸಲು ಯಶಸ್ವಿ ಜೈಸ್ವಾಲ್‌ 111 ಎಸೆತಗಳನ್ನು ತೆಗೆದುಕೊಂಡರು. ಈ ಕ್ಲಾಸ್ ಇನಿಂಗ್ಸ್‌ನಲ್ಲಿ 10 ಬೌಂಡರಿ, 1 ಸಿಕ್ಸರ್‌ಗಳು ಸೇರಿವೆ.

Yashasvi Jaiswal Joins Elite Club Becomes Sixth Indian to Score Centuries in All Three Formats

ಈ ಶತಕದ ಮೂಲಕ ಯಶಸ್ವಿ ಜೈಸ್ವಾಲ್‌ ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದರು. ಜೈಸ್ವಾಲ್‌ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ್ದರು. ಶನಿವಾರ ಏಕದಿನ ಫಾರ್ಮೆಟ್‌ನಲ್ಲಿ ಶತಕ ಬಾರಿಸುತ್ತಲೇ ಯಶಸ್ವಿ ಎಲೈಟ್‌ ಕ್ಲಬ್‌ಗೆ ಎಂಟ್ರಿ ಪಡೆದರು. ಭಾರತದ ಪರ ಮೂರು ಫಾರ್ಮೆಟ್‌ಗಳಲ್ಲಿ ಸುರೇಶ್ ರೈನಾ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶುಭಮನ್ ಗಿಲ್, ಶತಕ ಸಿಡಿಸಿದ್ದರು. ಈಗ ಈ ಸಾಲಿಗೆ ಯಶಸ್ವಿ ಎಂಟ್ರಿ ನೀಡಿದ್ದಾರೆ.

Story first published: Sunday, December 7, 2025, 0:15 [IST]
Other articles published on Dec 7, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+