For Quick Alerts
ALLOW NOTIFICATIONS  
For Daily Alerts
 

Yashasvi Jaiswal: ಆಫ್ಘಾನ್ ವಿರುದ್ಧದ ಮೊದಲ ಟಿ20 ಪಂದ್ಯದಿಂದ ಯಶಸ್ವಿ ಜೈಸ್ವಾಲ್‌ ತಂಡದಿಂದ ಹೊರಗುಳಿದಿದ್ದು ಏಕೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು. ರೋಹಿತ್ ಶರ್ಮಾ ಸುಮಾರು 14 ತಿಂಗಳ ನಂತರ ಭಾರತ ಟಿ20 ತಂಡಕ್ಕೆ ಮರಳಿದ್ದಾರೆ. ಟಾಸ್ ಸಮಯದಲ್ಲಿ, ಯಶಸ್ವಿ ಜೈಸ್ವಾಲ್ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ರೋಹಿತ್ ಬಹಿರಂಗಪಡಿಸಿದರು.

Yashasvi Jaiswal misses out of 1st T20I due to sore right groin

ಇಲ್ಲಿಯವರೆಗೆ ಯಶಸ್ವಿ ರೋಹಿತ್ ಜೊತೆ ಓಪನಿಂಗ್ ಮಾಡುತ್ತಿದ್ದಾರೆ ಎಂದು ಪಂದ್ಯದ ಮೊದಲು ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದರು. ಕೊನೆಯಲ್ಲಿ ಯಶಸ್ವಿ ಅವರನ್ನು ಯಾಕೆ ತಂಡದಿಂದ ಹೊರಗಿಟ್ಟರು ಎಂಬುದಕ್ಕೆ ಉತ್ತರ ಇಲ್ಲಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದೆ. ಈ ಪೋಸ್ಟ್‌ನಲ್ಲಿ ವಿಡಯೋ ಒಂದನ್ನು ಅಪ್‌ ಲೋಡ್ ಮಾಡಲಾಗಿದ್ದು, ಇದರಲ್ಲಿ ರೋಹಿತ್ ಶರ್ಮಾ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದರು. ಈ ವೇಳೆ ಸಂಜು ಸ್ಯಾಮ್ಸನ್, ಅವೇಶ್ ಖಾನ್, ಯಶಸ್ವಿ ಜೈಸ್ವಾಲ್ ಮತ್ತು ಕುಲ್ದೀಪ್ ಆಡುವ ಅವಕಾಶ ಪಡೆಯುವಲ್ಲಿ ವಿಫಲರಾದರು.

ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ರೋಹಿತ್ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಓಪನಿಂಗ್ ಮಾಡುತ್ತಾರೆ ಎಂದು ವಿಶ್ವಾಸದಿಂದ ಹೇಳಿದ್ದರು. ಸಮತೋಲನದ ತಂಡವನ್ನು ಹೊಂದಿರುವಾಗ, ನಾವು ತಂಡದ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದರು. ಇನ್ನು ಅವರು ಗಾಯಕ್ಕೆ ತುತ್ತಾಗಿದ್ದಾರೆ ಎಂದು ವರದಿಗಳು ಕೇಳಿ ಬಂದಿವೆ.

Yashasvi Jaiswal misses out of 1st T20I due to sore right groin

ಐಪಿಎಲ್‌ನ ಕಳೆದ ಎರಡು ಆವೃತ್ತಿಗಳಲ್ಲಿ ಪ್ರಭಾವಿ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್, 2023 ರಲ್ಲಿ ಬ್ಲ್ಯೂ ಜೆರ್ಸಿ ತೊಡುವ ಅವಕಾಶ ಪಡೆದರು. ಇದುವರೆಗೆ ಸಿಕ್ಕ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. 15 T20 ಅಂತಾರಾಷ್ಟ್ರೀಯ ಪಂದ್ಯಗಳಿಂದ, ಅವರ ದಾಖಲೆಯು 159.25 ರ ಸ್ಟ್ರೈಕ್ ರೇಟ್‌ನೊಂದಿಗೆ 33.07 ನಲ್ಲಿ 430 ರನ್‌ಗಳನ್ನು ಗಳಿಸಿದ್ದಾರೆ.

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್ (ನಾಯಕ), ರಹಮತ್ ಶಾ, ಅಜ್ಮತುಲ್ಲಾ ಉಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕ್ ಮತ್ತು ಮುಮಾನ್.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್.

Story first published: Thursday, January 11, 2024, 20:47 [IST]
Other articles published on Jan 11, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+