53 ವರ್ಷಗಳ ಗವಾಸ್ಕರ್ ದಾಖಲೆ ಅಳಿಸಿದ ಯಶಸ್ವಿ: ರೂಟ್ ದಾಖಲೆ ಹಿಂದೆ ಬಿದ್ದಿರುವ ಜೈಸ್ವಾಲ್
ಟೀಮ್ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಕಾನ್ಪುರ ಟೆಸ್ಟ್‌ನಲ್ಲಿ ಜೈಸ್ವಾಲ್ ಎರಡೂ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಅಬ್ಬರಿಸಿದ್ದಾರೆ. ಇವರ ಕ್ಲಾಸಿಕ್ ಆಟದ ಫಲವಾಗಿ ಇವರ ಮುಡಿಗೆ ಪಂದ್ಯ ಶ್ರೇಷ್ಠ ಗರಿ ಸಹ ಸಂದಿದೆ. ಪ್ರಸಕ್ತ ವರ್ಷ ಭರ್ಜರಿ ಫಾರ್ಮ್‌ನಲ್ಲಿರುವ ಯಶಸ್ವಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದ್ದಾರೆ.
ಯಶಸ್ವಿ ಜೈಸ್ವಾಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದು ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅವರ ಹಳೆಯ ದಾಖಲೆಯನ್ನು ಅಳಿಸಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಅವರನ್ನು ಹಿಂದಿಕ್ಕುವ ಕನಸಿನಲ್ಲಿದ್ದಾರೆ.

ಸರಣಿಯಲ್ಲಿ ಗರಿಷ್ಠ ಸ್ಕೋರ್
ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್, ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲೂ ಇದೇ ಪ್ರದರ್ಶನ ಮುಂದುವರೆಸಿದ್ದಾರೆ. ಆಡಿದ ನಾಲ್ಕು ಇನಿಂಗ್ಸ್‌ಗಳಲ್ಲಿ ಜೈಸ್ವಾಲ್ 47.25ರ ಸರಾಸರಿಯಲ್ಲಿ 189 ರನ್ ಸಿಡಿಸಿದ್ದಾರೆ. ಅಲ್ಲದೆ ಈ ಸರಣಿಯಲ್ಲೂ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.
ಜೋ ರೂಟ್ ದಾಖಲೆಯ ಮೇಲೆ ಕಣ್ಣು
ಭಾರತದ ಸ್ಟಾರ್ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ರನ್‌ಗಳನ್ನು ಗಳಿಸಿದ ಎರಡನೇ ಬ್ಯಾಟರ್. ಇವರ ಕಣ್ಣು ಜೋ ರೂಟ್ ಅವರ ದಾಖಲೆಯ ಮೇಲೆ ನೆಟ್ಟಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಈ ಋತುವಿನಲ್ಲಿ ಜೋ ರೂಟ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ರೂಟ್ 16 ಪಂದ್ಯಗಳ 29 ಇನ್ನಿಂಗ್ಸ್‌ಗಳಲ್ಲಿ 1398 ರನ್ ಗಳಿಸಿದ್ದಾರೆ. ನಂತರದ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಇದ್ದಾರೆ. ಇವರು ಬಾಂಗ್ಲಾದೇಶದ ವಿರುದ್ಧ ಎರಡು ಅರ್ಧಶತಕಗಳನ್ನು ಬಾರಿಸಿದ ಬಳಿಕ ರೂಟ್ ಹತ್ತಿರಕ್ಕೆ ಬಂದು ನಿಂತಿದ್ದಾರೆ.

ಜೈಸ್ವಾಲ್ 1200 ರನ್
ಯಶಸ್ವಿ ಜೈಸ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 11 ಪಂದ್ಯಗಳ 20 ಇನ್ನಿಂಗ್ಸ್‌ಗಳಲ್ಲಿ 1217 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡದ ಬೆನ್ ಡಕೆಟ್ ಇದ್ದಾರೆ. ಇವರ ಬುಟ್ಟಿಯಲ್ಲಿ 1028 ರನ್ ಗಳಿವೆ. ಈ ಮೂವರು ಮಾತ್ರ ಸಾವಿರ ರನ್‌ಗಳ ಗಡಿ ದಾಟಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುತ್ತಾರೆ. ಇವರು 742 ರನ್ ಸಿಡಿಸಿದ್ದಾರೆ. ಶುಭಮನ್ ಗಿಲ್ 735 ರನ್ ಬಾರಿಸಿದ್ದು, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಇವರು ಸಾವಿರ ರನ್ ಗಡಿ ದಾಟುವ ಕನಸು ಹೊಂದಿದ್ದಾರೆ.
ಗವಾಸ್ಕರ್ ದಾಖಲೆ ಉಡೀಸ್
ಯಶಸ್ವಿ ಜೈಸ್ವಾಲ್ 2024 ರಲ್ಲಿ ಟೆಸ್ಟ್‌ನಲ್ಲಿ 929 ರನ್ ಗಳಿಸಿದ್ದಾರೆ. ಇದು 53 ವರ್ಷ ಬಳಿಕ ಭಾರತದ ಬ್ಯಾಟರ್ ಮಾಡಿದ ಸಾಧನೆ ಆಗಿದೆ. ಇದಕ್ಕೂ ಮೊದಲು 1971ರಲ್ಲಿ ಸುನಿಲ್ ಗವಾಸ್ಕರ್ ಟೆಸ್ಟ್‌ನಲ್ಲಿ 918 ರನ್ ಗಳಿಸಿದ್ದರು. ಯಶಸ್ವಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾಗಿನಿಂದಲೂ 11 ಟೆಸ್ಟ್ ಪಂದ್ಯಗಳ 20 ಇನ್ನಿಂಗ್ಸ್‌ಗಳಲ್ಲಿ 1217 ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications