IND vs BAN: ದಾಖಲೆಯ ಸನಿಹದಲ್ಲಿ ಭಾರತದ ಯುವ ಓಪನರ್ ಯಶಸ್ವಿ
ಸೆಪ್ಟೆಂಬರ್ 19 ರಿಂದ ಭಾರತ ಹಾಗೂ ಬಾಂಗ್ಲಾದೇಶಗಳ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಮೊದಲ ಟೆಸ್ಟ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾರತದ ಭರವಸೆಯ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಕಳೆದ ಎರಡು ವರ್ಷಗಳಲ್ಲಿ ಈ ಜೋಡಿ ತಮ್ಮ ಮೇಲೆ ಆಯ್ಕೆ ಸಮಿತಿ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಸಫಲವಾಗಿದೆ. ಈಗ ಬಾಂಗ್ಲಾ ಬೌಲರ್‌ಗಳನ್ನು ಕಾಡಲು ಈ ಜೋಡಿ ಪ್ಲ್ಯಾನ್ ಮಾಡಿಕೊಂಡಿದೆ.
ಯಶಸ್ವಿ ಜೈಸ್ವಾಲ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿರುವ ಪ್ಲೇಯರ್. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ 700ಕ್ಕೂ ಅಧಿಕ ರನ್ ಬಾರಿಸಿ ಸ್ಫೋಟಿಸಿದ್ದರು. ಈಗ ಮತ್ತೊಂದು ಸರಣಿಗೆ ಸಜ್ಜಾಗಿದ್ದಾರೆ. ಅಲ್ಲದೆ ಇವರು ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.

ದಾಖಲೆಯ ಮೇಲೆ ಯಶಸ್ವಿ ಕಣ್ಣು
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ ಅಡಿಯಲ್ಲಿ ಆಡಲಾಗುವ ಈ ಸರಣಿಯಲ್ಲಿ ಗೆಲುವು ದಾಖಲಿಸುವುದು ಟೀಮ್ ಇಂಡಿಯಾಗೆ ಅನಿವಾರ್ಯ. ಈ ಸರಣಿಯನ್ನು ವಶಕ್ಕೆ ಪಡೆದಲ್ಲಿ ಭಾರತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುತ್ತದೆ. ಈ ನಿಟ್ಟಿನಲ್ಲಿ ಯುವ ಆಟಗಾರನ ಫಾರ್ಮ್ ಇಂಪಾರ್ಟೆಂಟ್. ಈ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಫಾರ್ಮ್ ಮುಂದುವರೆದರೆ ದಾಖಲೆ ನಿರ್ಮಿಸಬಹುದು.
ಯಶಸ್ವಿ ಜೈಸ್ವಾಲ್ ಭಾರತದ ಪರ 9 ಟೆಸ್ಟ್ ಪಂದ್ಯಗಳ 16 ಇನ್ನಿಂಗ್ಸ್‌ಗಳಲ್ಲಿ 1028 ರನ್‌ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-25 ರಲ್ಲಿ ಅತಿ ಹೆಚ್ಚು ರನ್ ಸಾಧಕರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದಾರೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಮೊದಲ ಸ್ಥಾನದಲ್ಲಿದ್ದಾರೆ. ಭಾರತದ ನಾಯಕ ಗರಿಷ್ಠ ರನ್ ಗಳಿಸಿದವರಲ್ಲಿ 12 ನೇ ಸ್ಥಾನದಲ್ಲಿದ್ದಾರೆ. ರೋಹಿತ್ 16 ಇನ್ನಿಂಗ್ಸ್‌ಗಳಲ್ಲಿ 3 ಶತಕ ಮತ್ತು 3 ಅರ್ಧ ಶತಕ ಸೇರಿದಂತೆ 700 ರನ್ ಗಳಿಸಿದ್ದಾರೆ.

ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಸರಣಿಯಲ್ಲಿ ತಮ್ಮ ಸ್ಥಿರ ಆಟವನ್ನು ಆಡಿದರೆ ಇಬ್ಬರೂ ದೊಡ್ಡ ದಾಖಲೆಯನ್ನು ನಿರ್ಮಿಸಬಹುದು. ಯಶಸ್ವಿ ಜೈಸ್ವಾಲ್ ಚೆನ್ನೈನಲ್ಲಿ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರೆ, ದೊಡ್ಡ ದಾಖಲೆ ಬರೆಯಬಹುದು. ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಬಹುದು.
ಸುವರ್ಣ ಅವಕಾಶ
ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 60.76 ಸರಾಸರಿಯಲ್ಲಿ 1033 ರನ್ ಗಳಿಸಿದ್ದಾರೆ, ಇದರಲ್ಲಿ ಎರಡು ಶತಕಗಳು ಮತ್ತು ಐದು ಅರ್ಧಶತಕಗಳು ಸೇರಿವೆ. ಇವರಿಗೆ ಹಾಗೂ ಶ್ರೀಲಂಕಾದ ಪಾಥುಮ್ ನಿಸ್ಸಾಂಕಾ ಅವರಿಗೆ 102 ರನ್‌ಗಳ ಅಂತರವಿದೆ. ಪಾಥುಮ್ ನಿಸ್ಸಾಂಕಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ವರ್ಷ ಗರಿಷ್ಠ ರನ್ ಬಾರಿಸಿದ ಸಾಧಕ. ಪಾಥುಮ್ ನಿಸ್ಸಾಂಕಾ 23 ಪಂದ್ಯಗಳಲ್ಲಿ 1135 ರನ್ ಸಿಡಿಸಿದ್ದಾರೆ. 37 ವರ್ಷದ ರೋಹಿತ್‌ಗೆ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಲು 10 ರನ್ ಅಗತ್ಯವಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications