Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Yashasvi Jaiswal: ಚಾಂಪಿಯನ್ ಟ್ರೋಫಿ ಆಡಲು ಯಶಸ್ವಿ ಜೈಸ್ವಾಲ್ ತಯಾರು

ಭಾರತ ತಂಡದ ಯುವ ಸ್ಟಾರ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್ ಸದ್ದು ಮಾಡುತ್ತಿದ್ದಾರೆ. ಶತಕದ ಮೇಲೆ ಶತಕ ಸಿಡಿಸಿ ಜೈಸ್ವಾಲ್ ದಾಖಲೆಗಳನ್ನು ಮುರಿಯುಯತ್ತಿದ್ದಾರೆ. ಟೆಸ್ಟ್ ಮಾತ್ರವಲ್ಲದೆ, ಟಿ20 ಕ್ರಿಕೆಟ್‌ನಲ್ಲಿಯೂ ಭಾರತವನ್ನು ಜೈಸ್ವಾಲ್ ಪ್ರತಿನಿಧಿಸಿದ್ದು, ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಎಲ್ಲರ ಚಿತ್ತ ಕದ್ದಿದ್ದಾರೆ. ಇದೀಗ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದರ್ಪಣೆ ಮಾಡಲು ಸಜ್ಜಾಗಿದ್ದಾರೆ. ಮುಂಬರುವ ಚಾಂಪಿಯನ್ ಟ್ರೋಫಿ 2025ರ ಟೂರ್ನಿಯಲ್ಲಿ ಜೈಸ್ವಾಲ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ.

ಯಶಸ್ವಿ ಜೈಸ್ವಾಲ್ ಈಗಾಗಲೇ ಭಾರತದ ಟಿ20 ತಂಡದ ಭಾಗವಾಗಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಸ್ಟಾರ್ ಆರಂಭಿಕ ಬ್ಯಾಟರ್‌ಗಳ ಉಪಸ್ಥಿತಿಯಿಂದಾಗಿ ಅವರು ಟಿ20 ವಿಶ್ವಕಪ್‌ನಲ್ಲಿ ಒಂದೂ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಆದಾಗ್ಯೂ, ಏಕದಿನ ಮಾದರಿಯಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ 2025ರ ಟೂರ್ನಿಯಲ್ಲಿ ಭಾರತ ತಂಡಕ್ಕೆ ಜೈಸ್ವಾಲ್ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

Yashasvi Jaiswal prepares to play in the Champions Trophy 2025 tournament

ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಇದರ ಜೊತೆಗೆ ಅವರು ತಂಡಕ್ಕೆ ಉತ್ತಮ ಆರಂಭ ನೀಡುವ ಮೂಲಕ ರನ್ ಕಲೆ ಹಾಕುತ್ತಿದ್ದಾರೆ. ಎದುರಾಳಿ ಬೌಲರ್ ಯಾರೇ ಆಗಿದ್ದರೂ ತಮ್ಮ ಬಿರುಸಿನ ಬ್ಯಾಟಿಂಗ್ ಮೂಲಕ ದಂಡಿಸುವ ತಾಕತ್ತನ್ನು ಜೈಸ್ವಾಲ್ ಹೊಂದಿದ್ದಾರೆ. ಒಂದು ವೇಳೆ ಚಾಂಪಿಯನ್ ಟ್ರೋಫಿ 2025ರ ಟೂರ್ನಿಯಲ್ಲಿ ಜೈಸ್ವಾಲ್ ಆಡಿದರೆ, ಭಾರತ ಮತ್ತೊಂದು ಐಸಿಸಿ ಟ್ರೋಫಿ ಗೆಲ್ಲುವುದು ಫಿಕ್ಸ್.

ಚಾಂಪಿಯನ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಅಥವಾ ಶುಭ್‌ಮನ್ ಗಿಲ್ ಜೊತೆಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ತೆರೆಯಬಹುದು. ಇದಕ್ಕೂ ಮುನ್ನ ಜೈಸ್ವಾಲ್ ಅವರನ್ನು ತವರಿನಲ್ಲಿ ನಡೆಯಲಿರುವ ಇಂಗ್ಲೆಂಡ್ ಸರಣಿಯಲ್ಲಿ ಭಾರತ ಏಕದಿನ ತಂಡಕ್ಕೆ ಸೇರಿಸಿಕೊಳ್ಳಬಹುದು. ಈ ಮೂಲಕ ಅವರಿಗೆ ಚಾಂಪಿಯನ್ ಟ್ರೋಫಿಯಲ್ಲಿ ಆಡಲು ತಯಾರಿ ನಡೆಸಿದಂತಾಗುತ್ತದೆ.

ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದಾರೆ. ಅವರು ಆಡಿರುವ ಕೇವಲ 15 ಪಂದ್ಯಗಳಿಂದ 54.74 ಸರಾಸರಿಯಲ್ಲಿ 1478 ರನ್ ಕಲೆ ಹಾಕಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಪರ ಅತಿಹೆಚ್ಚು ಟೆಸ್ಟ್ ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ, ವಿಶ್ವದ ಎರಡನೇ ಎಂಬ ಸಾಧನೆಯನ್ನು ಮಾಡಿದ್ದಾರೆ.

Story first published: Wednesday, January 1, 2025, 22:18 [IST]
Other articles published on Jan 1, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+