Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Team India: ಟೀಮ್ ಇಂಡಿಯಾಗೆ ಹೊಸ 'ಗಬ್ಬರ್' ಎಂಟ್ರಿ!

'ಮಿಸ್ಟರ್ ಐಸಿಸಿ' ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟರ್ ಶಿಖರ್ ಧವನ್ ಕಳೆದ ವರ್ಷ ಎಲ್ಲಾ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದರು. ಅವರ ನಿರ್ಧಾರವು ಅನೇಕ ಅಭಿಮಾನಿಗಳಿಗೆ ಅಚ್ಚರಿ ತಂದಿತ್ತು. ಫೆಬ್ರವರಿ 19 ರಿಂದ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಶಿಖರ್ ಧವನ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದೆ. ಆದರೆ ಈಗ ಅವರ ಸ್ಥಾನ ತುಂಬಲು ಹೊಸ 'ಗಬ್ಬರ್' ಎಂಟ್ರಿ ಕೊಟ್ಟಿದ್ದಾರೆ. ಅವರು ಈಗಾಗಲೇ ಏಕದಿನ ಮಾದರಿ ಹೊರತುಪಡಿಸಿ, ಟಿ20 ಮತ್ತು
ಟೆಸ್ಟ್‌ನಲ್ಲಿ ಮಿಂಚಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶೀಘ್ರದಲ್ಲೇ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಿದೆ. ಆದರೆ ಅದಕ್ಕೂ ಮುನ್ನ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಈ ಮೆಗಾ ಟೂರ್ನಿಯಲ್ಲಿ ಶಿಖರ್ ಧವನ್ ಸ್ಥಾನ ತುಂಬಲು ಯುವ ಆಟಗಾರ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ರೆಡಿಯಾಗಿದ್ದಾರೆ.

Yashasvi Jaiswal ready to replace Shikhar Dhawan in Team India

ಶಿಖರ್ ಧವನ್ ನಿವೃತ್ತಿ ಬಳಿಕ ಟೀಮ್ ಇಂಡಿಯಾ ಎಡಗೈ ಆರಂಭಿಕ ಬ್ಯಾಟರ್‌ಗಾಗಿ ಹುಡುಕಾಟ ನಡೆಸಿತ್ತು. ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ಅಭಿಮಾನಿಗಳು ಖಂಡಿತವಾಗಿಯೂ 'ಗಬ್ಬರ್' ಅನ್ನು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಶಿಖರ್ ಧವನ್ ಸ್ಥಾನವನ್ನು ಯಶಸ್ವಿ ಜೈಸ್ವಾಲ್ ತುಂಬಲಿದ್ದಾರೆ. ವರದಿಗಳ ಪ್ರಕಾರ, ಜೈಸ್ವಾಲ್ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡುವುದು ಖಚಿತ.

ಯಶಸ್ವಿ ಜೈಸ್ವಾಲ್ ಇದುವರೆಗೆ ಟೀಮ್ ಇಂಡಿಯಾ ಪರ ಟಿ20 ಮತ್ತು ಟೆಸ್ಟ್ ಮಾದರಿಯಲ್ಲಿ ಅಬ್ಬರಿಸಿದ್ದಾರೆ. ಎರಡರಲ್ಲೂ ಯಶಸ್ವಿ ತಂಡದ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅವಕಾಶ ಸಿಕ್ಕರೆ ಅದು ಗೋಲ್ಡನ್ ಚಾನ್ಸ್ ಗಿಂತ ಕಡಿಮೆಯಿಲ್ಲ. ಜೈಸ್ವಾಲ್ ಟೆಸ್ಟ್‌ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಟಿ20ಯಲ್ಲಿ ಆರಂಭಿಕ ಬ್ಯಾಟರ್‌ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದೀಗ ಏಕದಿನ ಮಾದರಿ ಮೇಲೆ ಜೈಸ್ವಾಲ್ ಕಣ್ಣಿಟ್ಟಿದ್ದು, ರನ್ ಹೊಳೆ ಹರಿಸಲು ಸಜ್ಜಾಗುತ್ತಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದೆ. ಭಾರತ ತಂಡ ಫೆಬ್ರವರಿ 22 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಉಳಿದ ತಂಡಗಳ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟಿ20 ಹಾಗೂ ಏಕದಿನ ಸರಣಿ ಆಡಲಿದೆ. ಈ ಸರಣಿಯಲ್ಲಿ ಜೈಸ್ವಾಲ್ ಟೀಮ್ ಇಂಡಿಯಾ ಪರ ಆಡಲಿದ್ದಾರೆಯೇ? ಅಥವಾ ಇಲ್ಲವೇ ಎಂಬುದು ಕುತೂಹಲಕಾರಿಯಾಗಿದೆ.

Story first published: Thursday, January 9, 2025, 8:01 [IST]
Other articles published on Jan 9, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+