Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Test Championship: ರೋಹಿತ್ ಶರ್ಮಾ ಹಿಂದಿಕ್ಕಿ ಯಶಸ್ವಿ ಜೈಸ್ವಾಲ್ ದಾಖಲೆ

ಭಾರತ ತಂಡದ ಯುವ ಎಡಗೈ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯೂಟಿಸಿ) ಅಬ್ಬರಿಸುತ್ತಿದ್ದಾರೆ. ಬಾಂಗ್ಲಾದೇಶ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಬಿರುಸಿನ ಬ್ಯಾಟಿಂಗ್ ಮಾಡುವ ಮೂಲಕ ಬಾಂಗ್ಲಾದೇಶದ ಬೌಲರ್‌ಗಳನ್ನು ಕಂಗೆಡಿಸಿದ್ದಾರೆ. ಇದರೊಂದಿಗೆ ಡಬ್ಲ್ಯೂಟಿಸಿನಲ್ಲಿ ಅವರು ದಾಖಲೆಯನ್ನೂ ನಿರ್ಮಿಸಿದ್ದಾರೆ.

Yashasvi Jaiswal record overtaking Rohit Sharma in the World Test Championship

ಯಶಸ್ವಿ ರೆಕಾರ್ಡ್‌

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025ರ ಆವೃತ್ತಿಯಲ್ಲಿ ಯಶಸ್ವಿ ಜೈಸ್ವಾಲ್ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಜೈಸ್ವಾಲ್ ಬ್ಯಾಟ್‌ನಿಂದ ಇಲ್ಲಿಯವರೆಗೆ 32 ಸಿಕ್ಸರ್ ಬಂದಿವೆ. ಈಗ ತಮ್ಮದೇ ತಂಡದ ನಾಯಕ ರೋಹಿತ್ ಶರ್ಮಾ ಅವರಿಗಿಂತ ಮುಂದೆ ಹೋಗಿದ್ದಾರೆ. ಡಬ್ಲ್ಯೂಟಿಸಿನಲ್ಲಿ ಅತಿಹೆಚ್ಚು ಸಿಕ್ಸರ್ ಹೊಡೆದ ಪೈಕಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಎರಡನೇ ಸ್ಥಾನದಲ್ಲಿದ್ದು, ಒಟ್ಟು 22 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಶ್ರೀಲಂಕಾದ ಕಮಿಂದು ಮೆಂಡಿಸ್ 19 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ನಾಲ್ಕನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಹೆಸರಿನಲ್ಲಿ ಒಟ್ಟು 17 ಸಿಕ್ಸರ್‌ಗಳಿವೆ. ಈ ಪಟ್ಟಿಯ ಐದನೇ ಸ್ಥಾನದಲ್ಲಿ ಭಾರತದ ಮತ್ತೊಬ್ಬ ಬ್ಯಾಟರ್‌ ಇದ್ದಾರೆ. ಅವರು ಬೇರೆ ಯಾರೂ ಅಲ್ಲ, ಶುಭ್‌ಮನ್ ಗಿಲ್. ಗಿಲ್ 16 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಗಿಲ್ ಜೊತೆಗೆ, ನ್ಯೂಜಿಲೆಂಡ್‌ನ ಗ್ಲೆನ್ ಫಿಲಿಪ್ಸ್ ಕೂಡ 16 ಸಿಕ್ಸರ್‌ಗಳೊಂದಿಗೆ ಜಂಟಿ ಐದನೇ ಸ್ಥಾನದಲ್ಲಿದ್ದಾರೆ.

ಅಕ್ಟೋಬರ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತತಂಡವು ನ್ಯೂಜಿಲೆಂಡ್ ವಿರುದ್ಧ ಹಾಗು ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸಂದರ್ಭದಲ್ಲಿ ಯಶಸ್ವಿ ಜೈಸ್ವಾಲ್ ಅವರು ಇನ್ನಷ್ಟು ಅದ್ಭುತವಾಗಿ ಆಡುವ ಮೂಲಕ ಸಿಕ್ಸರ್‌ಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಅವಕಾಶವನ್ನು ಹೊಂದಿದ್ದು, ತಮ್ಮ ದಾಖಲೆಯನ್ನು ಮತ್ತಷ್ಟು ಭದ್ರ ಮಾಡಿಕೊಳ್ಳಬಹುದಾಗಿದೆ.

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯ ಭಾರತ ತಂಡದಿಂದ ಯಶಸ್ವಿ ಜೈಸ್ವಾಲ್ ಅವರನ್ನು ಕೈ ಬಿಡಲಾಗಿದೆ. ಕೆಲಸದ ನಿರ್ವಹವಣೆ ಕಡಿಮೆ ಮಾಡಲು ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಗೆ ಜೈಸ್ವಾಲ್ ಸಜ್ಜಾಗುತ್ತಿದ್ದಾರೆ. ಈ ಸರಣಿಯನ್ನು ಟೀಮ್ ಇಂಡಿಯಾ ಗೆಲ್ಲಲೇ ಬೇಕಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಭಾರತಕ್ಕೆ ಸುಲಭವಾಗಲಿದೆ.

Story first published: Wednesday, October 2, 2024, 19:27 [IST]
Other articles published on Oct 2, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+