ಕ್ರಿಕೆಟ್‌ನ ನಿಜವಾದ ಸ್ವರೂಪವೇ ಟೆಸ್ಟ್: ಚೊಚ್ಚಲ ಟೆಸ್ಟ್ ಆಡಲು ಸಿದ್ಧವಾದ ಜೈಸ್ವಾಲ್ ಹೇಳಿಕೆ
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲು ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸಿದ್ದವಾಗಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಜೈಸ್ವಾಲ್. ಡೊಮೆನಿಕಾದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜೈಸ್ವಾಲ್ ಟೆಸ್ಟ್ ಮಾದರಿ ಕ್ರಿಕೆಟ್‌ನ ನೈಜವಾದ ಸ್ವರೂಪ ಎಂದಿದ್ದಾರೆ.
ಟೆಸ್ಟ್ ಮಾದರಿ ಕ್ರಿಕೆಟ್‌ನ ಪರಿಶುದ್ಧವಾದ ಮಾದರಿ ಎಂದಿರುವ ಯಶಸ್ವಿ ಜೈಸ್ವಾಲ್ ಈ ಸುದೀರ್ಘ ಮಾದರಿಯಲ್ಲಿ ಆಡುವುದನ್ನು ತಾನು ಯಾವಾಗಲೂ ಬಯಸುತ್ತೇನೆ ಎಂದಿದ್ದಾರೆ. ಕಳೆದ ಎರಡ್ಮೂರು ಆವೃತ್ತಿಗಳಲ್ಲಿ ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಅದ್ಭುತವಾದ ಪ್ರದರ್ಶನ ನೀಡುತ್ತಿರುವ ಜೈಸ್ವಾಲ್ ಎಲ್ಲರ ಗಮನಸೆಳಯುವಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಕಳೆದ ಆವೃತ್ತಿಯಲ್ಲಿ ಆಡಿದ 14 ಪಂದ್ಯಗಳಲ್ಲಿ 625 ರನ್‌ಗಳನ್ನು ಗಳಿಸುವ ಮೂಲಕ ಜೈಸ್ವಾಲ್ ಹಲವು ದಾಖಲೆಗಳನ್ನು ಕೂಡ ಮುರಿದಿದ್ದಾರೆ.

ಇನ್ನು ದೇಶೀಯ ಕ್ರಿಕೆಟ್‌ನಲ್ಲಿ ಜೈಸ್ವಾಲ್ ಕೇವಲ 15 ಪಂದ್ಯಗಳನ್ನು ಆಡಿದ್ದು ಇದರಲ್ಲಿ 80ಕ್ಕೂ ಅಧಿಕ ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ. ಇದರಲ್ಲಿ 9 ಶತಕ ಸಿಡಿಸಿರುವ ಜೈಸ್ವಾಲ್ ಅವರು 265 ರನ್‌ಗಳಿಸಿರುವುದು ಅತಿ ಹೆಚ್ಚಿನ ಸ್ಕೋರ್ ಎನಿಸಿಕೊಂಡಿದೆ. ಇವರ ಈ ಅತ್ಯುತ್ತಮ ಪ್ರದರ್ಶನಕ್ಕೆ ಈಗ ತಕ್ಕನಾದ ಮೌಲ್ಯ ದೊರೆಯಲಿದ್ದು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಬಿಸಿಸಿಐ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ್ದ ಜೈಸ್ವಾಲ್ ವೆಸ್ಟ್ ಇಂಡಿಸ್ ಪ್ರವಾಸಕ್ಕೆ ಆಯ್ಕೆಯಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. "ನನಗೆ ಬಹಳ ಸಂತಸವಾಗುತ್ತಿದೆ. ನನ್ನ ಪ್ರಕಾರ ಟೆಸ್ಟ್ ಮಾದರಿ ಕ್ರಿಕೆಟ್‌ನ ನೈಜವಾದ ಮಾದರಿ. ನಾನು ಬೆಳೆಯುತ್ತಿದ್ದಾಗ ಯಾವಾಗಲೂ ಟೆಸ್ಟ್ ಮಾದರಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು ಎಂದು ಬಯಸಿದ್ದೆ. ನಾನು ಭಾರತ ತಂಡಕ್ಕೆ ಆಯ್ಕೆಯಾಗುತ್ತಿದ್ದೇನೆ ಎಂಬುದು ತಿಳಿದಾಗ ಅದು ನನಗೆ ದೊರೆತ ದೊಡ್ಡ ಗೌರವ. ನಾನು ಯಾವಾಗಲೂ ಟೆಸ್ಟ್ ತಂಡದಲ್ಲಿರಲು ಬಯಸುತ್ತೇನೆ. ಅದರ ಜೊತೆಗೆ ಟಿ20 ತಂಡ ಕೂಡ" ಎಂದಿದ್ದಾರೆ ಜೈಸ್ವಾಲ್.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications