Yashasvi Jaiswal: 2024ರ ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಅದ್ಭುತ ಸಾಧನೆ
ಭಾರತ ತಂಡದ ಸ್ಟಾರ್ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸಿಕ್ಕ ಅವಕಾಶಗಳಲ್ಲಿ ಅಮೋಘ ಆಟವಾಡುತ್ತಾ ಗಮನ ಸೆಳೆದಿದ್ದಾರೆ. ಅವರು ಈಗಾಗಲೇ ಟೆಸ್ಟ್ ಮತ್ತು ಟಿ20 ಕ್ರಿಕೆಟ್‌ನಲ್ಲಿ ಭಾರತ ಪರ ಕಾಣಿಸಿಕೊಂಡಿದ್ದಾರೆ. ಸ್ಪೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಅವರು ಹಲವು ದಾಖಲೆಗಳನ್ನು ಕಡಿಮೆ ಅವಧಿಯಲ್ಲಿ ಮಾಡಿದ್ದಾರೆ.
ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹೊಸ ಸಾಧನೆ ಮಾಡಿದ್ದಾರೆ. ಪುಣೆ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ 30 ರನ್ ಗಳಿಸುವ ಮೂಲಕ 2024ರ ಟೆಸ್ಟ್ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿದ್ದಾರೆ. ಇದರೊಂದಿಗೆ 2024ರ ಟೆಸ್ಟ್ ಕ್ರಿಕೆಟ್‌ನಲ್ಲಿ 1000 ರನ್ ಗಳಿಸಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆ ಜೈಸ್ವಾಲ್ ಪಾತ್ರರಾಗಿದ್ದಾರೆ.

ಇಂಗ್ಲೆಂಡ್‌ನ ಜೋ ರೂಟ್ 2024ರ ಟೆಸ್ಟ್ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿದ ಏಕೈಕ ಬ್ಯಾಟರ್ ಆಗಿ ಉಳಿದಿದ್ದರು. ಇದೀಗ ಈ ಸಾಲಿಗೆ ಯಶಸ್ವಿ ಜೈಸ್ವಾಲ್ ಸೇರ್ಪಡೆಗೊಂಡಿದ್ದಾರೆ. ಈ ವರ್ಷ ಅದ್ಭುತ ಲಯದಲ್ಲಿ ಕಾಣಿಸಿಕೊಂಡಿರುವ ರೂಟ್ ಶತಕದ ಮೇಲೆ ಶತಕ ಬಾರಿಸುತ್ತಿದ್ದಾರೆ. ಅವರು ಈ ವರ್ಷ 14 ಟೆಸ್ಟ್‌ಗಳನ್ನು ಆಡಿದ್ದು, 59.31 ಸರಾಸರಿಯಲ್ಲಿ 5 ಶತಕಗಳು ಮತ್ತು 4 ಅರ್ಧ ಶತಕಗಳೊಂದಿಗೆ 1305 ರನ್‌ಗಳನ್ನು ಕಲೆ ಹಾಕಿದ್ದಾರೆ. ಇತ್ತೀಚೆಗೆ ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನದ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಪಂದ್ಯ ರೂಟ್ 262 ರನ್‌ಗಳು ಬಾರಿಸುವ ಮೂಲಕ ದಾಖಲೆ ಬರೆದಿದ್ದರು. ಇದು ಅವರ ಟೆಸ್ಟ್ ವೃತ್ತಿಜೀವನದ ಗರಿಷ್ಠ ಸ್ಕೋರ್ ಆಗಿದೆ.
ಸ್ಪೋಟಕ ಬ್ಯಾಟಿಂಗ್
ಈ ವರ್ಷ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿಜೀವನದ 9ನೇ ಟೆಸ್ಟ್ ಪಂದ್ಯ ಆಡುತ್ತಿದ್ದಾರೆ. ಇದರಲ್ಲಿ ಆಫ್ರಿಕಾ ವಿರುದ್ಧ 1, ಇಂಗ್ಲೆಂಡ್ ವಿರುದ್ಧ 5 ಮತ್ತು ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್ ಪಂದ್ಯಗಳು ಸೇರಿವೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ 9 ಇನ್ನಿಂಗ್ಸ್‌ಗಳಲ್ಲಿ 3 ಅರ್ಧ ಶತಕ ಮತ್ತು 2 ದ್ವಿಶತಕ ಸೇರಿದಂತೆ 712 ರನ್ ಗಳಿಸಿದ್ದರು.ಈ ವರ್ಷ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ರನ್ ಹೊಡೆದ ದಾಖಲೆಯನ್ನು ಹೊಂದಿದ್ದಾರೆ.
ಇದಲ್ಲದೆ, ಜೈಸ್ವಾಲ್ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 3 ಅರ್ಧಶತಕಗಳನ್ನು ಗಳಿಸಿದ್ದಾರೆ. ಆದರೆ ಪ್ರಸ್ತುತ ಆಡುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂರು ಇನ್ನಿಂಗ್ಸ್‌ಗಳಲ್ಲಿ 13, 35 ಮತ್ತು 30 ರನ್ ಕಲೆ ಹಾಕಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications