Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Yashasvi Jaiswal: ಬ್ರೆಂಡನ್ ಮೆಕಲಮ್ ದಾಖಲೆ ಅಳಿಸಿ ಹಾಕುವ ತವಕದಲ್ಲಿ ಜೈಸ್ವಾಲ್!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ ಮತ್ತು ಮೂರನೇ ಟೆಸ್ಟ್ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈಗಾಗಲೇ ಕಿವೀಸ್ ಪಡೆ ಎದುರು ಟೀಮ್ ಇಂಡಿಯಾ ಸರಣಿ ಸೋತಿದೆ.

ಬೆಂಗಳೂರಿನ ವೇಗದ ಪಿಚ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ 8 ವಿಕೆಟ್‌ಗಳ ಜಯ ಸಾಧಿಸಿದ್ದು, ಆ ಬಳಿಕ ಪುಣೆಯ ಸ್ಪಿನ್ ಪಿಚ್‌ನಲ್ಲಿ 113 ರನ್ ಗಳಿಂದ ಭಾರತ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು ಬೀಗಿದೆ.

Yashasvi Jaiswal who will break Brendon McCullum record in Test Cricket

ತವರಿನಲ್ಲಿ ಭಾರತವನ್ನು ಸೋಲಿಸಿ ಮೊದಲ ಬಾರಿಗೆ ಕಿವೀಸ್ ಪಡೆ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ಸ್ಟಾರ್ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದೀಗ ಅವರು ವಾಂಖೆಂಡೆಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಯಶಸ್ವಿ ಜೈಸ್ವಾಲ್ ದಾಖಲೆ

ಪುಣೆ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಅದ್ಭುತ ಪ್ರದರ್ಶನ ನೀಡಿದ್ದರು. ಅವರು ಎರಡನೇ ಇನ್ನಿಂಗ್ಸ್‌ನಲ್ಲಿ 65 ಎಸೆತಗಳಲ್ಲಿ 77 ರನ್ ಗಳಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ ಯಶಸ್ವಿ 3 ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇದೀಗ ವಾಂಖೆಂಡ್‌ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ ನ್ಯೂಜಿಲೆಂಡ್ ಮಾಜಿ ಬ್ಯಾಟರ್ ಹಾಗು ಇಂಗ್ಲೆಂಡ್ ತಂಡದ ಹೆಡ್‌ಕೋಚ್ ಬ್ರೆಂಡನ್ ಮೆಕಲಮ್ ದಾಖಲೆಯನ್ನು ಮುರಿಯಲಿರುವ ಸನಿಹದಲ್ಲಿದ್ದಾರೆ.

ಒಂದು ವರ್ಷದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಜೈಸ್ವಾಲ್ ಎರಡನೇ ಸ್ಥಾನದಲ್ಲಿದ್ದಾರೆ. 2024ರಲ್ಲಿ ಜೈಸ್ವಾಲ್ 31 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. 2014ರಲ್ಲಿ ಬ್ರೆಂಡನ್ ಮೆಕಲಮ್ 9 ಟೆಸ್ಟ್ ಪಂದ್ಯಗಳಲ್ಲಿ 33 ಸಿಕ್ಸರ್‌ಗಳನ್ನು ಬಾರಿಸಿದ್ದರು.

ಇದೀಗ ವಾಂಖೆಂಡೆ ಟೆಸ್ಟ್ ನಲ್ಲಿ ಜೈಸ್ವಾಲ್ 3 ಸಿಕ್ಸರ್ ಬಾರಿಸುವಲ್ಲಿ ಯಶಸ್ವಿಯಾದರೆ ಮೆಕಲಮ್ ಅವರನ್ನು ಹಿಂದಿಕ್ಕಲಿದ್ದಾರೆ. ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ ನಾಯಕ ಬೆನ್ ಸ್ಟೋಕ್ಸ್ ಅವರು 2022ರಲ್ಲಿ 26 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಸಾಧನೆ

2023ರ ಜುಲೈ ತಿಂಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಭಾರತದ ಪರ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನೂ ಮಾಡಿದ್ದಾರೆ. ಈ ವರ್ಷ ಆರಂಭದಲ್ಲಿ ರಾಜ್‌ಕೋಟ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಜೈಸ್ವಾಲ್ 214 ರನ್‌ಗಳನ್ನು ಬಾರಿಸಿದ್ದರು.

ಈ ವೇಳೆ 12 ಸಿಕ್ಸರ್‌ಗಳನ್ನು ಹೊಡೆಯುವ ಮೂಲಕ ಎಲ್ಲರ ಚಿತ್ತ ಕದ್ದಿದ್ದರು. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ 9 ಇನ್ನಿಂಗ್ಸ್‌ಗಳಲ್ಲಿ 3 ಅರ್ಧ ಶತಕ ಮತ್ತು 2 ದ್ವಿಶತಕ ಸೇರಿದಂತೆ 712 ರನ್ ಗಳಿಸಿದ್ದರು. ಈ ವರ್ಷ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ರನ್ ಹೊಡೆದ ದಾಖಲೆಯನ್ನು ಹೊಂದಿದ್ದಾರೆ.

Story first published: Monday, October 28, 2024, 17:08 [IST]
Other articles published on Oct 28, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+