PBKS vs RR IPL 2025: ತವರಿನಲ್ಲಿ ಪಂಜಾಬ್ ಜಯದ ಓಟಕ್ಕೆ ಬ್ರೇಕ್ ಹಾಕಿದ ರಾಯಲ್ಸ್
ಭರವಸೆಯ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಬಾರಿಸಿದ ಅರ್ಧಶತಕ ಹಾಗೂ ಬೌಲರ್‌ಗಳ ಸಂಘಟಿತ ದಾಳಿಯ ನೆರವಿನಿಂದ 18ನೇ ಆವೃತ್ತಿಯ 18ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದೆ. ಈ ಮೂಲಕ ಆತಿಥೇಯ ಪಂಜಾಬ್ ಕಿಂಗ್ಸ್ ತಂಡದ ಹ್ಯಾಟ್ರಿಕ್ ಗೆಲುವಿನ ಕನಸು ನುಚ್ಚುನೂರಾಗಿದೆ. ರಾಜಸ್ಥಾನ ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿತು.
ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 205 ರನ್ ಸೇರಿಸಿತು. ಸವಾಲಿನ ಮೊತ್ತವನ್ನು ಹಿಂಬಾಲಿಸಿದ ಪಂಜಾಬ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಕಲೆ ಹಾಕಿ ಸೋಲು ಕಂಡಿದೆ. ಈ ಸೋಲಿನಿಂದ ಪಂಜಾಬ್ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಕಳಪೆ ಆರಂಭ
ಸವಾಲಿನ ಮೊತ್ತವನ್ನು ಹಿಂಬಾಲಿಸಿದ ಪಂಜಾಬ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಪ್ರಿಯಾಂಶ್ ಆರ್ಯ ಆಡಿದ ಮೊದಲ ಎಸೆತದಲ್ಲಿ ಸುಸ್ತಾದ್ರು. ಇನ್ನೊಬ್ಬ ಆರಂಭಿಕ ಆಟಗಾರ ಪ್ರಭಸಿಮ್ರನ್ ಸಿಂಗ್ (17), ಲೀಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಅಯ್ಯರ್ (10) ತಮ್ಮ ಜವಾಬ್ದಾರಿಯನ್ನು ಮರೆತರು. ಆಲ್‌ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಬಂದು ಹೋಗುವ ಸಂಪ್ರದಾಯ ಮುಗಿಸಿದರು.
43 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನೆಹಾಲ್ ವಧೆರಾ, ಗ್ಲೇನ್ ಮ್ಯಾಕ್ಸ್‌ವೆಲ್ ಅಮೋಘ ಜೊತೆಯಾಟವನ್ನು ನೀಡಿತು. ಈ ಜೋಡಿ ವಿಕೆಟ್ ಬೀಳದಂತೆ ಕಾಯ್ದುಕೊಂಡು ಬಿಗ್ ಇನಿಂಗ್ಸ್ ಆಡುತ್ತಾ ಸಾಗಿತು. ಈ ಜೋಡಿ 52 ಎಸೆತಗಳಲ್ಲಿ 88 ರನ್ ಸೇರಿಸಿ ಅಬ್ಬರಿಸಿತು. ಈ ವೇಳೆ ಪಂಜಾಬ್ ಗೆಲುವು ಸಾಧಿಸಬಹುದು ಎಂಬ ಲೆಕ್ಕಾಚಾರ ಆರಂಭವಾಗಿತ್ತು.

ಗ್ಲೇನ್ ಮ್ಯಾಕ್ಸ್‌ವೆಲ್ 30 ರನ್ ಬಾರಿಸಿದ್ದಾಗ ಇಲ್ಲದ ಶಾಟ್‌ಗೆ ವಿಕೆಟ್ ಒಪ್ಪಿಸಿದರು. ಇವರು 21 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಿಡಿಸಿದ್ದರು, ನೆಹಾಲ್ ವಧೆರಾ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 62 ಬಾರಿಸಿ ಹಸರಾಂಗ ಎಸೆತದಲ್ಲಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಪಂಜಾಬ್ ಟೂರ್ನಿಯಲ್ಲಿ ಮೊದಲ ಸೋಲು ಕಂಡಿದೆ.
ಭರ್ಜರಿ ಆರಂಭ
ಟಾಸ್ ಸೋತರು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ಉತ್ತಮ ಆರಂಭವನ್ನು ಪಡೆಯಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಸಂಜು ಸ್ಯಾಮ್ಸನ್ ಜೋಡಿ ಮೊದಲ ವಿಕೆಟ್‌ಗೆ 89 ರನ್‌ಗಳ ಜೊತೆಯಾಟವನ್ನು ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕಲುವಲ್ಲಿ ಪಂಜಾಬ್ ಬೌಲರ್‌ಗಳು ವಿಫಲರಾದರು. ಸಂಜು ಸ್ಯಾಮ್ಸನ್ 38 ರನ್‌ಗಳಿಗೆ ಆಟ ಮುಗಿಸಿದರು. ಆರಂಭಿಕ ಯಶಸ್ವಿ ಜೈಸ್ವಾಲ್ ಕಳೆದ ಕೆಲವು ಪಂದ್ಯಗಳಲ್ಲಿ ಮಾಡಿದ್ದ ತಪ್ಪನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದರು. ಇವರು 45 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸಹಾಯದಿಂದ 67 ರನ್ ಸಿಡಿಸಿ ಔಟ್ ಆದರು.

ನಿತೀಶ್ ರಾಣಾ (12) ಜವಾಬ್ದಾರಿಯನ್ನು ಮರೆತರು. ಮಧ್ಯಮ ಕ್ರಮಾಂಕದಲ್ಲಿ ಶಿಮ್ರೋನ್ ಹೆಟ್ಮೆಯರ್ (20) ಹಾಗೂ ರಿಯಾನ್ ಪರಾಗ್ ಜೋಡಿ 4 ವಿಕೆಟ್‌ಗೆ 25 ಎಸೆತಗಳಲ್ಲಿ 47 ರನ್ ಸಿಡಿಸಿತು. ಭರವಸೆಯ ಆಟಗಾರ ರಿಯಾನ್ ಪರಾಗ್ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 43 ರನ್ ಬಾರಿಸಿದರು. ಧ್ರುವ್ ಜುರೇಲ್ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 13 ರನ್ ಬಾರಿಸಿದರು.
ಪಂಜಾಬ್ ಪರ ಲಾಕಿ ಫಾರ್ಗ್ಯುಸನ್ 2 ವಿಕೆಟ್, ಅರ್ಷದೀಪ್ ಸಿಂಗ್ ಹಾಗೂ ಮಾರ್ಕೊ ಜಾನ್ಸನ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications