Yashasvi Jaiswal: ಇಂಗ್ಲೆಂಡ್‌ನಲ್ಲಿ ಶತಕ ಬಾರಿಸಿ ಅಬ್ವರಿಸಿದ ಯಶಸ್ವಿ ಜೈಸ್ವಾಲ್
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಲೀಡ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿ ಸುಸ್ಥಿತಿಯತ್ತ ಹೆಜ್ಜೆ ಹಾಕಿದೆ. ಈ ವೇಳೆ ಟೀಮ್ ಇಂಡಿಯಾದ ಆರಂಭಿಕರು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದಾರೆ. ಆರಂಭಿಕ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ಬೌಲರ್‍ಗಳನ್ನು ಕಾಡಿ ಅಬ್ಬರಿಸಿದ್ದಾರೆ.
ಭಾರತದಲ್ಲಿ ಇಂಗ್ಲೆಂಡ್ ಬೌಲರ್‍ಗಳ ವಿರುದ್ಧ ರನ್ ಮಹಲ್ ಕಟ್ಟಿದ್ದ ಯಶಸ್ವಿ, ಎದುರಾಳಿ ತವರಿನಲ್ಲೂ ಇದೇ ಆರ್ಭಟ ಮುಂದುವರೆಸಿದ್ದಾರೆ. ಇವರು ಕ್ಲಾಸಿಕ್ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಿದ್ದಾರೆ. ಯಶಸ್ವಿ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಆರ್ಭಟಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ಶತಕ ಬಾರಿಸಿದ ಮೊದಲ ಎಡಗೈ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಯಶಸ್ವಿ ಲೀಡ್ಸ್ ಅಂಗಳದಲ್ಲಿ ಲೀಲಾ ಜಾಲವಾಗಿ ಬ್ಯಾಟಿಂಗ್ ಮಾಡಿದರು. ಇವರ ಆಟಕ್ಕೆ ಬ್ರೇಕ್ ಹಾಕುವಲ್ಲಿ ಬೆನ್ ಸ್ಟೋಕ್ಸ್ ಪಡೆ ವಿಫಲವಾಯಿತು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್‌ಗೆ ಮಣೆ ಹಾಕಿದ ಯಶಸ್ವಿ ಜೈಸ್ವಾಲ್ ಕೊನೆಗೆ ಆರ್ಭಟಿಸಿದರು. ಈ ಮೂಲಕ ಇಂಗ್ಲೆಂಡ್‌ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಎಡಗೈ ಆಟಗಾರ ಎಂಬ ಶ್ರೇಯಕ್ಕೆ ಪಾತ್ರರಾದರು. ಯಶಸ್ವಿ 159 ಎಸೆತಗಳಲ್ಲಿ 16 ಬೌಂಡರಿ, 1 ಸಿಕ್ಸರ್ ಸಹಾಯದಿಂದ 101 ರನ್ ಬಾರಿಸಿ ಮಿಂಚಿದರು.
ದಾಖಲೆ ಬರೆದ ಯಶಸ್ವಿ
ಯಶಸ್ವಿ ಜೈಸ್ವಾಲ್ ಜೋಡಿ ಕೆಎಲ್ ರಾಹುಲ್ ಜೊತೆಗೆ ತಂಡಕ್ಕೆ ಉತ್ತಮ ಆರಂಭ ನೀಡಿದರು. ಮತ್ತು ನಂತರ ನಾಯಕ ಶುಭಮನ್ ಗಿಲ್ ಜೊತೆಗೆ, ಅವರು ಮೂರನೇ ವಿಕೆಟ್‌ಗೆ 100 ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವನ್ನು ನೀಡುವಲ್ಲಿ ಸಫಲವಾಯಿತು. ಜೈಸ್ವಾಲ್ ತಮ್ಮ ಇನ್ನಿಂಗ್ಸ್‌ನಲ್ಲಿ 88 ರನ್‌ಗಳನ್ನು ಪೂರ್ಣಗೊಳಿಸಿದ ತಕ್ಷಣ, ಈ ಮೈದಾನದಲ್ಲಿ ಭಾರತದ ಬ್ಯಾಟರ್ ಅತಿ ಹೆಚ್ಚು ರನ್ ಬಾರಿಸಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು. ಈ ಮೊದಲು ಈ ದಾಖಲೆ 1967ರಲ್ಲಿ ಭಾರತದ ಫಾರೂಕ್ ಎಂಜಿನಿಯರ್ 87 ರನ್ ಸಿಡಿಸಿ ಮಿಂಚಿದ್ದರು. ಈ ದಾಖಲೆಯನ್ನು ಯಶಸ್ವಿ ಅಳಿಸಿ ಹಾಕಿದರು.

ಆರಂಭಿಕರಾಗಿ ಸಾಧನೆ
ಲೀಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 50ಕ್ಕೂ ಹೆಚ್ಚು ರನ್ ಬಾರಿಸಿದ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್‌ನಲ್ಲಿ ಭಾರತದ ಪರ ಆರಂಭಿಕರಾಗಿ ಅರ್ಧಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಈ ಮೂಲಕ ಜೈಸ್ವಾಲ್ ರವಿಶಾಸ್ತ್ರಿ ಮತ್ತು ಸುನಿಲ್ ಗವಾಸ್ಕರ್ ಅವರ ವಿಶೇಷ ಕ್ಲಬ್‌ಗೆ ಸೇರಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications