For Quick Alerts
ALLOW NOTIFICATIONS  
For Daily Alerts
 

2025ರಲ್ಲಿ ಅಭಿಮಾನಿಗಳ ಮನಗೆದ್ದ ಟಾಪ್‌ 5 ಪಂದ್ಯಗಳು!

ಟೀಮ್ ಇಂಡಿಯಾ ಅಭಿಮಾನಿಗಳಿಗೆ ಈ ವರ್ಷ ಬಹುವಾಗಿ ನೆನಪಿಡುವ ವರ್ಷ. ಈ ವರ್ಷದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದೆ. ಈ ವೇಳೆ ಹಲವು ಪಂದ್ಯಗಳು ಅಭಿಮಾನಿಗಳ ಮನದಲ್ಲಿ ಶಾಶ್ವತವಾಗಿ ಮನಸ್ಸಿನಲ್ಲಿ ಉಳಿದಿವೆ. ಈ ವರ್ಷ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದಿರುವ ಐದು ಪಂದ್ಯಗಳ ಮಾಹಿತಿ ಇಲ್ಲಿದೆ.

ಟೀಮ್ ಇಂಡಿಯಾ ಅಭಿಮಾನಿಗಳ ಮನದಲ್ಲಿ ಹೆಚ್ಚು ದಿನಗಳ ಕಾಲ ಶಾಶ್ವತವಾಗಿ ಉಳಿಯುವ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ವನಿತೆಯರ ನಡುವಣ ಏಕದಿನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯವೂ ಒಂದಾಗಿದೆ. ಈ ಪಂದ್ಯದಲ್ಲಿ ಹರ್ಮನ್ ಪ್ರೀತ್ ಪಡೆ ಆಡಿದ ಧಾಟಿ ಅಭಿಮಾನಿಗಳ ಮನಸ್ಸಿನಲ್ಲಿ ಶಾಶ್ವತವಾಗಿದೆ. ಮಹಿಳಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 49.5 ಓವರ್‌ಗಳಲ್ಲಿ 338 ರನ್‌ಗೆ ಆಲೌಟ್ ಆಯಿತು.

Year of Glory Five Iconic Matches That Defined Team India s Unforgettable Dominance in 2025

339 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. 59 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಹರ್ಮನ್‌ ಪ್ರೀತ್‌ ಕೌರ್‌ (89) ಹಾಗೂ ಜೆಮಿಮಾ ತಂಡಕ್ಕೆ ಆಧಾರವಾದರು. 3ನೇ ವಿಕೆಟ್‌ಗೆ ಈ ಜೋಡಿ 156 ಎಸೆತಗಳಲ್ಲಿ 167 ರನ್‌ ಬಾರಿಸಿತು. ಈ ಪಂದ್ಯದಲ್ಲಿ ಜೆಮಿಮಾ ಆಡಿದ ಆಟ ಅಭಿಮಾನಿಗಳಿಗೆ ಮುದ ನೀಡಿದೆ. ಜೆಮಿಮಾ 14 ಬೌಂಡರಿ ನೆರವಿನಿಂದ ಅಜೇಯ 127 ರನ್‌ ಬಾರಿಸಿ ಅಬ್ಬರಿಸಿದರು. ಈ ಮೂಲಕ ಜಯದಲ್ಲಿ ಮಿಂಚಿದರು.

ಭಾರತ-ಪಾಕ್‌ ಏಷ್ಯಾ ಕಪ್ ಟಿ20 ಫೈನಲ್‌

ಭಾರತ ಹಾಗೂ ಪಾಕಿಸ್ತಾನ ತಂಡಗಳು ಏಷ್ಯಾ ಕಪ್‌ ಟಿ20 ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಕಾದಾಟ ನಡೆಸಿದವು. ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್‌ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು. ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾದ ಆರಂಭ ಸಹ ಕಳಪೆಯಾಗಿತ್ತು. ಭಾರತ ತಂಡ 20 ರನ್‌ಗೆ ಅಭಿಷೇಕ್‌ ಶರ್ಮಾ, ಶುಭಮನ್‌ ಗಿಲ್, ಸೂರ್ಯಕುಮಾರ್‌ ಯಾದವ್ ಬೇಗನೆ ಪೆವಿಲಿಯನ್ ಸೇರಿದರು. ಒಂದು ಬದಿಯಲ್ಲಿ ವಿಕೆಟ್ ಬೀಳುತ್ತಾ ಇದ್ದರೂ ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು. ಇವರು 53 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 69 ರನ್‌ ಸಿಡಿಸಿ ಜಯದಲ್ಲಿ ಮಿಂಚಿದರು.

ಭಾರತ-ನ್ಯೂಜಿಲೆಂಡ್‌ ಚಾಂಪಿಯನ್ಸ್‌ ಟ್ರೋಫಿ ಫೈನಲ್

ದುಬೈನಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್‌ ಸೇರಿಸಿತು. ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾದ ರೋಹಿತ್ ಶರ್ಮಾ (76), ಶುಭಮನ್‌ ಗಿಲ್, ವಿರಾಟ್ ಕೊಹ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಶ್ರೇಯಸ್ ಅಯ್ಯರ್‌ (48) ಅರ್ಧಶತಕ ಬಾರಿಸುವಲ್ಲಿ ವಿಫಲರಾದರು. ಕೆಎಲ್ ರಾಹುಲ್ ಅಜೇಯ 34 ರನ್‌ ಸಿಡಿಸಿ ತಂಡದ ಜಯದಲ್ಲಿ ಅಬ್ಬರಿಸಿದರು.

ಆರ್‌ಸಿಬಿ-ಪಂಜಾಬ್‌ ಐಪಿಎಲ್ ಫೈನಲ್‌

17 ವರ್ಷಗಳಿಂದ ಐಪಿಎಲ್‌ ಟ್ರೋಫಿ ಗೆಲ್ಲದ ಆರ್‌ಸಿಬಿ ಅಮೋಘ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 190 ರನ್‌ ಸೇರಿಸಿತು. ಗುರಿಯನ್ನು ಹಿಂಬಾಲಿಸಿದ ಪಂಜಾಬ್‌ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 184 ರನ್‌ ಸೇರಿಸಿ 6 ರನ್‌ ಸೋಲು ಕಂಡಿತು. ಈ ಮೂಲಕ ಆರ್‌ಸಿಬಿ ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಸಂಭ್ರಮಿಸಿತು.

ರಾಜಸ್ಥಾನ-ಗುಜರಾತ್ ಐಪಿಎಲ್

ಐಪಿಎಲ್‌ 2025ನೇ 47ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಕಣಕ್ಕೆ ಇಳಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್‌ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 209 ರನ್‌ ಸೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ 166 ರನ್‌ಗಳ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 38 ಎಸೆತಗಳಲ್ಲಿ 7 ಬೌಂಡರಿ, 11 ಸಿಕ್ಸರ್ ಸಹಾಯದಿಂದ 101 ರನ್ ಬಾರಿಸಿ ಆರ್ಭಟಿಸಿದರು. ಈ ಮೂಲಕ ರಾಜಸ್ಥಾನ 15.5 ಓವರ್‌ಗಳಲ್ಲಿ 2 ವಿಕೆಟ್‌ಗೆ 212 ರನ್ ಸೇರಿಸಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟ್ ಮಾಡಿದ ವೈಭವ್‌ ವೇಗದ ಶತಕ ಬಾರಿಸಿ ಆರ್ಭಟಿಸಿದರು.

Story first published: Sunday, December 21, 2025, 8:40 [IST]
Other articles published on Dec 21, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+