Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಗೆಳೆಯ ಶೇನ್ ವಾರ್ನ್ ಸಾವಿನ ಸುದ್ದಿ ಕೇಳಿ ಆಘಾತ ವ್ಯಕ್ತಪಡಿಸಿದ ಸಚಿನ್ ತೆಂಡೂಲ್ಕರ್

Sachin and shane warne

ಆಸ್ಟ್ರೇಲಿಯಾ ಕ್ರಿಕೆಟ್ ಲೆಜೆಂಡ್ ಶೇನ್ ವಾರ್ನ್ ದಿಢೀರ್ ಸಾವಿನ ಕುರಿತು ಇಡೀ ಕ್ರಿಕೆಟ್ ಲೋಕವೇ ಸಂತಾಪ ವ್ಯಕ್ತಪಡಿಸಿದೆ. ಬಹುತೇಕ ಕ್ರಿಕೆಟಿಗರು ಇದನ್ನ ನಂಬಲು ಸಾಧ್ಯವಾಗುತ್ತಿಲ್ಲ ಎಂದೆಲ್ಲಾ ಟ್ವೀಟ್‌ ಮಾಡಿದ್ದಾರೆ. ಮಾಜಿ ಕ್ರಿಕೆಟಿಗರು, ಸಹ ಕ್ರಿಕೆಟಿಗರು ವಾರ್ನ್ ಜೊತೆಗೆ ಕಳೆದ ಸಮಯವನ್ನ ನೆನಪು ಮಾಡಿಕೊಂಡು ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ಗಳ ಸುರಿಮಳೆಯೇ ಹರಿದಿದ್ದು, ಅಭಿಮಾನಿಗಳು ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದಾರೆ.

ಶೇನ್‌ವಾರ್ನ್‌ನ ಆನ್‌ಫೀಲ್ಡ್ ಬದ್ಧ ಎದುರಾಳಿ ಸಚಿನ್ ತೆಂಡೂಲ್ಕರ್ ತನ್ನ ಸ್ನೇಹಿತನ ಸಾವಿನ ಸುದ್ದಿ ಕೇಳಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇದರಲ್ಲಿ, ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಭಾರತೀಯರಿಗೆ ನಿಮ್ಮ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಹಾಗೆಯೇ ಭಾರತೀಯರ ಹೃದಯದಲ್ಲೂ ನೀವು ವಿಶೇಷ ಸ್ಥಾನ ಗಳಿಸಿದ್ದೀರಿ. ನೀವಿದ್ದ ಜಾಗದಲ್ಲಿ ಹರುಷಕ್ಕೆ ಕೊರತೆ ಇರುತ್ತಿರಲಿಲ್ಲ. ನಿಮ್ಮ ಸಾವು ತುಂಬಾ ದುಃಖ ತಂದಿದೆ. ವಿಲ್ ಮಿಸ್ ಯು ವಾರ್ನಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮೈದಾನದಲ್ಲಿ ನಮ್ಮ ಸ್ಪರ್ಧೆ ಮತ್ತು ಮೈದಾನದ ಹೊರಗೆ ನಮ್ಮ ಹಾಸ್ಯಮಯ ಕ್ಷಣಗಳನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಸಚಿನ್ ಮತ್ತು ಶೇನ್ ವಾರ್ನ್ ಇಬ್ಬರ ನಡುವೆ ಉತ್ತಮ ಬಾಂದವ್ಯವೂ ಇತ್ತು. ಇಬ್ಬರು ತಮ್ಮ ವೃತ್ತಿ ಬದುಕಿನ ಉನ್ನತ ಸ್ಥಾನದಲ್ಲಿದ್ದಾಗ ಪರಸ್ಪರ ಜಿದ್ದಿಗೆ ಬಿದ್ದವರಂತೆ ಉತ್ತಮ ಪ್ರದರ್ಶ ನೀಡುತ್ತಿದ್ದರು. ಅದ್ರಲ್ಲೂ ಸಚಿನ್ ತೆಂಡೂಲ್ಕರ್, ಶೇನ್ ವಾರ್ನ್​ ವಿರುದ್ಧ ಹೆಚ್ಚಿನ ಮೇಲುಗೈ ಸಾಧಿಸಿದ್ದರು. ಕ್ರೀಡಾಂಗಣದಲ್ಲಿ ಈ ಇಬ್ಬರ ಜಿದ್ದಾಜಿದ್ದಿನ ಹೋರಾಟವನ್ನು ನೋಡುವುದೇ ಅಭಿಮಾನಿಗಳಿಗೆ ಹಬ್ಬವಾಗಿತ್ತು. ಆದ್ರೆ ಇದೀಗ ವಾರ್ನ್ 52ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಸಚಿನ್ ಅಷ್ಟೇ ಅಲ್ಲದೆ ಇಡೀ ಕ್ರಿಕೆಟ್ ವಲಯವನ್ನೇ ನೋವಿನ ಕಡಲಲ್ಲಿ ತೇಲುವಂತೆ ಮಾಡಿದೆ.

1992ರಲ್ಲಿ ಭಾರತ ವಿರುದ್ಧವೇ ಚೊಚ್ಚಲ ಪಂದ್ಯವನ್ನಾಡಿದ್ದ ಶೇನ್‌ ವಾರ್ನ್ ಭಾರತ ವಿರುದ್ಧವೇ ತಮ್ಮ ಕೊನೆಯ ಪಂದ್ಯವನ್ನಾಡಿದ್ದು ವಿಶೇಷ. ಶೇನ್ ವಾರ್ನ್ ಆಸ್ಟ್ರೇಲಿಯಾ ಕ್ರಿಕೆಟಿಗನಾದ್ರೂ ಭಾರತದ ಅಭಿಮಾನಿಗಳಲ್ಲಿ, ಭಾರತ ನೆಲದಲ್ಲಿ ವಿಶೇಷ ಬಾಂದವ್ಯ ಹೊಂದಿದ್ದರು.

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ,ಮ್ಯಾಜಿಕ್‌ ಸ್ಪಿನ್ನರ್ ಶೇನ್ ವಾರ್ನ್ ನಿಧನ | Oneindia Kannada

Story first published: Saturday, March 5, 2022, 10:25 [IST]
Other articles published on Mar 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+