ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸುರೇಶ್ ರೈನಾ ತಂಡಕ್ಕೆ ಮರಳಬೇಕೆಂಬ ಆಶಯ ವ್ಯಕ್ತಪಡಿಸಿದ ರೋಹಿತ್ ಶರ್ಮಾ

You Should Be Back in the Team: Rohit Sharma to Suresh Raina

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಮತ್ತು ಸುರೇಶ್ ರೈನಾ ಸಾಮಾಜಿಕ ಜಾಲತಾಣದಲ್ಲಿ ನೇರ ಸಂವಾದದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸುರೇಶ್ ರೈನಾ ಮತ್ತೆ ತಂಡಕ್ಕೆ ಸೇರಿಕೊಳ್ಳಬೇಕೆಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಟೀಮ್ ಇಂಡಿಯಾ ಮಾಜಿ ನಾಯಕ ಧೋನಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಆಡಲಿದ್ದಾರೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಇನ್ಸ್ಟಾಗ್ರಾಮ್ ಲೈವ್‌ನಲ್ಲಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಮತ್ತು ಸುರೇಶ್ ರೈನಾ ಹಲವಾರು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಸಿಎಸ್‌ಕೆ ಬ್ಯಾಟ್ಸ್‌ಮನ್ ಸುರೇಶ್ ರೈನಾ ಅವರ ಗಾಯದಿಂದ ಹಿಡಿದು ಧೋನಿ ತಂಡಕ್ಕೆ ಮರಳುವವರೆಗೆ ಹಲವಾರು ಸಂಗತಿಗಳು ಈ ಮಾತುಕತೆಯಲ್ಲಿ ಬಂದು ಹೋದವು.

ಅರ್ಜುನ ಪ್ರಶಸ್ತಿಗೆ ಶಿಫಾರಸಾಗಲಿದ್ದಾರೆ ಶಿಖಾ ಪಾಂಡೆ, ದೀಪ್ತಿ ಶರ್ಮಾಅರ್ಜುನ ಪ್ರಶಸ್ತಿಗೆ ಶಿಫಾರಸಾಗಲಿದ್ದಾರೆ ಶಿಖಾ ಪಾಂಡೆ, ದೀಪ್ತಿ ಶರ್ಮಾ

ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಸುರೇಶ್ ರೈನಾ ಬಳಿ "ತಂಡದಲ್ಲಿ ನಾವು ಹಲವಾರು ಬಾರಿ ಚರ್ಚೆಯನ್ನು ಮಾಡುತ್ತಿರುತ್ತೇವೆ. ಸುರೇಶ್ ರೈನಾ ಅವರ ಆಲ್‌ರೌಂಡರ್ ಪ್ರದರ್ಶನದ ಕಾರಣದಿಂದಾಗಿ ಭಾರತೀಯ ತಂಡದಲ್ಲಿ ಸ್ಥಾನವನ್ನು ಪಡೆಯಲು ಅರ್ಹರಿದ್ದಾರೆ ಎಂಬುದಾಗಿ ಚರ್ಚೆಯನ್ನು ನಡೆಸುತ್ತೇವೆ ಎಂದು ಹೇಳಿದರು.

ಏಕದಿನದಲ್ಲಿ ನಾಯಕರಾಗಿ ಅತ್ಯಧಿಕ ರನ್ ಗಳಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳುಏಕದಿನದಲ್ಲಿ ನಾಯಕರಾಗಿ ಅತ್ಯಧಿಕ ರನ್ ಗಳಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು

ನನಗೆ ಗೊತ್ತಿದೆ, ಬಹಳ ಕಾಲ ತಂಡದ ಭಾಗವಾಗಿದ್ದು ಆ ಬಳಿಕ ತಂಡದಿಂದ ಹೊರಗುಳಿಯುವುದು ತುಂಬಾ ಕಠಿಣ. ತಂಡದಲ್ಲಿ ಮತ್ತೆ ನೀವು ಸ್ಥಾನವನ್ನು ಗಳಿಸುತ್ತೀರಿ. ನಿಮ್ಮ ಅನುಭವ ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ನಿಮ್ಮ ಸಾಮರ್ಥ್ಯ ಅಗಾಧವಾದದ್ದು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಧೋನಿ ಟೀಮ್ ಇಂಡಿಯಾಗೆ ಮರಳುವಿಕೆಯ ಬಗ್ಗೆಯೂ ಚರ್ಚೆಯನ್ನು ಇಬ್ಬರೂ ಕ್ರಿಕೆಟಿಗರು ನಡೆಸಿದ್ದರು. ಈ ವಿಚಾರವಾಗಿ ಸುರೇಶ್ ರೈನಾ, ಧೋನಿ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಕೌಶಲ್ಯ ಅದ್ಭುತವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ ಅಭ್ಯಾಸ ಸಂದರ್ಭದಲ್ಲಿ ನಾನು ಬಹಳಷ್ಟು ಹತ್ತಿರದಿಂದ ಕಂಡಿದ್ದೇನೆ ಎಂದು ರೈನಾ ಹೇಳಿದರು.

Story first published: Wednesday, May 13, 2020, 13:52 [IST]
Other articles published on May 13, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X