Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದೇವದತ್ ಪಡಿಕ್ಕಲ್ ದಾಖಲೆ ಅಳಿಸಿದ ವೈಭವ್ ಸೂರ್ಯವಂಶಿ

ಭಾನುವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ರಾಯಲ್ಸ್ ಪರ ಬ್ಯಾಟ್ ಮಾಡಿದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಇವರು ಮುಂಬೈ ವಿರುದ್ಧದ ಪಂದ್ಯದಲ್ಲಿ ಕೇವಲ 4 ರನ್ ಬಾರಿಸಿದರು. ಈ ಚಿಕ್ಕ ಇನಿಂಗ್ಸ್‌ ಮೂಲಕ ಯುವ ಬ್ಯಾಟರ್‌ ಇತಿಹಾಸ ನಿರ್ಮಿಸಿದರು.

15 ವರ್ಷದ ವೈಭವ್ ಸೂರ್ಯವಂಶಿ, ಐಪಿಎಲ್ 2026ರ ಲೀಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ಕಣಕ್ಕಿಳಿದು, ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. 20 ವರ್ಷಕ್ಕಿಂತ ಕಡಿಮೆ ವಯಸ್ಸಿನಲ್ಲಿ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚು ರನ್‌ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯನ್ನು ನಿರ್ಮಿಸಲು ಮುಂಬೈ ವಿರುದ್ಧದ ಪಂದ್ಯದಲ್ಲಿ ವೈಭವ್‌ ಅವರಿಗೆ 2 ರನ್‌ ಅವಶ್ಯಕತೆ ಇತ್ತು. ಈ ಪಂದ್ಯದಲ್ಲಿ 4 ರನ್‌ ಬಾರಿಸುವ ಮೂಲಕ ಹೊಸ ಮೈಲಿಗಲ್ಲನ್ನು ತಲುಪಿದ್ದಾರೆ. ವಿಲ್ ಜಾಕ್ಸ್ ಎಸೆದ ಎರಡನೇ ಓವರ್‌ನ ಎರಡನೇ ಎಸೆತದಲ್ಲಿ ತಮ್ಮ ಎರಡನೇ ರನ್ ಗಳಿಸುವ ಮೂಲಕ ಈ ಮೈಲಿಗಲ್ಲನ್ನು ತಲುಪಿದರು.

Vaibhav Sooryavanshi

ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ವೈಭವ್ ತಮ್ಮ 14ನೇ ಇನ್ನಿಂಗ್ಸ್‌ನಲ್ಲಿ 582 ರನ್‌ಗಳನ್ನು ಕಲೆಹಾಕಿ ಈ ಹೊಸ ದಾಖಲೆ ನಿರ್ಮಿಸಿದರು. ಈ ದಾಖಲೆ ಈ ಮೊದಲು ಕರ್ನಾಟಕದ ದೇವದತ್ ಪಡಿಕ್ಕಲ್ ಅವರ ಹೆಸರಿನಲ್ಲಿತ್ತು. ಇವರು 2019/20ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 580 ರನ್‌ ಸಿಡಿಸಿದ್ದರು.

ಮತ್ತೊಂದು ದಾಖಲೆಯ ಕನಸಿನಲ್ಲಿ ವೈಭವ್

ಈ ಆವೃತ್ತಿಯಲ್ಲಿ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಬರೆದರು. ಈ ಲೀಗ್‌ನಲ್ಲಿ ವೈಭವ್ ಈಗಾಗಲೇ 53 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ 50ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಅಲ್ಲದೆ ಈ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿ ಹಿರಿಮೆ ಇವರದ್ದಾಗಿದೆ. ಇವರು ಇನ್ನೂ ಏಳು ಸಿಕ್ಸರ್‌ಗಳನ್ನು ಹೊಡೆದರೆ, ಐಪಿಎಲ್ ಇತಿಹಾಸದಲ್ಲಿ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯನ್ನು ಬರೆಯಬಹುದಾಗಿದೆ.

ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್‌ ಎಂಬ ಹೆಗ್ಗಳಿಕೆ ಆರ್‌ಸಿಬಿ ತಂಡದ ಮಾಜಿ ಆಟಗಾರ ಕ್ರಿಸ್‌ ಗೇಲ್ 2013ರಲ್ಲಿ 59 ಸಿಕ್ಸರ್‌ ಬಾರಿಸಿದ್ದರು.

Story first published: Sunday, May 24, 2026, 22:33 [IST]
Other articles published on May 24, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+