Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಐಪಿಎಲ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರರು ಇವರೇ..

ಐಪಿಎಲ್ ಇತಿಹಾಸದಲ್ಲಿ ಹಲವು ಸ್ಮರಣೀಯ ಶತಕಗಳು ದಾಖಲಾಗಿವೆ. ಅದರಲ್ಲೂ ಯುವ ಆಟಗಾರರು ಸಿಡಿಸಿರುವ ಭರ್ಜರಿ ಶತಕಗಳು ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿವೆ. ಸೋಮವಾರ ಜೈಪುರದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಪರ ವೈಭವ್ ಸೂರ್ಯವಂಶಿ ಅದ್ಭುತ ಶತಕ ಗಳಿಸಿದರು. ಈ ಶತಕವನ್ನು ಕೇವಲ 35 ಎಸೆತಗಳಲ್ಲಿ ಪೂರೈಸಿ ಹಲವು ದಾಖಲೆಗಳನ್ನು ಮಾಡಿದರು. ಅವರು ಐಪಿಎಲ್‌ನಲ್ಲಿ ಅತಿ ವೇಗದ ಶತಕ ಗಳಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡರು.

ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಎರಡನೇ ವೇಗದ ಶತಕ ಗಳಿಸಿದ ದಾಖಲೆಯನ್ನೂ ಮಾಡಿದರು. ಇದುವರೆಗೆ ಐಪಿಎಲ್ ಇತಿಹಾಸದಲ್ಲಿ ಮನೀಶ್ ಪಾಂಡೆ ಅವರಿಂದ ವೈಭವ್ ಸೂರ್ಯವಂಶಿ ವರಗೆ ಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರರ ಬಗ್ಗೆ ಇಲ್ಲಿದೆ ಮಾಹಿತಿ.

Youngest players to score century in IPL history

ವೈಭವ್ ಸೂರ್ಯವಂಶಿ

ಹದಿನಾಲ್ಕು ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್ ಮತ್ತು ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅವರು14 ವರ್ಷ ಮತ್ತು 32 ದಿನಗಳಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎನಿಕೊಂಡಿದ್ದಾರೆ. ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ವೈಭವ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದಾಗಿ ರಾಜಸ್ಥಾನ ರಾಯಲ್ಸ್ ತಂಡ ಐದು ಸೋಲುಗಳ ನಂತರ ಗೆಲುವು ಸಾಧಿಸಿದೆ.

ಮನೀಶ್ ಪಾಂಡೆ

ಭಾರತ ತಂಡ ಸ್ಟಾರ್ ಬ್ಯಾಟರ್ ಮನೀಶ್ ಪಾಂಡೆ ಕೂಡ ಐಪಿಎಲ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು ಏಪ್ರಿಲ್ 18, 2009 ರಂದು 19 ವರ್ಷ ಮತ್ತು 253 ದಿನಗಳ ವಯಸ್ಸಿನಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ ತಮ್ಮ ಮೊದಲ ಐಪಿಎಲ್ ಶತಕವನ್ನು ಬಾರಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವಾಗ ಈ ಸಾಧನೆ ಮಾಡಿದ್ದಾರೆ.

ರಿಷಭ್ ಪಂತ್

ಐಪಿಎಲ್ ಇತಿಹಾಸದಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ಮೂರನೇ ಸ್ಥಾನ ಪಡೆದಿದ್ದಾರೆ. ಅವರು ಏಪ್ರಿಲ್ 21, 2018 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಾಗ ಶತಕ ಸಿಡಿಸಿದ್ದಾರೆ. ಇದು ರಿಷಭ್ ಪಂತ್ ಅವರ ಮೊದಲ ಐಪಿಎಲ್ ಶತಕವಾಗಿದ್ದು, 20 ವರ್ಷ ಮತ್ತು 218 ದಿನಗಳಲ್ಲಿ ದಾಖಲೆ ಮಾಡಿದ್ದಾರೆ.

ದೇವದತ್ ಪಡಿಕ್ಕಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಸ್ಫೋಟಕ ಬ್ಯಾಟರ್ ದೇವದತ್ ಪಡಿಕ್ಕಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ದೇವದತ್ ಪಡಿಕ್ಕಲ್ 2021 ರಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 20 ವರ್ಷ ಮತ್ತು 289 ದಿನಗಳಲ್ಲಿ ತಮ್ಮ ಮೊದಲ ಐಪಿಎಲ್ ಶತಕವನ್ನು ಗಳಿಸಿದ್ದಾರೆ.

ಯಶಸ್ವಿ ಜೈಸ್ವಾಲ್

ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ತಮ್ಮ ಮೊದಲ ಐಪಿಎಲ್ ಶತಕವನ್ನು ಗಳಿಸಿದ್ದಾರೆ. ಆಗ ಅವರಿಗೆ 21 ವರ್ಷ ಮತ್ತು 123 ದಿನಗಳು. ಈ ಶತಕದೊಂದಿಗೆ ಅವರು ಐಪಿಎಲ್ ಇತಿಹಾಸದಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

Story first published: Tuesday, April 29, 2025, 18:08 [IST]
Other articles published on Apr 29, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+