Younis Khan: ಅಫ್ಘಾನಿಸ್ತಾನ ತಂಡಕ್ಕೆ ಪಾಕಿಸ್ತಾನದ ಮಾಜಿ ನಾಯಕ ಮೆಂಟರ್
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ರಾಜಕೀಯ ಬಿಕ್ಕಟ್ಟಿನ ನಡುವೆಯೂ ಎಸಿಬಿ ಪಾಕ್ ಆಟಗಾರನಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಅಫ್ಘಾನಿಸ್ತಾನ ತಂಡದ ಮಾರ್ಗದರ್ಶಕರಾಗಿ ಪಾಕಿಸ್ತಾನದ ಮಾಜಿ ನಾಯಕ ಯೂನಿಸ್ ಖಾನ್ ಅವರನ್ನು ನೇಮಕ ಮಾಡಿದೆ. ಇದಕ್ಕೂ ಮುನ್ನ ಯೂನಿಸ್ ಖಾನ್ 2022ರಲ್ಲಿ ಅಫ್ಘಾನಿಸ್ತಾನ ತಂಡದ ಬ್ಯಾಟಿಂಗ್ ಕೋಚ್ ಆಗಿದ್ದರು.
ಅಫ್ಘಾನಿಸ್ತಾನ ತಂಡದಲ್ಲಿ ಯೂನಿಸ್ ಖಾನ್ ಅವರಿಗೆ ದೊಡ್ಡ ಜವಾಬ್ದಾರಿ ಸಿಕ್ಕಿದೆ ಎಂದು ಎಸಿಬಿ ವಕ್ತಾರ ಸೈಯದ್ ನಸೀಮ್ ಸಾದತ್ ಹೇಳಿದ್ದಾರೆ. ಸೈಯದ್ ನಸೀಮ್ ಸಾದತ್ ಪ್ರಕಾರ, ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಯೂನಿಸ್ ಖಾನ್ ಅಫ್ಘಾನಿಸ್ತಾನ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದರೊಂದಿಗೆ ಅಫ್ಘಾನಿಸ್ತಾನ ಮೊದಲ ಐಸಿಸಿ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ.

ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಮೆಗಾ ಟೂರ್ನಿಯ ಪಂದ್ಯಗಳು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದ್ದು, ಎಂಟು ತಂಡಗಳ ಸೆಣಸಾಡಲಿವೆ. ಅಫ್ಘಾನಿಸ್ತಾನ ತಂಡವನ್ನಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನೊಂದಿಗೆ ಬಿ ಗುಂಪಿನಲ್ಲಿ ಇರಿಸಲಾಗಿದ್ದು, ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿವೆ.
ಕೋಚಿಂಗ್ ವೃತ್ತಿಜೀವನ
ಯೂನಿಸ್ ಖಾನ್ ಮೊದಲು ಹಿರಿಯ ಪಾಕಿಸ್ತಾನ ಪುರುಷರ ತಂಡದೊಂದಿಗೆ ಬ್ಯಾಟಿಂಗ್ ತರಬೇತುದಾರರಾಗಿ ಕೆಲಸ ಆರಂಭಿಸಿದರು. ಆದರೆ 2021ರ ಮಧ್ಯದಲ್ಲಿ ಕೇವಲ ಆರು ತಿಂಗಳ ನಂತರ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದರು. ಫ್ರಾಂಚೈಸಿ ಕ್ರಿಕೆಟ್‌ನಲ್ಲಿ, ಯೂನಿಸ್ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಪೇಶಾವರ್ ಝಲ್ಮಿ ತಂಡದಲ್ಲಿ ಕೋಚ್ ಆಗಿದ್ದರು. ನಂತರ ಅಬುಧಾಬಿ ಟಿ10 ಲೀಗ್‌ನಲ್ಲಿ ಬಾಂಗ್ಲಾ ಟೈಗರ್ಸ್‌ನ ಹೆಡ್‌ಕೋಚ್ ಆಗಿ ಸೇವೆ ಸಲ್ಲಿಸಿದ್ದರು. ಇದೀಗ ಅಫ್ಘಾನಿಸ್ತಾನ ತಂಡಕ್ಕೆ ಯೂನಿಸ್ ಖಾನ್ ಮೆಂಟರ್ ಆಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
2023ರ ಏಕದಿನ ವಿಶ್ವಕಪ್ ಟೂರ್ನಿ ಸಂದರ್ಭದಲ್ಲಿ ಅಫ್ಘಾನಿಸ್ತಾನ ಮಾಜಿ ಟೀಮ್ ಇಂಡಿಯಾ ಬ್ಯಾಟರ್ ಅಜಯ್ ಜಡೇಜಾ ಅವರನ್ನು ತಮ್ಮ ಮಾರ್ಗದರ್ಶಕರಾಗಿ ನೇಮಿಸಿಕೊಂಡಿತ್ತು. ಅಜಯ್ ಜಡೇಜಾ ಮಾರ್ಗದರ್ಶನದಲ್ಲಿ ಅಫ್ಘಾನಿಸ್ತಾನ ತಮ್ಮ ಆಟದ ಶೈಲಿಯಿಂದ ಎಲ್ಲರ ಚಿತ್ತ ಕದ್ದಿದ್ದರು. ಅಫ್ಘಾನಿಸ್ತಾನ ಲೀಗ್ ಹಂತದಲ್ಲಿ ನಾಲ್ ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ನವದೆಹಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ ಅದ್ಭುತ ಜಯ ಕಂಡಿತ್ತು.
ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ವೇಳೆ ವಿಂಡೀಸ್ ಸ್ಟಾರ್ ಅನುಭವಿ ವೇಗದ ಬೌಲರ್ ಆಲ್‌ರೌಂಡರ್ ಡ್ವೇನ್ ಬ್ರಾವೊ ಅವರನ್ನು ಅಫ್ಘಾನಿಸ್ತಾನ ಬೌಲಿಂಗ್ ಸಲಹೆಗಾರರಾಗಿ ನೇಮಿಸಿಕೊಂಡಿತ್ತು. ಅಫ್ಘಾನಿಸ್ತಾನವು ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶವನ್ನು ಸೋಲಿಸಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಸೆಮಿಫೈನಲ್ ತಲುಪಿದ ದಾಖಲೆ ಸೃಷ್ಟಿಸಿತ್ತು. ಇದೀಗ ಅಫ್ಘಾನಿಸ್ತಾನ ತಂಡಕ್ಕೆ ಯೂನಿಸ್ ಖಾನ್ ಮೆಂಟರ್ ಆಗಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲಿ ಅಫ್ಘಾನಿಸ್ತಾನ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕ್ರಿಕೆಟ್ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications