Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ ಪ್ರವಾಸಕ್ಕೆ ಪಾಕಿಸ್ತಾನ ತಂಡದ ಬ್ಯಾಟಿಂಗ್ ಕೋಚ್ ಆಗಿ ಯೂನಿಸ್ ಖಾನ್ ನೇಮಕ

Younis Khan To Be Pakistans Batting Coach For England Tour

ಪಾಕಿಸ್ತಾನದ ಅತ್ಯಂತ ಯಶಸ್ವೀ ಟೆಸ್ಟ್ ಬ್ಯಾಟ್ಸ್‌ಮನ್ ಹಾಗೂ ಮಾಜಿ ನಾಯಕ ಯೂನಿಸ್ ಖಾನ್ ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಮುಂಬರುವ ಇಂಗ್ಲೆಂಡ್ ವಿರುದ್ಧದ ಪ್ರವಾಸಕ್ಕಾಗಿ ಯೂನಿಸ್ ಖಾನ್ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಆಗಸ್ಟ್‌ನಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದಕ್ಕಾಗಿ ಮಾಜಿ ಸ್ಪಿನ್ನರ್ ಮುಷ್ತಾಕ್ ಅಹ್ಮದ್ ಅವರನ್ನು ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ಹಾಗೂ ಮೆಂಟರ್ ಆಗಿ ಪಿಸಿಬಿ ಆಯ್ಕೆ ಮಾಡಿದೆ. ಸರಣಿಯ ಬಗ್ಗೆ ಇನ್ನಷ್ಟೇ ಸಂಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಬೇಕಿದೆ.

ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಿಸ್ಬಾ ಉಲ್ ಹಕ್ ಮತ್ತು ವೇಗದ ಬೌಲಿಂಗ್ ಕೋಚ್ ವಾಕರ್ ಯೂನಿಸ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಂಡದ ಪ್ರದರ್ಶನ ಉತ್ತಮಪಡಿಸಲು ನೆರವಾಗುವಂತೆ ಈ ಆಯ್ಕೆಯನ್ನು ಮಾಡಲಾಗಿದೆ.

ಯೂನಿಸ್ ಖಾನ್ 2000ದಲ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನವನ್ನು ಆರಂಭಿಸಿದ್ದರು. 2017ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಅವರು 52ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದರು. 118 ಟೆಸ್ಟ್ ಪಂದ್ಯಗಳಲ್ಲಿ 10,099 ರನ್ ಗಳಿಸಿದ್ದಾರೆ. ಇದರಲ್ಲಿ ಶ್ರೀಲಂಕಾ ವಿರುದ್ಧ ಸಿಡಿಸಿದ ತ್ರಿಶತಕ(313) ಕೂಡ ಸೇರಿದೆ.

ಕೋಚ್ ಆಗಿ ಆಯ್ಕೆಯಾಗಿರುವುದಕ್ಕೆ ಯೂನಿಸ್ ಖಾನ್ ಸಂತಸವನ್ನು ವ್ಯಕ್ತಪಡಿಸಿದ್ದಾರೆ. 'ದೇಶವನ್ನು ಪ್ರತಿನಿಧಿಸಲು ದೊರಕುವ ಅವಕಾಶ ನನ್ನ ಪಾಲಿಗೆ ದೊಡ್ಡ ಗೌರವ ಭಾವನೆ. ಇಂಗ್ಲೆಂಡ್‌ನ ಸವಾಲಿನ ಹಾಗೂ ರೋಮಾಂಚನಕಾರಿ ಕ್ರಿಕೆಟ್ ಪ್ರವಾಸಕ್ಕಾಗಿ ನನಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗಿದೆ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Story first published: Thursday, June 11, 2020, 10:00 [IST]
Other articles published on Jun 11, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+