T20 World Cup 2024: ಭಾರತ ಪರ ಆಡುವ 11 ಆಟಗಾರರನ್ನು ಹೆಸರಿಸಿದ ಯುವರಾಜ್ ಸಿಂಗ್; ಅಚ್ಚರಿ ತಂದ ಓಪನರ್ಸ್ ಆಯ್ಕೆ!
ಮೇ 22 ಬುಧವಾರ, 2024ರ ಟಿ20 ವಿಶ್ವಕಪ್‌ಗೆ ಕೇವಲ 10 ದಿನಗಳು ಬಾಕಿಯಿದ್ದು, ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ದೇಶಗಳು ಅತಿದೊಡ್ಡ ಐಸಿಸಿ ಟೂರ್ನಿಗೆ ಸಾಕ್ಷಿಯಾಗಲಿವೆ.
ಈ ಮೆಗಾ ಟೂರ್ನಿಗೆ ಎಲ್ಲಾ ತಂಡಗಳು ತಮ್ಮ ತಂತ್ರಗಾರಿಕೆಯನ್ನು ಮೈದಾನದಲ್ಲಿ ರೂಪಿಸಲು ಸಜ್ಜಾಗಿವೆ. ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕೀಳಿಯುವ 11 ಆಟಗಾರರು ಯಾರೆಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ವಿಕೆಟ್ ಕೀಪಿಂಗ್ ಮಾಡುವ ಅವಕಾಶ ಸಂಜು ಸ್ಯಾಮ್ಸನ್ ಅವರಿಗೆ ಸಿಗಲಿದೆಯೇ? ಅಥವಾ ರಿಷಬ್ ಪಂತ್ ಅವರೇ ಮಾಡುವುವರೇ? ಎಂಬ ಪ್ರಶ್ನೆಗಳು ಅಭಿಮಾನಿಳಲ್ಲಿ ಕಾಡುತ್ತಿವೆ. ಇದಲ್ಲದೆ, ವೇಗದ ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಯಾರನ್ನು ತಂಡದಲ್ಲಿ ತರಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
ಇದರ ಬೆನ್ನಲ್ಲೇ ಭಾರತ ತಂಡದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್, ಟೀಮ್ ಇಂಡಿಯಾ ಪರ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ. 2007ರಲ್ಲಿ ಭಾರತ ವಿಶ್ವಕಪ್ ಗೆದ್ದಾಗ ಯುವರಾಜ್ ಸಿಂಗ್ ತಂಡದಲ್ಲಿದ್ದರು.

ಅದೇ ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಇಂಗ್ಲೆಂಡ್‌ನ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ಅವರಿಗೆ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ್ದರು. ಈ ಬಾರಿ ಟಿ20 ವಿಶ್ವಕಪ್ ಟೂರ್ನಿಗೆ ಯುವರಾಜ್ ಸಿಂಗ್ ಅವರನ್ನು ರಾಯಭಾರಿಯಾಗಿ ಐಸಿಸಿ ನೇಮಕ ಮಾಡಿದೆ.
ಯುವರಾಜ್ ಸಿಂಗ್ ತಮ್ಮ ಮೊದಲ ಆಯ್ಕೆಯಲ್ಲಿ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಸೂಕ್ತ ಎಂದಿದ್ದಾರೆ. ನಾನು ಬಹುಶಃ ರಿಷಬ್ ಅವರನ್ನು ಆಯ್ಕೆ ಮಾಡುತ್ತೇನೆ. ನಿಸ್ಸಂಶಯವಾಗಿ ಸಂಜು ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ.
ಆದರೆ ರಿಷಭ್ ಎಡಗೈ ಬ್ಯಾಟರ್ ಆಗಿದ್ದು, ಈ ಹಿಂದೆ ಹಲವು ಪಂದ್ಯಗಳಲ್ಲಿ ಭಾರತ ಗೆಲ್ಲಲು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ರಿಷಬ್ ಪಂತ್ ಮತ್ತು ರೋಹಿತ್ ಶರ್ಮಾ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ.
ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ಇಬ್ಬರನ್ನೂ ಆಡುವ 11ರ ಬಳಗದಿಂದ ಹೊರಗಿಟ್ಟಿದ್ದಾರೆ. ಸಂಜು ಸ್ಯಾಮ್ಸನ್ ಕೂಡ ತಂಡದ ಭಾಗವಾಗಿಲ್ಲ. ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಬದಲಿಗೆ ಶಿವಂ ದುಬೆ ಅವರನ್ನು ಆಯ್ಕೆ ಮಾಡಿದ್ದಾರೆ. ಶಿವಂ ದುಬೆ ಅವರ ಹೊಡೆಯುವ ಸಾಮರ್ಥ್ಯದ ಮೇಲೆ ಅವರಿಗೆ ಹೆಚ್ಚು ವಿಶ್ವಾಸವಿದೆ ಎಂದು ಯುವಿ ಹೇಳಿದ್ದಾರೆ.
ಐಪಿಎಲ್‌ನಲ್ಲಿ ತಮ್ಮ ಬ್ಯಾಟಿಂಗ್ ಲಯ ಕಳೆದುಕೊಂಡಿರುವ ಉಪನಾಯಕ ಹಾರ್ದಿಕ್ ಪಾಂಡ್ಯ ಅವರ ಫಾರ್ಮ್ ಬಗ್ಗೆ ಕಳವಳದ ನಡುವೆಯೂ ಅವರಿಂದ ಯುವರಾಜ್ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ.
ಯುವರಾಜ್ ಸಿಂಗ್ ಆಯ್ಕೆಯ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ) , ರಿಷಬ್ ಪಂತ್ (ವಿ.ಕೀ), ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ(ಉಪನಾಯಕ), ಶಿವಂ ದುಬೆ, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ .
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ (ವಿ.ಕೀ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications