IND vs ENG: ಗೆಲುವಿನ ಬಳಿಕ ಶಿಷ್ಯನ ಕಾಲೆಳೆದ ಗುರು; ಪೋಸ್ಟ್ ವೈರಲ್
ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ತನ್ನ ಸ್ಪೋಟ ಬ್ಯಾಟಿಂಗ್ ಪ್ರದರ್ಶನದಿಂದ ಮತ್ತೊಮ್ಮೆ ಸದ್ದು ಮಾಡಿದ್ದಾರೆ. 24ರ ಹರೆಯದ ಎಡಗೈ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧ ಕೋಲ್ಕತ್ತಾದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ತಂಡದ ಬೌಲರ್‌ಗಳಿಗೆ ಬೆವರಿಳಿಸಿದ್ದಾರೆ. ಅವರು ಜಗತ್ತಿನ ಯಾವುದೇ ಬೌಲರ್ ತನ್ನ ಮುಂದೆ ಬೌಲಿಂಗ್ ಮಾಡಲು ಭಯಪಡುವಂತೆ ಮಾಡಿದ್ದಾರೆ. ಬುಧವಾರ ರಾತ್ರಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ ಅರ್ಧಶತ ಬಾರಿಸಿ ಮಿಂಚಿದರು.
ಅಭಿಷೇಕ್ ಶರ್ಮಾ ಅವರ ಬ್ಯಾಟಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಅಭಿಷೇಕ್ ಶರ್ಮಾ ಅವರ ಪ್ರತಿಭೆಯನ್ನು ಸುಧಾರಿಸುವಲ್ಲಿ ಟೀಮ್ ಇಂಡಿಯಾದ ಮಾಜಿ ವಿಶ್ವ ಚಾಂಪಿಯನ್ ಕ್ರಿಕೆಟಿಗ ಯುವರಾಜ್ ಸಿಂಗ್ ಮಾರ್ಗದರ್ಶಕರಾಗಿ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಅಭಿಷೇಕ್ ಶರ್ಮಾ ಮತ್ತು ಯುವರಾಜ್ ಸಿಂಗ್ ನಡುವೆ ಗುರ-ಶಿಷ್ಯ ಸಂಬಂಧವಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದ ಬಳಿಕ ಅಭಿಷೇಕ್ ಶರ್ಮಾಗೆ ಯುವರಾಜ್ ಸಿಂಗ್ ಕಾಲೆಳೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯುವರಾಜ್ ಸಿಂಗ್ ಅವರು ಅಭಿಷೇಕ್ ಶರ್ಮಾಗೆ ಕಾಲೆಳೆದಿದ್ದಾರೆ. ಸರಣಿಯಲ್ಲಿ ಹುಡುಗರಿಗೆ ಉತ್ತಮ ಆರಂಭ ಸಿಕ್ಕಿದೆ. ನಮ್ಮ ಬೌಲರ್‌ಗಳು ಉತ್ತಮ ಲಯದಲ್ಲಿ ಬೌಲಿಂಗ್ ಪ್ರದರ್ಶಿಸಿದರು. ಅಭಿಷೇಕ್ ಶರ್ಮಾ ಸರ್ ಅತ್ಯುತ್ತಮ ಇನ್ನಿಂಗ್ಸ್ ಅನ್ನು ಆಡಿದ್ದೀರಾ. ಮೈದಾನದಲ್ಲಿ ನೀವು 2 ಬೌಂಡರಿಗಳನ್ನು ಬಾರಿಸಿದಾಗ ನಾನು ಇಂಪ್ರೆಸ್ಸ್ ಆಗಿದ್ದೇನೆ ಎಂದು ಬರೆಯುವ ಮೂಲಕ ಯುವರಾಜ್ ಸಿಂಗ್ ತಮ್ಮ ಶಿಷ್ಯನ ಕಾಲೆಳೆದಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಡರ್ಬನ್‌ನಲ್ಲಿ ನಡೆದ ಟಿ20 ವಿಶ್ವಕಪ್ 2007ರ ಪಂದ್ಯದಲ್ಲಿ ಇಂಗ್ಲೆಂಡ್‌ನ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ 6 ಎಸೆತಗಳಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು. ಇದೀಗ ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ದ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 79 ರನ್ ಗಳಿಸಿದ್ದಾರೆ.
ಭಾರತ ಮುನ್ನಡೆ
ಮೊದಲ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಅಭಿಷೇಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಭಾರತ 12.5 ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 133 ರನ್ ಗಳಿಸಿ ಸುಲಭ ಗೆಲುವು ಕಂಡಿತು. ಈ ಗೆಲುವಿನೊಂದಿಗೆ ಭಾರತ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ನಾಯಕ ಜೋಸ್ ಬಟ್ಲರ್ (68 ರನ್) ಅರ್ಧಶತಕದ ಹೊರತಾಗಿಯೂ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಳ್ಳಲು ಸಾಧ್ಯವಾಗದ ಇಂಗ್ಲೆಂಡ್ ತಂಡವು 20 ಓವರ್‌ಗಳಲ್ಲಿ 132 ರನ್‌ಗಳಿಗೆ ಕುಸಿಯಿತು. ಬಟ್ಲರ್ ಹೊರತುಪಡಿಸಿ, ಹ್ಯಾರಿ ಬ್ರೂಕ್ ಮತ್ತು ಜೋಫ್ರಾ ಆರ್ಚರ್ ಮಾತ್ರ ಬ್ಯಾಟಿಂಗ್‌ನಲ್ಲಿ ಎರಡಂಕಿ ತಲುಪಲು ಸಾಧ್ಯವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications