ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ರೋಹಿತ್ ಶರ್ಮಾಗೆ ದೊಡ್ಡ ಸವಾಲಾಗಲಿದೆ: ಯುವರಾಜ್ ಸಿಂಗ್

ಜೂನ್ 18-22ರವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದು ಟೆಸ್ಟ್ ಕ್ರಿಕೆಟ್‌ನ ವಿಶ್ವಕಪ್ ಎಂದೇ ಖ್ಯಾತಿಯನ್ನು ಪಡೆದುಕೊಳ್ಳುತ್ತಿದ್ದು ದಿನದಿಂದ ದಿನಕ್ಕೆ ಈ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಾಗುತ್ತಿವೆ.
ಐಪಿಎಲ್ ಮುಂದುವರೆದಾಗ ಚೆನ್ನೈ ತಂಡವನ್ನು ಕಾಡಲಿದೆ ಈ ಗಂಭೀರ ಸಮಸ್ಯೆ
ಜೂನ್ 18ರಂದು ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಈಗಾಗಲೇ ಹಲವಾರು ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಪಂಡಿತರು ಹಾಗೂ ಕ್ರೀಡಾಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಯಾವ ತಂಡ ಗೆಲ್ಲಲಿದೆ ಮತ್ತು ಯಾವ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂಬುದರ ಕುರಿತು ಹೇಳಿಕೆಗಳನ್ನು ನೀಡಿದ್ದಾರೆ. ಇದೀಗ ಈ ಸಾಲಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಸೇರಿಕೊಂಡಿದ್ದು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಎದುರಾಗಲಿರುವ ಸವಾಲೊಂದನ್ನು ತಿಳಿಸಿದ್ದಾರೆ.
ಈತನ ರೀತಿಯ ಉತ್ಸಾಹಿ ಕ್ರಿಕೆಟಿಗ ಮತ್ತೊಬ್ಬನಿಲ್ಲ; ಭಾರತೀಯನನ್ನು ಕೊಂಡಾಡಿದ ಕ್ರಿಕೆಟ್ ಆಸ್ಟ್ರೇಲಿಯಾ ಸಿಇಒ
'ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‍ನಲ್ಲಿ ಉತ್ತಮ ಅನುಭವವನ್ನು ಹೊಂದಿರುವ ಆಟಗಾರನಾಗಿದ್ದಾರೆ. ಟೀಮ್ ಇಂಡಿಯಾದ ಪರ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ 7 ಶತಕಗಳನ್ನು ಸಿಡಿಸಿದ್ದಾರೆ. ರೋಹಿತ್ ಶರ್ಮಾ ಜೊತೆ ಗಿಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಸಂಭವವಿದ್ದು ಈ ಇಬ್ಬರಿಗೂ ಸಹ ಇಂಗ್ಲೆಂಡ್ ಪಿಚ್ ಸವಾಲಾಗಿ ಪರಿಣಮಿಸಲಿದೆ. ಏಕೆಂದರೆ ಇದುವರೆಗೂ ಸಹ ಈ ಇಬ್ಬರೂ ಇಂಗ್ಲೆಂಡ್ ನೆಲದಲ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿಲ್ಲ. ಇಂಗ್ಲೆಂಡ್ ಪಿಚ್‌ನ್ನು ಅರಿತು ಆಡುವುದು ಸುಲಭದ ಮಾತಲ್ಲ, ಅಲ್ಲದೆ ಪಂದ್ಯಕ್ಕೆ ಡ್ಯೂಕ್ ಬಾಲ್ ಬಳಸಲಿದ್ದು ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಬೇಗ ಪಿಚ್‌ಗೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ ಇದೆ' ಎಂದು ಯುವರಾಜ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications