ಮತ್ತೆ ಐಪಿಎಲ್‌ನಲ್ಲಿ ಅಖಾಡಕ್ಕೆ ಇಳಿಯಲು ಸಜ್ಜಾಗುತ್ತಿದ್ದಾರೆ ಯುವರಾಜ್ ಸಿಂಗ್
19ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಬಾರಿಯ ಐಪಿಎಲ್ ನಲ್ಲಿ ಹಲವು ತಂಡಗಳು ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿವೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಹ ಸೇರಿದೆ. ಡೆಲ್ಲಿ ತಂಡ ಈಗಾಗಲೇ ಮುಂದಿನ ಆವೃತ್ತಿ ಐಪಿಎಲ್‌ಗೆ ಭರದ ಸಿದ್ಧತೆ ನಡೆಸಿದಂತೆ ಕಾಣುತ್ತಿದೆ. ಮುಂದಿನ ಆವೃತ್ತಿಯ ಐಪಿಎಲ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ಸಹಾಯಕ ಸಿಬ್ಬಂದಿಯಾಗಿ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅಖಾಡಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ. ಇದರ ಜೊತೆಗೆ ಈ ಹಿಂದೆ ಡೆಲ್ಲಿ ತಂಡದ ಪರ ಕಾರ್ಯನಿರ್ವಹಿಸಿದ್ದ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಮರಳುವ ನಿರೀಕ್ಷೆಯಿದೆ.
ಪಿಟಿಐ ವರದಿಯ ಪ್ರಕಾರ, ಯುವರಾಜ್ ಸಿಂಗ್ ಐಪಿಎಲ್‌ನ ಮುಂದಿನ ಆವೃತ್ತಿಗೆ ಡೆಲ್ಲಿ ಕ್ಯಾಪಿಟಲ್ಸ್‌ನ ಬ್ಯಾಟಿಂಗ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಬಹುದು. ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಫ್ರಾಂಚೈಸ್ ಲೀಗ್‌ಗಳಿಂದ ನಿವೃತ್ತರಾದ ನಂತರ, 44 ವರ್ಷದ ಅವರು ಹಲವಾರು ಯುವ ಆಟಗಾರರಿಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2026 ರ ಐಪಿಎಲ್‌ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ, ಪ್ರಭ್ಸಿಮ್ರಾನ್ ಸಿಂಗ್ ಮತ್ತು ಪ್ರಿಯಾಂಶ್ ಆರ್ಯ ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಆಟಗಾರರಾಗಿದ್ದಾರೆ. ಇನ್ನು ಯುವಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕೋಚ್ ಸಿಬ್ಬಂದಿಯ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್ ಟ್ರೋಫಿಯನ್ನು ಎಂದಿಗೂ ಗೆಲ್ಲದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ನೇ ಸೀಸನ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಆಸೆಯನ್ನು ಹೊಂದಿದೆ. 19ನೇ ಆವೃತ್ತಿಯ ಐಪಿಎಲ್‌ನಲ್ಲೂ ಡೆಲ್ಲಿ ಆರಂಭ ಭರ್ಜರಿಯಾಗಿತ್ತು. ಆದರೆ ಆಟದಲ್ಲಿ ಸ್ಥಿರತೆ ಕಂಡುಕೊಳ್ಳುವಲ್ಲಿ ವಿಫಲವಾಗಿ ಪ್ಲೇ ಆಫ್ ರೇಸ್‌ನಿಂದ ದೂರ ಸರಿಯಿತು. ಈ ಪ್ರದರ್ಶನದ ಬಳಿಕ ನಾಯಕ ಅಕ್ಷರ್ ಪಟೇಲ್ ಮತ್ತು ಮುಖ್ಯ ಕೋಚ್ ಹೇಮಾಂಗ್ ಬದಾನಿ ಟೀಕೆಗಳನ್ನು ಎದುರಿಸಬೇಕಾಯಿತು. ಮುಂದಿನ ಋತುವಿಗೆ ಮುಂಚಿತವಾಗಿ ಡೆಲ್ಲಿ ಕ್ಯಾಪಿಟಲ್ಸ್ ಕೋಚಿಂಗ್ ಸೆಟಪ್‌ನಲ್ಲಿ ಬದಲಾವಣೆ ಖಚಿತವಾಗಿದೆ. ಯುವರಾಜ್ ಸಿಂಗ್ ಮತ್ತು ಸೌರವ್ ಗಂಗೂಲಿ ಸೇರ್ಪಡೆ ಗಳ್ಳೊವು ಸಾಧ್ಯತೆ ಇದೆ.
ಐಪಿಎಲ್‌ನಲ್ಲಿ ಯುವಿ ಸಾಧನೆ
ಐಪಿಎಲ್‌ನಲ್ಲಿ ಯುವರಾಜ್ ಸಿಂಗ್ ಆಡಿದ 132 ಪಂದ್ಯಗಳಲ್ಲಿ, 2,750 ರನ್ ಹಾಗೂ 36 ವಿಕೆಟ್ ಪಡೆದು ಯಶಸ್ವಿ ಆಲ್‌ರೌಂಡರ್ ಎನಿಸಿಕೊಂಡಿದ್ದಾರೆ. ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ 13 ಅರ್ಧಶತಕ ಹಾಗೂ 149 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಅಲ್ಲದೆ, ಐಪಿಎಲ್ ಇತಿಹಾಸದಲ್ಲಿ 2 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಅಪರೂಪದ ದಾಖಲೆ ಇವರ ಹೆಸರಿನಲ್ಲಿದೆ. 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದೊಂದಿಗೆ ಐಪಿಎಲ್ ಟ್ರೋಫಿ ಗೆದ್ದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications