For Quick Alerts
ALLOW NOTIFICATIONS  
For Daily Alerts
 

ಟಿ20ಯಲ್ಲಿ ಗರಿಷ್ಠ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿದ ಚಾಹಲ್

Yuzvendra Chahal become Indias highest wicket-taker in T20Is

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಮ್ ಇಂಡಿಯಾ ಹೀನಾಯವಾಗಿ ಸೋತಿದೆ. ಎಲ್ಲಾ ವಿಭಾಗಗಳಲ್ಲೂ ಭರ್ಜರಿ ಪ್ರದರ್ಶನವನ್ನು ನೀಡಿದ ಇಂಗ್ಲೆಂಡ್ ತಂಡ ಅರ್ಹವಾಗಿಯೇ ಗೆಲುವಿನ ಸವಿಕಂಡಿದೆ. ಆದರೆ ಈ ಪಂದ್ಯದ ಮೂಲಕ 100ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ.

ಟೀಮ್ ಇಂಡಿಯಾ ಪರವಾಗಿ ಟಿ20 ಮಾದರಿಯಲ್ಲಿ ಜಸ್ಪ್ರೀತ್ ಬೂಮ್ರಾ ಈವರೆಗೆ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನಿಸಿದ್ದರು. ಆದರೆ ಚಾಹಲ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೋಸ್ ಬಟ್ಲರ್ ಅವನ್ನು 1 ಎಲ್‌ಬಿಡಬ್ಲ್ಯು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಈ ಸಾಧನೆ ಮಾಡಿದ್ದಾರೆ.

30ರ ಹರೆಯದ ಚಾಹಲ್ 8ನೇ ಓವರ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ನಡೆಸುತ್ತಿದ್ದ ಬಟ್ಲರ್ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 60ನೇ ಬಲಿಪಡೆದರು ಟೀಮ್ ಇಂಡಿಯಾ ಸ್ಪಿನ್ನರ್. ಮೊದಲ ವಿಕೆಟ್‌ಗೆ ಜೇಸನ್ ರಾಯ್ ಜೊತೆಗೆ ಬಟ್ಲರ್ 72 ರನ್‌ಗಳ ಜೊತೆಯಾಟವನ್ನು ನೀಡಿದ್ದರು.

ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದಿತ್ತು. ಆದರೆ ಇಂಗ್ಲೆಂಡ್ ಬೌಲರ್‌ಗಳ ಶಿಸ್ತಿನ ದಾಳಿಗೆ ಭಾರತ ತಂಡ ಕೇವಲ 124 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಗಿತ್ತು. ಭಾರತ ಈ ಸಂದರ್ಭದಲ್ಲಿ 7 ವಿಕೆಟ್ ಕಳೆದುಕೊಂಡಿತ್ತು.

ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ಕೇವಲ 2 ವಿಕೆಟ್ ಕಳೆದುಕೊಮಡು ಗುರಿತಲುಪುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು ಇಂಗ್ಲೆಂಡ್ ತಂಡ 1-0 ಅಂತರದಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

Story first published: Saturday, March 13, 2021, 9:09 [IST]
Other articles published on Mar 13, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+