ಬುಮ್ರಾ ದಾಖಲೆ ಮುರಿದ ಯುಜವೇಂದ್ರ ಚಹಾಲ್: ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ನಂಬರ್ 1

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸ್ಪಿನ್ನರ್ ಯುಜವೇಂದ್ರ ಚಹಾಲ್ ಭಾರತದ ಪರ ಅತಿ ಹೆಚ್ಚು ಟಿ20 ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದು, ಕೀ ಬೌಲರ್ ಜಸ್ಪ್ರಿತ್ ಬುಮ್ರಾ ದಾಖಲೆಯನ್ನ ಸರಿಗಟ್ಟಿದ್ದಾರೆ. ಶ್ರೀಲಂಕಾ ಸರಣಿಗೂ ಮುಂಚಿತವಾಗಿ ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್ ಆಗಲು ಕೇವಲ ಒಂದು ವಿಕೆಟ್‌ನ ಅವಶ್ಯಕತೆಯಿತ್ತು.
ಇತ್ತೀಚೆಗಷ್ಟೇ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದ ಚಹಾಲ್, ಶ್ರೀಲಂಕಾ ವಿರುದ್ಧ ಮೊದಲ ಪಂದ್ಯದಲ್ಲಿ ನಾಯಕ ದಸುನ್ ಶಂಕರ (3) ವಿಕೆಟ್ ಪಡೆಯುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ವಿಕಟ್ ಟೇಕರ್ ಆಗಿ ಮಿಂಚಿದ್ರು.
ಯುಜವೇಂದ್ರ ಚಹಾಲ್ ಇದುವರೆಗೂ 53 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 67 ವಿಕೆಟ್ ಕಬಳಿಸಿದ್ದಾರೆ. 8.21 ಎಕಾನಮಿಯಲ್ಲಿ ಬೌಲಿಂಗ್ ಮಾಡಿರುವ ಚಹಾಲ್ ಒಮ್ಮೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದು, ಇವರ ಬೆಸ್ಟ್ ಬೌಲಿಂಗ್ ಫಿಗರ್ 25 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.
ಟೀಂ ಇಂಡಿಯಾದ ನಂಬರ್ ಒನ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಖಾತೆಯಲ್ಲಿ 66 ಟಿ20 ವಿಕೆಟ್‌ಗಳಿವೆ. ಆದ್ರೆ ಚಹಾಲ್ ಈತನನ್ನ ಹಿಂದಿಕ್ಕಿ ಭಾರತ ಪರ ಗರಿಷ್ಠ ವಿಕೆಟ್ ಟೇಕರ್ ಆಗಿದ್ದಾರೆ.
ಜಸ್ಪ್ರೀತ್ ಬುಮ್ರಾ 56 ಟಿ20 ಪಂದ್ಯದಲ್ಲಿ 6.52 ಎಕಾನಮಿಯಲ್ಲಿ ಬೌಲಿಂಗ್ ಮಾಡಿದ್ದು 66 ವಿಕೆಟ್ ಪಡೆದಿದ್ದಾರೆ. ಇವರ ಬೆಸ್ಟ್ ಬೌಲಿಂಗ್ ಫಿಗರ್ 11 ರನ್ ನೀಡಿ 3 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications