For Quick Alerts
ALLOW NOTIFICATIONS  
For Daily Alerts
 

Yuzvendra Chahal: ಟಿ20 ವಿಶ್ವಕಪ್‌ಗೂ ಮುನ್ನ ಬಿಸಿಸಿಐಗೆ ಟೆನ್ಶನ್‌ ತಂದ ಯುಜ್ವೇಂದ್ರ ಚಹಾಲ್ ಬೌಲಿಂಗ್

ಜೂನ್‌ 2 ರಿಂದ ಆರಂಭವಾಗುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ದೇಶಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೆಗಾ ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಏಪ್ರಿಲ್ 30 ರಂದು ಪ್ರಕಟಿಸಿದೆ.

ಭಾರತದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ತಂಡದಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಿದ್ದರು. ಇದರಲ್ಲಿ ಸ್ಪೋಟಕ ಬ್ಯಾಟರ್‌ ಕೆಎಲ್ ರಾಹುಲ್ ಮತ್ತು ರಿಂಕು ಸಿಂಗ್ ಅವರನ್ನು ಹೊರಗಿಡಲಾಗಿತ್ತು. ಬಳಿಕ ಈ ಇಬ್ಬರ ಆಟಗಾರರನ್ನು ಏಕೆ ಹೊರಗಿಡಲಾಗಿದೆ ಎಂಬುದರ ಬಗ್ಗೆ ಅಭಿಮಾನಿಗಳು ಬಿಸಿಸಿಐಗೆ ಕಾರಣ ತಿಳಿಸಲು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡುವ ಮೂಲಕ ಒತ್ತಾಯಿಸಿದ್ದರು. ಮೇ 2 ರಂದು ಭಾರತ ಕ್ರಿಕೆಟ್ ತಂಡದ ನಾಯಕರಾದ ರೋಹಿತ್ ಶರ್ಮಾ ಮತ್ತು ಅಜಿತ್ ಅಗರ್ಕರ್ ಅವರು ಪತ್ರಿಕಾಗೋಷ್ಠಿ ನಡೆಸಿ ಟೀಮ್‌ ಇಂಡಿಯಾ ಆಯ್ಕೆ ಪ್ರಕ್ರಿಯೆ ಬಗ್ಗೆ ತಿಳಿಸಿದ್ದರು.

Yuzvendra Chahal bowling tension for BCCI

ಅದರಂತೆ ಟೀಮ್‌ ಇಂಡಿಯಾದಲ್ಲಿ ಬಹುದಿನಗಳ ಬಳಿಕ ಸ್ಪಿನ್ನರ್‌ ಯುಜ್ವೇಂದ್ರ ಚಹಾಲ್ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ‌ಯುಜ್ವೇಂದ್ರ ಚಹಾಲ್ ಅದ್ಭುತ ಪ್ರದರ್ಶನ ನೀಡುತ್ತಾರೆ. ಅಲ್ಲದೆ ಎದುರಾಳಿ ಬ್ಯಾಟರ್‌ಗಳ ವಿಕೆಟ್‌ಗಳನ್ನು ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿದ್ದಾರೆ. ಹೀಗಾಗಿ ಬಿಸಿಸಿಐ ಆಯ್ಕೆ ಸಮಿತಿ ಚಹಾಲ್‌ ಅವರನ್ನು ಟೀಮ್‌ ಇಂಡಿಯಾಕ್ಕೆ ಸೆಲೆಟ್‌ ಮಾಡಿತ್ತು.

ಆದರೆ ಗುರುವಾರ ಮೇ 2ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್‌ನ 50ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು ಕೇವಲ 1 ರನ್‌ನ ರೋಚಕ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ತಮ್ಮ ಐಪಿಎಲ್‌ ವೃತ್ತಿಜೀವನದಲ್ಲೇ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ಎದುರು 4 ಓವರ್‌ಗಳನ್ನು ಮಾಡಿದ ಚಹಾಲ್‌ ವಿಕೆಟ್‌ ಪಡೆಯುವಲ್ಲಿ ವಿಫಲವಾದರು. ಜೊತೆಗೆ ಬರೊಬ್ಬರಿ 62 ರನ್‌ಗಳನ್ನು ಬಿಟ್ಟು ಕೊಡುವ ಮೂಲಕ ಐಪಿಎಲ್‌ ವೃತ್ತಿಜೀವನದಲ್ಲೇ ಅತ್ಯಂತ ದುಬಾರಿ ಸ್ಪೆಲ್‌ ಮಾಡಿದರು. ಟಿ20 ವಿಶ್ವಕಪ್‌ಗೂ ಮುನ್ನ ಚಹಾಲ್‌ ಅವರ ಈ ಪ್ರದರ್ಶನದಿಂದಾಗಿ ಬಿಸಿಸಿಐಗೆ ಹೊಸ ಟೆನ್ಶನ್‌ ಶುರುವಾಗಿದೆ. ಟಿ20 ವಿಶ್ವಕಪ್ ನಲ್ಲಿ ಚಹಾಲ್‌ ಅವರಿಂದ ಈ ರೀತಿ ಪ್ರದರ್ಶನ ಮುಂದುರೆದರೆ ಟೀಮ್‌ ಇಂಡಿಯಾ ಗೆಲುವಿಗೆ ಮುಳುವಾಗಬಹುದು. ಅದಷ್ಟು ಬೇಗ ಈ ಕಳಪೆ ಬೌಲಿಂಗ್‌ ಫಾರ್ಮ್‌ ನಿಂದ ಚಹಾಲ್‌ ಹೊರಬಂದು ಬಿಸಿಸಿಐ ನಂಬಿಕೆ ಉಳಿಸಿಕೊಳ್ಳುಬೇಕು ಹಾಗು ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿಬೇಕಾಗಿದೆ.

ಆರ್‌ vs ಎಸ್‌ಆರ್‌ಹೆಚ್‌ ಪಂದ್ಯದ ಫಲಿತಾಂಶ :

ರಾಜಸ್ಥಾನ್ ರಾಯಲ್ಸ್ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ ಮತ್ತು ನಿತೀಶ್ ರೆಡ್ಡಿ ಅವರ ಅಮೋಘ ಅರ್ಧಶತಕ ದಾಖಲಿಸಿದರು. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತ್ತು.

202 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ರಿಯಾನ್ ಪರಾಗ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಅಮೋಘ ಅರ್ಧಶತಕಗಳ ಸಹಾಯದಿಂದ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್ ಗಳಿಸಿತ್ತು ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ ಒಂದು ರನ್‌ಗಳಿಂದ ಸೋಲು ಕಂಡಿತ್ತು.ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಭುವನೇಶ್ವರ್ ಕುಮಾರ್ ಮ್ಯಾಜಿಕ್‌ನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆದ್ದು ಬೀಗಿತು.

Story first published: Friday, May 3, 2024, 8:04 [IST]
Other articles published on May 3, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+