ಯುಜುವೇಂದ್ರ ಚಾಹಲ್ ಹೆತ್ತವರಿಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಟೀಮ್ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರ ತಂದೆ ಹಾಗೂ ತಾಯಿ ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಕೊರೊನಾ ವೈರಸ್‌ನ ಲಕ್ಷಣಗಳು ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಯುಜುವೇಂದ್ರ ಚಾಹಲ್ ಪತ್ನಿ ಧನಶ್ರೀ ವರ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ನೀಡಿದ್ದಾರೆ. ಚಾಹಲ್ ತಂದೆಗೆ ಗಂಭೀರ ಲಕ್ಷಣಗಳು ಕಾಣಿಸಿಕೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ ಹಾಗೂ ತಾಯಿಗೆ ಮನೆಯಲ್ಲಿಯೇ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಕೂಡ ಧನಶ್ರೀ ತಿಳಿಸಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಧನಶ್ರೀ ವರ್ಮ ತನ್ನ ತಂದೆ ತಾಯಿಯೂ ಕೊರೊನಾ ವೈರಸ್‌ಗೆ ತುತ್ತಾಗಿದ್ದರು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಚಾಹಲ್ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಬಯೋಬಬಲ್‌ನಲ್ಲಿದ್ದ ವೇಳೆ ಧನಶ್ರೀ ವರ್ಮ ಹೆತ್ತವರು ಕೊರೊನಾ ವೈರಸ್‌ಗೆ ತುತ್ತಾಗಿದ್ದು ಈಗ ಚೇತರಿಕೊಂಡಿದ್ದಾರೆ.
ಮೇ 4ರಂದು ಕೊರೊನಾ ವೈರಸ್‌ನ ಕಾರಣದಿಂದಾಗಿ ಐಪಿಎಲ್ ಟೂರ್ನಿ ರದ್ದಾಗುವುದಕ್ಕೂ ಮುನ್ನ ಯುಜುವೇಂದ್ರ ಚಾಹಲ್ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರವಾಗಿ ಆಡಿದ್ದರು. ಈ ಸಂದರ್ಭದಲ್ಲಿ ಕುಟುಂಬದೊಂದಿಗೆ ಪ್ರಯಾಣಿಸಲು ಅವಕಾಶವನ್ನು ಬಿಸಿಸಿಐ ನೀಡಿದ್ದ ಕಾರಣ ಚಾಹಲ್‌ಗೆ ಅವರೊಂದಿಗೆ ಪತ್ನಿ ಧನಶ್ರೀ ವರ್ಮ ಕೂಡ ಇದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications