ನವದೆಹಲಿ, ಜುಲೈ 14 : ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್, ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ ಎಂಬ ಸುದ್ದಿಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ.
ಜಹೀರ್ ಖಾನ್ ಅವರನ್ನು ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಸಲಹೆಗಾರನನ್ನಾಗಿ ನೇಮಕ ಮಾಡಲಾಗಿದ್ದು, ವಿದೇಶದಲ್ಲಿ ನಡೆಯುವ ಪಂದ್ಯಗಳಿಗೆ ಮಾತ್ರ ಅವರ ಸೇವೆ ಸೀಮಿತ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಗುರುವಾರ ಸ್ಪಷ್ಟಪಡಿಸಿದೆ.

ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಸಲಹೆ ಪಡೆದುಕೊಂಡೇ ಈ ನೇಮಕಾತಿ ನಡೆದಿತ್ತು ಎಂದೂ ತಿಳಿಸಲಾಗಿದೆ. ಮೇ 11ರಂದು ರವಿಶಾಸ್ತ್ರಿ ಅವರ ನೇಮಕಾತಿಯನ್ನು ಪ್ರಕಟಿಸಿದ್ದ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ಅವರನ್ನು ಮತ್ತು ವಿದೇಶದಲ್ಲಿ ನಡೆಯುವ ಪಂದ್ಯಗಳಿಗೆ ಬ್ಯಾಟಿಂಗ್ ಸಲಹೆಗಾರರನ್ನಾಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಿರುವುದಾಗಿ ತಿಳಿಸಿತ್ತು.