World Cup 2023: ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಕ್ಕಾಗಿ ಬಲಿಷ್ಠ ತಂಡ ಪ್ರಕಟಿಸಿದ ಜಿಂಬಾಬ್ವೆ
ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಅರ್ಹತೆ ಪಡೆಯುವ ಆಸೆಯೊಂದಿಗೆ ಜಿಂಬಾಬ್ವೆ ಏಕದಿನ ವಿಶ್ವಕಪ್ ಕ್ವಾಲಿಫೈಯರ್ ಪಂದ್ಯಕ್ಕೆ ಬಲಿಷ್ಠ ತಂಡವನ್ನು ಪ್ರಕಟಿಸಿದೆ.
ಪ್ರಮುಖವಾಗಿ ನಾಯಕ ಕ್ರೇಗ್ ಎರ್ವಿನ್ ನೇತೃತ್ವದಲ್ಲಿ ಕಠಿಣ ಕೆಲಸವನ್ನು ಹೊಂದಿರುವುದರಿಂದ, ವಿಶ್ವಕಪ್ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರಮುಖ ಆಟಗಾರರನ್ನು ಜಿಂಬಾಬ್ವೆ ಆಯ್ಕೆ ಮಾಡಿದೆ.

ಬ್ಲೆಸ್ಸಿಂಗ್ ಮುಜರಬಾನಿ ವೇಗದ ದಾಳಿಯನ್ನು ಮುನ್ನಡೆಸಲಿದ್ದರೆ, ರಿಚರ್ಡ್ ನಗರವ ಮತ್ತು ವೆಲ್ಲಿಂಗ್ಟನ್ ಮಸಕಡ್ಜಾ ಮುಜರಬಾನಿಗೆ ಪೂರಕ ಬೌಲರ್‌ಗಳಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಆಲ್‌ರೌಂಡರ್ ಸಿಕಂದರ್ ರಝಾ, ಜಿಂಬಾಬ್ವೆ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಪುನರಾಗಮನ ಮಾಡುವ ಗುರಿ ಹೊಂದಿರುವುದರಿಂದ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುತ್ತದೆ.
ಇದೇ ವೇಳೆ, ಆತಿಥೇಯ ಜಿಂಬಾಬ್ವೆ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದಾರೆ ಮತ್ತು ಜೂನ್ 18ರಂದು ನೇಪಾಳದ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಲಿದ್ದಾರೆ. ಆ ಬಳಿಕ ನೆದರ್ಲ್ಯಾಂಡ್ಸ್ ವಿರುದ್ಧ (ಜೂನ್ 20) ಮತ್ತು ವೆಸ್ಟ್ ಇಂಡೀಸ್ ವಿರುದ್ಧ (ಜೂನ್ 24) ಸವಾಲು ಹಾಕಲಿದ್ದಾರೆ. ಕೊನೆಯ ಲೀಗ್ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಅಮೇರಿಕಾ ವಿರುದ್ಧ ಜೂನ್ 26ರಂದು ಆಡಲಿದೆ.

ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಕ್ಕಾಗಿ ಜಿಂಬಾಬ್ವೆ ತಂಡ:
ರಿಯಾನ್ ಬರ್ಲ್, ಟೆಂಡೈ ಚಟಾರಾ, ಕ್ರೇಗ್ ಎರ್ವಿನ್, ಬ್ರಾಡ್ಲಿ ಇವಾನ್ಸ್, ಜಾಯ್ಲಾರ್ಡ್ ಗುಂಬಿ, ಲ್ಯೂಕ್ ಜೊಂಗ್ವೆ, ಇನ್ನೋಸೆಂಟ್ ಕೈಯಾ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಬಾನಿ, ರಿಚರ್ಡ್ ನಗರವ, ಸಿಕಂದರ್ ರಜಾ, ಸೀನ್ ವಿಲಿಯಮ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications