ಮಹಿಳಾ ಕ್ರಿಕೆಟ್ ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ಜಿಂಬಾಬ್ವೆ ಆತಿಥ್ಯ

ಹರಾರೆ: ನವೆಂಬರ್ 21 ರಿಂದ ಡಿಸೆಂಬರ್ 5 ರ ನಡುವೆ ಮಹಿಳಾ ವಿಶ್ವಕಪ್ ಅರ್ಹತಾ ಪಂದ್ಯವನ್ನು ಜಿಂಬಾಬ್ವೆ ಆಯೋಜಿಸಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ. 10 ತಂಡಗಳ ಟೂರ್ನಮೆಂಟ್ ನ ವೇಳಾಪಟ್ಟಿಯನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಮುಂದಿನ ವರ್ಷ ಮಾರ್ಚ್ 4 ರಿಂದ ಏಪ್ರಿಲ್ 3 ರವರೆಗೆ ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಮಹಿಳಾ ವಿಶ್ವಕಪ್‌ಗೆ ಅರ್ಹತಾ ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ನಡೆಸಲಾಗುತ್ತದೆ.
ಅರ್ಹತಾ ಸುತ್ತಿನಲ್ಲಿ ಮುನ್ನಡೆ ಸಾಧಿಸುವ ತಂಡಗಳು ಈಗಾಗಲೇ ಅರ್ಹತೆ ಪಡೆದುಕೊಂಡಿರುವ ಐದು ತಂಡಗಳಾದ ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಮತ್ತು ಆತಿಥೇಯ ನ್ಯೂಜಿಲೆಂಡ್ ತಂಡಗಳ ಬಣವನ್ನು ಸೇರಿಕೊಳ್ಳಲಿವೆ. ಐಸಿಸಿ ವಿಮೆನ್ಸ್ ಚಾಂಪಿಯನ್‌ಶಿಪ್ ವೇಳೆ ಇನ್ನೆರಡು ತಂಡಗಳು ಸೇರ್ಪಡೆಗೊಂಡು ಒಟ್ಟು 10 ತಂಡಗಳು ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿವೆ.
ಪಂದ್ಯಾವಳಿಯ ಐದನೇ ಆವೃತ್ತಿಯಲ್ಲಿ ಬಾಂಗ್ಲಾದೇಶ, ಐರ್ಲೆಂಡ್, ನೆದರ್‌ಲ್ಯಾಂಡ್ಸ್, ಪಾಕಿಸ್ತಾನ, ಪಪುವಾ ನ್ಯೂಗಿನಿಯಾ, ಶ್ರೀಲಂಕಾ, ಥೈಲ್ಯಾಂಡ್, ಅಮೇರಿಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ತಂಡಗಳು ಸ್ಪರ್ಧಿಸಲಿವೆ.
"ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಅರ್ಹತಾ ಪಂದ್ಯವು ನಮ್ಮ ಕ್ಯಾಲೆಂಡರ್‌ನಲ್ಲಿ ಅತ್ಯಂತ ಮಹತ್ವದ ಈವೆಂಟ್‌ಗಳಾಗಿವೆ. ಏಕೆಂದರೆ ಇದು ತಂಡಗಳಿಗೆ ವಿಶ್ವಕಪ್‌ಗೆ ಅರ್ಹತೆ ಪಡೆಯುವ ಅವಕಾಶವನ್ನು ಒದಗಿಸುವುದಲ್ಲದೆ ಐಸಿಸಿ ಮಹಿಳಾ ಚಾಂಪಿಯನ್‌ಶಿಪ್‌ನ ಮುಂದಿನ ಆವೃತ್ತಿಯಲ್ಲಿ ಅಂತಿಮ ಎರಡು ತಂಡಗಳು ಭಾಗವಹಿಸುವವರನ್ನು ನಿರ್ಧರಿಸುತ್ತದೆ," ಎಂದು ಐಸಿಸಿ ಈವೆಂಟ್‌ಗಳ ಮುಖ್ಯಸ್ಥ ಕ್ರಿಸ್ ಟೆಟ್ಲಿ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications