
ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ವೈಟ್ ಬಾಲ್ ಸರಣಿಯಲ್ಲಿ ಆಡುತ್ತಿದ್ದು ಏಕದಿನ ಸರಣಿಯ ಅಂತಿಮ ಪಂದ್ಯ ನಡೆಯುತ್ತಿದೆ. ಇಂದು ಮೂರನೇ ಏಕದಿನ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಜಿಂಬಾಬ್ವೆ ತಂಡ ಮೊದಲಿಗೆ ಬ್ಯಾಟಿಂಗ್ ಆರಂಭಿಸಿದೆ.
ಇನ್ನು ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದು ಸರಣಿ ವಶಕ್ಕೆ ಪಡೆದಿರುವ ಅಪ್ಘಾನಿಸ್ತಾನ ತಂಡ ಈ ಪಂದ್ಯದಲ್ಲಿಯೂ ಈ ಹಿಂದಿನ ಪಂದ್ಯದಲ್ಲಿ ಈ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.
ಸ್ಕೋರ್‌ಕಾರ್ಡ್ ಹೀಗಿದೆ:
ಇನ್ನು ಈ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದ ಅಫ್ಘಾನಿಸ್ತಾನ ತಂಡ ಭರ್ಜರಿ ಗೆಲುವು ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ರಹ್ಮತ್ ಹಾಗೂ ನಾಯಕ ಹಶ್ಮತುಲ್ಲಾ ಶಹಿದಿ ಅವರ ಅದ್ಭುತ ಜೊತೆಯಾಟದ ಕಾರಣದಿಂದಾಗಿ ದೊಡ್ಡ ಮೊತ್ತವನ್ನು ಪೇರಿಸಿತ್ತು. ನಿಗದಿತ 50 ಓವರ್‌ಗಳಲ್ಲಿ ಅಫ್ಘಾನಿಸ್ತಾನ 276 ರನ್‌ಗಳನ್ನು ಗಳಿಸಿತ್ತು. ಆದರೆ ಇದನ್ನು ಬೆನ್ನಟ್ಟಲು ಜಿಂಬಾಬ್ವೆ ತಂಡ ವಿಫಲವಾಗಿತ್ತು. ನಿಗದಿತ 50 ಓವರ್‌ಗಳಲ್ಲಿ ಜಿಂಬಾಬ್ವೆ ತಂಡ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 216 ರನ್‌ಗಳಿಸಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಮೊಹಮ್ಮದ್ ನಬಿ ನಾಲ್ಕು ವಿಕೆಟ್ ಪಡೆದು ಬೌಲಿಂಗ್‌ನಲ್ಲಿ ಮಿಂಚಿದ್ದರು
ಇನ್ನು ಎರಡನೇ ಪಂದ್ಯದಲ್ಲಿಯೂ ಅಫ್ಘಾನಿಸ್ತಾನ ತಂಡದ ಬೌಲಿಂಗ್ ವಿಭಾಗ ಹಾಗೂ ಬ್ಯಾಟಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ 228 ರನ್‌ಗಳಿಸಲಷ್ಟೇ ಶಕ್ತವಾಯಿತು. ಇದನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡದ ಪರವಾಗಿ ಇಬ್ರಾಹಿಮ್ ಜದ್ರೇನ್ ಶತಕ ಸಿಡಿಸಿದರೆ ರಹ್ಮತ್ ಶಾ 88 ರನ್‌ಗಳ ಕೊಡುಗೆ ನೀಡಿದರು. ಈ ಮೂಲಕ ಕೇವಲ 2 ವಿಕೆಟ್ ಕಳೆದುಕೊಂಡು ಅಫ್ಘಾನಿಸ್ತಾನ ಸುಲಭ ಗೆಲುವು ಸಾಧಿಸಿತು. ಇದೀಗ ಮೂರನೇ ಪಂದ್ಯದಲ್ಲಿಯೂ ಇಂಥಾದ್ದೇ ಪ್ರದರ್ಶನ ನೀಡಲು ಅಫ್ಘಾನಿಸ್ತಾನ ಬಳಗ ಕಾತರಿಸುತ್ತಿದೆ.
ಜಿಂಬಾಬ್ವೆ ಆಡುವ ಬಳಗ: ವೆಸ್ಲಿ ಮಾಧೆವೆರೆ, ಇನೊಸೆಂಟ್ ಕೈಯಾ, ಕ್ರೇಗ್ ಎರ್ವಿನ್ (ನಾಯಕ), ಡಿಯೋನ್ ಮೈಯರ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಮಿಲ್ಟನ್ ಶುಂಬಾ, ರಿಯಾನ್ ಬರ್ಲ್, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ, ತನಕಾ ಚಿವಂಗಾ
ಬೆಂಚ್: ಡೊನಾಲ್ಡ್ ತಿರಿಪಾನೊ, ಟಕುಡ್ಜ್ವಾನಾಶೆ ಕೈಟಾನೊ, ಕ್ಲೈವ್ ಮದಂಡೆ, ಐನ್ಸ್ಲೆ ನಡ್ಲೋವು, ಲ್ಯೂಕ್ ಜೊಂಗ್ವೆ
ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಫಜಲ್ಹಕ್ ಫಾರೂಕಿ, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್
ಬೆಂಚ್: ಶಾಹಿದುಲ್ಲಾ ಕಮಾಲ್, ಜಿಯಾ-ಉರ್-ರೆಹಮಾನ್, ಇಕ್ರಮ್ ಅಲಿಖಿಲ್, ರಿಯಾಜ್ ಹಸನ್, ಯಾಮಿನ್ ಅಹ್ಮದ್ಝೈ