ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
ಇಂಡಿಯನ್ ಸೂಪರ್ ಲೀಗ್ ಪೂರ್ವಭಾವಿಗಳು
VS

ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ; ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಮಗಳು

Brazilian Football Legend Pele Hospitalized; Daughter Who Gave Information About Health

ಬ್ರೆಜಿಲಿಯನ್ ಫುಟ್ಬಾಲ್ ದಂತಕಥೆ ಪೀಲೆ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಎಂದು ಅವರ ಮಗಳು ಬುಧವಾರ ಮಾಹಿತಿ ನೀಡಿದ್ದಾರೆ.

ಈ ಹಿಂದೆ ಕೊಲೊನ್ ಟ್ಯೂಮರ್‌ಗೆ ಒಳಗಾದ ನಂತರ ಚಿಕಿತ್ಸೆಯಲ್ಲಿದ್ದ 82 ವರ್ಷದ ಫುಟ್ಬಾಲ್ ದಂತಕಥೆ ಪೀಲೆಗೆ ಇದು ಇತ್ತೀಚಿನ ಆರೋಗ್ಯ ಸಮಸ್ಯೆಯಾಗಿದೆ.

ಅವರು(ಪೀಲೆ) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪೀಲೆ ಅವರ ಮಗಳು ಕೆಲಿ ನಾಸಿಮೆಂಟೊ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

"ತಂದೆಯ ಆರೋಗ್ಯದಲ್ಲಿ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಅಥವಾ ಶೀಘ್ರ ಗುಣಮುಖರಾಗಲಿದ್ದಾರೆ. ನಾವು ನಿಮ್ಮಿಂದ ಕಾಳಜಿ ಮತ್ತು ಪ್ರೀತಿಯನ್ನು ಆಶಿಸುತ್ತೇವ," ಎಂದು ಕೆಲಿ ನಾಸಿಮೆಂಟೊ ತಿಳಿಸಿದ್ದಾರೆ.

ಕಳೆದ ವರ್ಷ ಕೊಲೊನ್ ಕ್ಯಾನ್ಸರ್ ಇರುವುದು ಪತ್ತೆಯಾದಾಗಿನಿಂದ ಪೀಲೆ ನಿಯಮಿತವಾಗಿ ಕಿಮೊಥೆರಪಿ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಅವರು ಸೆಪ್ಟೆಂಬರ್ 2021ರಲ್ಲಿ ಕ್ಯಾನ್ಸರ್ ಗೆಡ್ಡೆಯನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಆಸ್ಪತ್ರೆಯಲ್ಲಿ ಒಂದು ತಿಂಗಳು ಕಳೆದಿದ್ದರು.

ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ ಎಂದು ಪರಿಗಣಿಸಲ್ಪಟ್ಟ ಎಡ್ಸನ್ ಅರಾಂಟೆಸ್ ಡೊ ನಾಸಿಮೆಂಟೊ- ಪೀಲೆ ಅವರ ನಿಜವಾದ ಹೆಸರು. ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಮೂರು ವಿಶ್ವಕಪ್‌ಗಳನ್ನು ಗೆದ್ದ ಇತಿಹಾಸದಲ್ಲಿ ಏಕೈಕ ಆಟಗಾರ (1958, 1962 ಮತ್ತು 1970) ಪೀಲೆ ಅವರಾಗಿದ್ದಾರೆ. ಅವರು ಕ್ರೀಡೆಯಲ್ಲಿ ಅತ್ಯಂತ ಉನ್ನತ ವೃತ್ತಿಜೀವನವನ್ನು ಹೊಂದಿದ್ದರು. 1977ರಲ್ಲಿ ನಿವೃತ್ತರಾಗುವ ಮೊದಲು 1,000ಕ್ಕೂ ಹೆಚ್ಚು ಗೋಲುಗಳನ್ನು ಗಳಿಸಿದ್ದಾರೆ.

ಪೀಲೆ ಅವರ ಆಟಗಳು ಹೆಚ್ಚು ಅಪರೂಪವಾಗಿವೆ. ಅವರು ಗಳಿಸಿದ ಗೋಲುಗಳು ಸಾಮಾಜಿಕ ಮಾಧ್ಯಮದಲ್ಲಿ ಇಂದಿಗೂ ಸಕ್ರಿಯವಾಗಿವೆ. ಇತ್ತೀಚೆಗೆ ಬ್ರೆಜಿಲಿಯನ್ ರಾಷ್ಟ್ರೀಯ ತಂಡ 2022ರ ವಿಶ್ವಕಪ್‌ನಿಂದ ಫಿಫಾ ಟ್ರೋಫಿಯನ್ನು ಗೆಲ್ಲುವುದನ್ನು ಅವರು ಬಯಸಿದ್ದಾರೆ ಎಂದು ತಿಳಿದುಬಂದಿದೆ.

Story first published: Wednesday, November 30, 2022, 23:14 [IST]
Other articles published on Nov 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X