FIFA 2026: ಉದ್ಘಾಟನಾ ಪಂದ್ಯದ ಹಿನ್ನೆಲೆ ಮೆಕ್ಸಿಕೋದಲ್ಲಿ ಶಾಲೆಗಳಿಗೆ ರಜೆ, ವರ್ಕ್ ಫ್ರಮ್ ಹೋಮ್ ಘೋಷಣೆ
23ನೇ ಫಿಫಾ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿಯ ಫಿಫಾ ವಿಶ್ವಕಪ್‌ಗೆ ಒಟ್ಟು 16 ಮೈದಾನಗಳು ಆತಿಥ್ಯ ನೀಡಲಿವೆ. ಈ ಫುಟ್ಬಾಲ್ ವಿಶ್ವಕಪ್‌ನ್ನು ಅಮೆರಿಕ, ಮೆಕ್ಸಿಕೊ ಹಾಗೂ ಕೆನಡಾದಲ್ಲಿ ನಡೆಯಲಿದೆ. ಈ ವೇಳೆ ಮೆಕ್ಸಿಕೊ ತನ್ನ ಮೊದಲ ಪಂದ್ಯವನ್ನು ಜೂನ್ 12 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.
ಮೆಕ್ಸಿಕೋ ಮೊದಲ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದೆ. ಈ ಪಂದ್ಯವನ್ನು ನೋಡಲು ಆತಿಥೇಯ ದೇಶದ ಅಭಿಮಾನಿಗಳು, ಪ್ರವಾಸಿಗರು ಜಮಾವಣೆ ಆಗಲಿದ್ದಾರೆ. ಹೀಗಾಗಿ ರಾಜಧಾನಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಅಲ್ಲಿನ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು (ವರ್ಕ್ ಫ್ರಮ್ ಹೋಮ್) ಮೆಕ್ಸಿಕೋ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಮಂಗಳವಾರ ಸುಗ್ರೀವಾಜ್ಞೆಯನ್ನು ಹೊರಡಿಸಿದ್ದಾರೆ.

ಎಸ್ಟಾಡಿಯೊ ಅಜ್ಟೆಕಾದಲ್ಲಿ ಮೆಕ್ಸಿಕೊ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ನಡೆಯಲಿದೆ. ಈ ವೇಳೆ ಉಂಟಾಗುವ ಟ್ರಾಫಿಕ್ ಕಂಟ್ರೋಲ್ ಮಾಡಲು ಅಧಿಕಾರಿಗಳು ಹರಸಾಹಸ ಪಡುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೆಕ್ಸಿಕೊದ ನಿವಾಸಿಗಳು, ಪಂದ್ಯವನ್ನು ನೋಡಲು ಬರುವ ಪ್ರವಾಸಿಗರು, ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಶಾಲೆ ಕಾಲೇಜುಗಳಿಗೆ ರಜೆ
ಫಿಫಾ ವಿಶ್ವಕಪ್ ವೇಳೆ ಆಗಬಹುದಾದ ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಶಾಲೆ, ವಿಶ್ವವಿದ್ಯಾಲಯಗಳು ಹಾಗೂ ಸಾರ್ವಜನಿಕ ಹಾಗೂ ಖಾಸಗಿ ಕ್ಷೇತ್ರಗಳು ಎರಡು ದಿನ ಮುಚ್ಚಿರುತ್ತವೆ. ಆದರೆ ಆರೋಗ್ಯ, ಭದ್ರತೆ, ತುರ್ತು ಸೇವೆಗಳು ಮತ್ತು ವಿಶ್ವಕಪ್ ನಿರ್ವಹಣೆಯ ಸಿಬ್ಬಂದಿಗೆ ಮಾತ್ರ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಖಾಸಗಿ ಕಂಪನಿಯ ಸಿಬ್ಬಂದಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವಂತೆ ಸರ್ಕಾರ ಸೂಚಿಸಿದೆ.
ಮೆಕ್ಸಿಕೊದ ಎಸ್ಟಾಡಿಯೊ ಅಜ್ಟೆಕಾ' ಕ್ರೀಡಾಂಗಣದಲ್ಲಿ ಆತಿಥೇಯ ಮೆಕ್ಸಿಕೊ, ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯವನ್ನು ಮೈದಾನದಲ್ಲಿ ಕುಳಿತು ವೀಕ್ಷಿಸಲು 87 ಸಾವಿರ ಪ್ರೇಕ್ಷಕರಿಗೆ ಅವಕಾಶ ಇದೆ. ಈ ಪಂದ್ಯ ಮತ್ತು ಇದರ ಜೊತೆಗಿನ ಸಂಭ್ರಮಾಚರಣೆಗಳನ್ನು ನೋಡಲು ಸ್ಥಳೀಯರು ಹಾಗೂ ವಿದೇಶಿ ಪ್ರವಾಸಿಗರು ಭಾರಿ ಸಂಖ್ಯೆಯಲ್ಲಿ ನಗರಕ್ಕೆ ಹರಿದು ಬರುವ ನಿರೀಕ್ಷೆಯಿದ್ದು, ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಕಾನೂನು ಸಲಹೆಗಾರ್ತಿಯಾದ ಲೂಯಿಸಾ ಮರಿಯಾ ಅಲ್ಕಾಲ್ಡೆ ಲುಜಾನ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಲ್ಲ ಅಗತ್ಯ ಸೇವೆಗಳು ಮುಂದುವರೆಯಲಿವೆ. ಸಾರ್ವಜನಿಕ ವಲಯದ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳನ್ನು ಮನೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications