Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಫಿಫಾ ವಿಶ್ವಕಪ್: ರಾಷ್ಟ್ರಗೀತೆಗೆ ಧ್ವನಿಗೂಡಿಸದೆ ಹಿಜಾಬ್ ವಿರೋಧಿ ಹೋರಾಟಕ್ಕೆ ಇರಾನ್ ಆಟಗಾರರ ಬೆಂಬಲ

FIFA World cup: Iran Players Show Support for Anti-Hijab Protests Ahead of Match Against England

ಇರಾನ್‌ನಲ್ಲಿ ಹಿಜಾಬ್ ವಿರುದ್ಧದ ಹೋರಾಟ ತೀವ್ರಮಟ್ಟಕ್ಕೆ ತಲುಪಿದೆ. ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ಅಲ್ಲಿನ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಅಲ್ಲಿನ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳೆಲ್ಲವೂ ವಿಫಲವಾಗಿದ್ದು ದಿನದಿಂದ ದಿನಕ್ಕೆ ಪ್ರತಿಭಟನೆಯ ತೀವ್ರತೆ ಹೆಚ್ಚಾಗುತ್ತಲೇ ಇದೆ. ಈ ಹೋರಾಟದಲ್ಲಿ ಸಾಕಷ್ಟು ಪ್ರಾಣಹಾನಿ ಕೂಡ ನಡೆದಿದೆ. ಈಗ ಈ ಹಿಜಾಬ್ ವಿರೋಧಿಸಿ ಹೋರಾಟ ಫುಟ್ಬಾಲ್ ಅಂಗಳಕ್ಕೂ ಕಾಲಿಟ್ಟಿದೆ.

ಫಿಫಾ ವಿಶ್ವಕಪ್‌ನಲ್ಲಿ ಸೋಮವಾರ ಇರಾನ್ ಹಾಗೂ ಇಂಗ್ಲೆಂಡ್ ತಂಡಗಳು ಈ ವಿಶ್ವಕಪ್‌ನ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಖಲೀಫಾ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಿತು. ಈ ಪಂದ್ಯದ ಆರಂಭಕ್ಕೂ ಮುನ್ನ ನಡೆಯುವ ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಇರಾನ್ ತಂಡದ ಆಟಗಾರರ ತಮ್ಮದೇ ರೀತಿಯಲ್ಲಿ ಹಿಜಾಬ್ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಇರಾನ್ ತಂಡದ ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಇರಾನ್ ತಂಡದ 11 ಆಟಗಾರರು ಕೂಡ ರಾಷ್ಟ್ರಗೀತೆಗೆ ಧ್ವನಿಗೂಡಿಸುವ ಬದಲಾಗಿ ಮೌನವಾಗಿ ನಿಂತಿದ್ದರು. ಈ ಮೂಲಕ ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್ ವಿರುದ್ಧದ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಇರಾನ್ ಆಟಗಾರರ ಈ ಪ್ರತಿಭಟನೆಗೆ ಇರಾನ್ ಅಭಿಮಾನಿಗಳು ಭಾವುಕವಾಗಿ ಸ್ಪಂದಿಸಿದ್ದಾರೆ. ಇನ್ನು ಕೆಲ ಅಭಿಮಾನಿಗಳು ಹಿಜಾಬ್ ವಿರೋಧಿ ಪ್ರತಿಭಟನೆಗೆ ಬೆಂಬಲವನ್ನು ಸೂಚಿಸಿದ ಬರಹವಿರುವ ಟಿಶರ್ಟ್‌ಗಳನ್ನು ಧರಿಸಿದ್ದರು.

22ರ ಹರೆಯದ ಇರಾನ್‌ನ ಯುವತಿ ಮಾಶಾ ಅಮೀನಿ ಸೂಕ್ತವಾಗಿ ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಇರಾನ್‌ನ ನೈತಿಕ ಪೊಲೀಸರು ಆಕೆಯನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಆದರೆ ಆ ಯುವತಿ ಪೊಲೀಸರ ವಶದಲ್ಲಿ ಇದ್ದಾಗಲೇ ಮೃತಪಟ್ಟಿದ್ದರು. ಈ ಘಟನೆ ಇರಾನ್‌ನಲ್ಲಿ ಹಿಜಾಬ್ ವಿರೋಧಿ ಹೋರಾಟಕ್ಕೆ ಕಾರಣವಾಯಿತು. ದೇಶಾದ್ಯಂತ ಪ್ರತಿಭಟನೆಗಳು ತೀವ್ರವಾಗಿ ನಡೆಯುತ್ತಿದ್ದು 419ಕ್ಕೂ ಅಧಿಕ ಮಂದಿ ಈ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್‌ನ ಮಾನವ ಹಕ್ಕುಗಳ ಹೋರಾಟಗಾರರು ಮಾಹಿತಿ ನೀಡಿದ್ದಾರೆ. ಇತ್ತ ಇರಾನ್ ಸರ್ಕಾರ ಈ ಪ್ರತಿಭಟನೆಗಳನ್ನು ಹತ್ತಿಕ್ಕಲು ಬೇಕಾದ ಪ್ರಯತ್ನಗಳನ್ನು ನಡೆಸುತ್ತಿದೆ.

ಇನ್ನು ಇಂಗ್ಲೆಂಡ್ ಹಾಗೂ ಇರಾನ್ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 6-2 ಗೋಲುಗಳ ಅಂತರದಿಂದ ಇರಾನ್ ತಂಡದ ವಿರುದ್ಧ ಭರ್ಜರಿಯಾಗಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಇಂಗ್ಲೆಂಡ್ ಶುಭಾರಂಭ ಮಾಡುವಲ್ಲಿ ಯಶಸ್ವಿಯಾಗಿದೆ. ಇರಾನ್ ಸೋಲಿನ ನಿರಾಸೆ ಅನುಭವಿಸಿದೆ.

Story first published: Monday, November 21, 2022, 22:14 [IST]
Other articles published on Nov 21, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+