ವಿಶ್ವ ಫುಟ್ಬಾಲ್ ಲೋಕದ ಧ್ರುವ ತಾರೆ ಲಿಯೋನೆಲ್ ಮೆಸ್ಸಿ ಅವರ ಬಹುನಿರೀಕ್ಷಿತ ಭಾರತದ ಪ್ರವಾಸಕ್ಕೆ ಕ್ಷಣಗಣನೆ ಆರಂಭವಾಗಿದೆ. ಇವರನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇವರು ಮುಂಬೈನ ಅಂತಾರಾಷ್ಟ್ರೀಯ ಫುಟ್ಬಾಲ್ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲಿಯೋನೆಲ್ ಮೆಸ್ಸಿ ಶನಿವಾರ ಬೆಳಗಿನ ಜಾವ 1:30 ಕ್ಕೆ ಭಾರತಕ್ಕೆ ಆಗಮಿಸಲಿದ್ದು, ದೇಶದ ಹಲವು ನಗರಗಳಲ್ಲಿ ಪ್ರವಾಸ ಮಾಡಲಿದ್ದಾರೆ.
ಈ ವಾರದ ಆರಂಭದಲ್ಲಿ ತಮ್ಮ ವೃತ್ತಿಜೀವನದ 48 ನೇ ಟ್ರೋಫಿಯನ್ನು ಗೆದ್ದ ಲೆಜೆಂಡರಿ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ, ತಮ್ಮ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವಾರು ಸೆಲೆಬ್ರಿಟಿಗಳು ಮತ್ತು ಹಲವಾರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಬಹು ನಿರೀಕ್ಷಿತ ಮೆಸ್ಸಿ ಅವರ ಭೇಟಿ ಡಿಸೆಂಬರ್ 14ರ ಮುಂಬೈಗೂ ಭೇಟಿ ನೀಡಲಿದ್ದಾರೆ. ಕೋಲ್ಕತ್ತಾಗೆ ನೇರವಾಗಿ ಆಗಮಿಸಲಿರುವ ಮೆಸ್ಸಿಯನ್ನು ಬಂಗಾಳದ ಸಂಸ್ಕೃತಿ ಮತ್ತು ಕಲೆಯ ಮೂಲಕ ಸ್ವಾಗತಿಸಲಾಗುತ್ತದೆ. ಇದರ ನಂತರ, ಅವರು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಇವರ ಗೌರವಾರ್ಥವಾಗಿ ಭವ್ಯ ಕಾರ್ಯಕ್ರಮ ನಡೆಯಲಿದೆ. ಮೆಸ್ಸಿಯನ್ನು ನೋಡಲು ಲಕ್ಷಾಂತರ ಜನರು ಅಲ್ಲಿ ಸೇರುವ ನಿರೀಕ್ಷೆ ಇದೆ.

ಈ ವೇಳೆ ಮೆಸ್ಸಿ ಐತಿಹಾಸಿಕ ವಾಂಖೇಡೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಯುಐಎಸ್ ಸೌರೆಜ್ ಮತ್ತು ರೋಡ್ರಿಗೋ ಡಿ ಪಾಲ್ ಇವರೊಂದಿಗೆ ಇರಲಿದ್ದಾರೆ. ಟೈಗರ್ ಶ್ರಾಫ್, ಜಾಕಿ ಶ್ರಾಫ್ ಮತ್ತು ಜಾನ್ ಅಬ್ರಹಾಂ, ವೇದಿಕೆ ಮೇಲೆ ಹಾಜರಿರಲಿದ್ದಾರೆ. ಈ ಸಮಾರಂಭದಲ್ಲಿ ಬಾಲಿವುಡ್‌ನ ಖ್ಯಾತನಾಮ ಕಲಾವಿದರು, ಕ್ರಿಕೆಟ್ ಆಟಗಾರರು, ಕ್ರೀಡಾ ಪಟುಗಳು ಈ ಸಮಾರಂಭದ ಶೋಭೆಯನ್ನು ಇನ್ನಷ್ಟು ಹೆಚ್ಚಿಸಲಿದ್ದಾರೆ. ಈ ಸಮಾರಂಭದಲ್ಲಿ ಕ್ರಿಕೆಟ್ ದೇವರು ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್, ವಿಶ್ವಕಪ್ ವಿಜೇತ ನಾಯಕ ಎಂಎಸ್ ಧೋನಿ, ಬಾಲಿವುಡ್ ಬಾದ್‌ಷಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 13: ಮೆಸ್ಸಿ ಕೋಲ್ಕತ್ತಾದಲ್ಲಿ ನಡೆಯಲಿರುವ 7vs7 ಸೆಲೆಬ್ರಿಟಿ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಂದ್ಯದ ಬಳಿಕ ಮೆಸ್ಸಿ ಕೋಲ್ಕತ್ತಾದಿಂದ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.
ಡಿಸೆಂಬರ್ 13 ಸಂಜೆ: ಹೈದರಾಬಾದ್‌ನ ರಾಜೀವ್ ಗಾಂಧೀ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಡಿಸೆಂಬರ್ 14: ಮೆಸ್ಸಿ ಬಳಿಕ ಮುಂಬೈಗೆ ಪ್ರವಾಸ ಬೆಳೆಸಲಿದ್ದಾರೆ. ಈ ವೇಳೆ ಇವರು ಪಡೇಲ್ ಗೋಟ್ ಕಪ್‌ನಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಗಣ್ಯವ್ಯಕ್ತಿಗಳನ್ನು ಭೇಟಿ ಮಾಡಿ ಶೂಟೌಟ್ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ.
ಲಿಯೋನೆಲ್ ಮೆಸ್ಸಿ 14 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಈ ಹಿಂದೆ ಭಾರತಕ್ಕೆ ಬಂದಾಗ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅರ್ಜೆಂಟೀನಾ ಮತ್ತು ವೆನೆಜುವೆಲಾ ನಡುವಿನ ಫುಟ್ಬಾಲ್ ಪಂದ್ಯ ನಡೆಯುತ್ತಿತ್ತು. ಆಗಲೂ, ಮೆಸ್ಸಿ ಆಗಮನವು ಅಪಾರ ಜನಸಮೂಹವನ್ನು ಸೆಳೆಯಿತು. ಈಗ, ಹಲವು ವರ್ಷಗಳ ನಂತರ, ಮೆಸ್ಸಿ ಭಾರತಕ್ಕೆ ಭೇಟಿ ನೀಡುತ್ತಿರುವುದು ಫುಟ್ಬಾಲ್ ಅಭಿಮಾನಿಗಳಿಗೆ ಹಬ್ಬಕ್ಕಿಂತ ಕಡಿಮೆಯಿಲ್ಲ.
ಲಿಯೋನೆಲ್ ಮೆಸ್ಸಿ ಅವರ ಕಾರ್ಯಕ್ರಮವನ್ನು ವೀಕ್ಷಿಸಲು ಟಿಕೆಟ್ ಬೆಲೆಗಳು ಸುಮಾರು ₹4,500 ರಿಂದ ಪ್ರಾರಂಭವಾಗುತ್ತವೆ. ಇನ್ನು ಮುಂಬೈ ನಗರದಲ್ಲಿ ಇದರ ಬೆಲೆ ₹8,250 ರಿಂದ ಪ್ರಾರಂಭವಾಗುತ್ತವೆ.