ಡೆಂಗ್ಯೂ ಜ್ವರಕ್ಕೆ ಮಹಿಳಾ ಫುಟ್ಬಾಲರ್ ಪೂನಂ ಬಲಿ
ವಾರಣಾಸಿ, ಅಕ್ಟೋಬರ್ 20: ಸೊಳ್ಳೆಗಳ ಮೂಲಕ ಹರಡುವ ಡೆಂಗ್ಯೂ ಜ್ವರಕ್ಕೆ ಪ್ರತಿಭಾವಂತ ಫುಟ್ಬಾಲ್ ಆಟಗಾರ್ತಿ ಪೂನಂ ಚೌವ್ಹಾಣ್ ಬಲಿಯಾಗಿದ್ದಾರೆ.
ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಪೂನಮ್ ಅವರು ಭಾರತದ ಭವಿಷ್ಯದ ತಾರೆಯಾಗಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 29 ವರ್ಷ ವಯಸ್ಸಿನ ಪೂನಮ್ ರನ್ನು ಅವರ ಕುಟುಂಬದವರು ವಾರಣಾಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಉತ್ತರ ಪ್ರದೇಶದಿಂದ ಭಾರತ ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದ ಮೊದಲ ಮಹಿಳಾ ಫುಟ್ಬಾಲರ್ ಎನಿಸಿಕೊಂಡಿದ್ದರು. ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದಲ್ಲಿ ಪೂನಂ ಚವ್ಹಾಣ್ ಕೂಡಾ ಇದ್ದರು.
Story first published: Wednesday, January 3, 2018, 10:06 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications