Asian Hockey Champions Trophy 2024: ಭಾರತ-ಪಾಕಿಸ್ತಾನ ಸೆಣೆಸಾಟ; ಯಾವ ಚಾನೆಲ್‌ನಲ್ಲಿ ಎಷ್ಟು ಗಂಟೆಗೆ ಆರಂಭ?
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡವುಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಲೆ ಎಬ್ಬಿಸುತ್ತಿದೆ. ಇದುವರೆಗೆ ಆಡಿರುವ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ಈಗ ಭಾರತ ತನ್ನ ಮುಂದಿನ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಹೈವೋಲ್ಟೇಜ್ ಪಂದ್ಯ ಭಾರೀ ಕುತೂಹಲ ಮೂಡಿಸಿದ್ದು, ಯಾವ ಚಾನೆಲ್‌ನಲ್ಲಿ ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಉಭಯ ತಂಡಗಳ ಪ್ರದರ್ಶನ
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡವು ಅದ್ಭುತ ಪ್ರದರ್ಶನ ನೀಡುತ್ತಿದ್ದು, ಅಂಕಪಟ್ಟಿಯಲ್ಲಿ ಆಗ್ರ ಸ್ಥಾನದಲ್ಲಿದೆ. ಭಾರತವು ಆತಿಥೇಯ ಚೀನಾ ವಿರುದ್ಧ 3-0 ಗೆಲುವಿನೊಂದಿಗೆ ಅಭಿಯಾನವನ್ನು ಪ್ರಾರಂಭಿಸಿತು. ನಂತರ ಜಪಾನ್ ತಂಡವನ್ನು 5-1 ರಿಂದ ಸೋಲಿಸಿತು. ಮೂರನೇ ಪಂದ್ಯದಲ್ಲಿ ಮಲೇಷ್ಯಾವನ್ನು 8-1 ಅಂತರದಿಂದ ಬಗ್ಗು ಬಡಿದ್ದರೆ, ನಾಲ್ಕನೇ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 3-1 ರೋಚಕ ಜಯ ದಾಖಲಿಸಿತ್ತು.
ಪಾಕಿಸ್ತಾನ ತಂಡವು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡನ್ನು ಗೆದ್ದಿದೆ. ಪಾಕಿಸ್ತಾನ ತಂಡವು ಮಲೇಷ್ಯಾ ವಿರುದ್ಧ 2-2 ಡ್ರಾ ಸಾಧಿಸುವ ಮೂಲಕ ತನ್ನ ಅಭಿಯಾನವನ್ನು ಶುರು ಮಾಡಿತ್ತು. ಇದಾದ ಬಳಿಕ ಕೊರಿಯಾ ವಿರುದ್ಧದ ಪಂದ್ಯವನ್ನೂ ಪಾಕ್ ಡ್ರಾ ಮಾಡಿಕೊಂಡಿತ್ತು. ಪಾಕಿಸ್ತಾನ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಗೆಲುವಿನ ರುಚಿ ಕಂಡಿದೆ. ಜಪಾನ್ (2-1) ಮತ್ತು ಆತಿಥೇಯ ಚೀನಾವನ್ನು (5-1) ಸೋಲಿಸಿದೆ.
ಇತ್ತೀಚಿನ ನಡೆದ ಉಭಯ ತಂಡಗಳ ನಡುವಿನ ಪಂದ್ಯಗಳಲ್ಲಿ ಪ್ರಬಲ ಪೈಪೋಟಿ ಕಂಡಬಂದಿದೆ. ಆದರೆ ಪಾಕಿಸ್ತಾನ ವಿರುದ್ಧ ಭಾರತ ಅದ್ಭುತ ಪ್ರದರ್ಶನ ನೀಡಿದ್ದು, ತನ್ನ ಪ್ರಾಬಲ್ಯ ಸಾಧಿಸಿದೆ. ಉಭಯ ತಂಡಗಳು ಕೊನೆಯ ಬಾರಿ ಮುಖಾಮುಖಿಯಾದಾಗ ಭಾರತ 10-2ರಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಇದಕ್ಕೂ ಕೆಲವು ತಿಂಗಳುಗಳ ಮೊದಲು ಚೆನ್ನೈನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ 4-0 ಅಂತರದಲ್ಲಿ ಗೆದ್ದಿತ್ತು.
ಯಾವಾಗ- ಎಲ್ಲಿ?
ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ರೌಂಡ್ ರಾಬಿನ್ ಪಂದ್ಯವು ಚೀನಾದ ಇನ್ನರ್ ಮಂಗೋಲಿಯಾದ ಹುಲುನ್‌ಬುಯರ್‌ನಲ್ಲಿರುವ ಸ್ಟೇಡಿಯಂನಲ್ಲಿ ಶನಿವಾರ (ಸೆಪ್ಟೆಂಬರ್ 14) ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1:15 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಈ ಹೈವೋಲ್ಟೇಜ್ ಪಂದ್ಯದ ಲೈವ್ ಅನ್ನು Sony Sports Ten 1 and Ten 1 HD ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲಿವ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications