Asian Hockey Champions Trophy 2024: ಭರ್ಜರಿ ಗೆಲುವಿನೊಂದಿಗೆ ಭಾರತಕ್ಕೆ ಶುಭಾರಂಭ
2024ರ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಭರ್ಜರಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಶನಿವಾರ ನಡೆದ ತನ್ನ ಮೊದಲ ಪಂದ್ಯದಲ್ಲಿ ಭಾರತ ಪುರುಷರ ಹಾಕಿ ತಂಡ ಆತಿಥೇಯ ಚೀನಾವನ್ನು 3-0 ಗೋಲುಗಳಿಂದ ಸೋಲಿಸಿದೆ.
ಪ್ಯಾರಿಸ್ ಒಲಿಂಪಿಕ್ಸ್ 2024ರ ಕಂಚಿನ ಪದಕ ವಿಜೇತ ಟೀಮ್ ಇಂಡಿಯಾ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ತಂಡವಾಗಿದೆ. ಇದೀಗ ಭಾರತ ಮೊದಲ ಪಂದ್ಯದಲ್ಲಿ ಚೀನಾವನ್ನು ಹೀನಾಯವಾಗಿ ಸೋಲಿಸುವ ಮೂಲಕ ತನ್ನ ಪ್ರಾಬಲ್ಯ ಸಾಧಿಸಿದೆ.

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯ ನೆಚ್ಚಿನ ತಂಡವಾಗಿರುವ ಹಾಲಿ ಚಾಂಪಿಯನ್ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದೆ. ಪಂದ್ಯದುದ್ದಕ್ಕೂ ಚೀನಾದ ವಿರುದ್ಧ ಭಾರತ ಪ್ರಾಬಲ್ಯ ಸಾಧಿಸಿತು. ಚೀನಾದಿಂದ ಯಾವುದೇ ಪ್ರತಿರೋಧ ವ್ಯಕ್ತವಾಗಲಿಲ್ಲ.
ಟೀಮ್ ಇಂಡಿಯಾ ಆಕ್ರಮಣಕಾರಿ ಆಟ
ಸುಖಜಿತ್ ಸಿಂಗ್ ಮೊದಲ ಕ್ವಾರ್ಟರ್‌ನ ಅಂತ್ಯಕ್ಕೆ ಸ್ವಲ್ಪ 14 ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ ಭಾರತಕ್ಕೆ 1-0 ಮುನ್ನಡೆ ನೀಡಿದರು. ಎರಡನೇ ಕ್ವಾರ್ಟರ್‌ನಲ್ಲೂ ಭಾರತ ತನ್ನ ವೇಗದ ಆಟ ಮುಂದುವರಿಸಿದೆ. 27ನೇ ನಿಮಿಷದಲ್ಲಿ ಉತ್ತಮ್ ಸಿಂಗ್ ಭಾರತದ ಪರ ಎರಡನೇ ಗೋಲು ದಾಖಲಿಸಿದರು. ವಿರಾಮದ ವೇಳೆಗೆ ಭಾರತ ಚೀನಾ ವಿರುದ್ಧ 2-0 ಮುನ್ನಡೆ ಸಾಧಿಸಿತು.
ಮೂರು ಮತ್ತು ನಾಲ್ಕನೇ ಕ್ವಾರ್ಟರ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಕಠಿಣ ಪೈಪೋಟಿ ಕಂಡುಬಂದಿತು . ಮೂರನೇ ಕ್ವಾರ್ಟರ್‌ನಲ್ಲಿ ಭಾರತದ ಸ್ಟಾರ್ ಆಟಗಾರ ಅಭಿಷೇಕ್ ಅದ್ಭುತ ಗೋಲ್ ಹೊಡೆಯುವ ಮೂಲಕ ಭಾರತವನ್ನು 3-0 ಅಂತರದಿಂದ ಮುನ್ನಡೆಸಿದ್ದಾರೆ.
ಇದಾದ ಬಳಿಕ ಚೀನಾ ಹಲವು ಅವಕಾಶಗಳನ್ನು ಸೃಷ್ಟಿಸಿಕೊಂಡರೂ ಭಾರತದ ಬಲಿಷ್ಠ ರಕ್ಷಣಾ ಪಡೆ ತಿರುಗೇಟು ನೀಡುವ ಅವಕಾಶವನ್ನೇ ನೀಡಲಿಲ್ಲ. ನಾಲ್ಕನೇ ಕ್ವಾರ್ಟರ್‌ನಲ್ಲಿ ಎರಡೂ ತಂಡಗಳು ಗೋಲು ಗಳಿಸಲು ಹಲವು ಪ್ರಯತ್ನಗಳನ್ನು ಮಾಡಿದವು. ಆದರೆ ಈ ಕ್ವಾರ್ಟರ್ ಗೋಲು ರಹಿತವಾಗಿ ಉಳಿಯಿತು.
ಚೀನಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ಗೋಲು ಗಳಿಸಲು ವಿಫಲರಾದರು. ಆದರೆ, ಪಂದ್ಯದುದ್ದಕ್ಕೂ ಅವರ ಅತ್ಯುತ್ತಮ ಪ್ರದರ್ಶನಕ್ಕಾಗಿ ಪಂದ್ಯದ ಹೀರೋ ಪ್ರಶಸ್ತಿಯನ್ನು ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications