ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಭಾರತದ ಹಾಕಿ ಆಟಗಾರ ಮನ್ದೀಪ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ದಾಖಲು

Coronavirus positive hockey player Mandeep Singh shifted to hospital

ಬೆಂಗಳೂರು, ಆಗಸ್ಟ್ 11: ಕೊರೊನಾವೈರಸ್ ಸೋಂಕಿಗೆ ತುತ್ತಾಗಿದ್ದ ಭಾರತ ಹಾಕಿ ತಂಡದ ಫಾರ್ವರ್ಡ್ ಆಟಗಾರ ಮನ್ದೀಪ್ ಸಿಂಗ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನ್ದೀಪ್ ಅವರ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕಡಿಮೆಯಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿದೆ. ಉಳಿದಂತೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿ ಎಂದು ಮಾಹಿತಿ ಲಭಿಸಿದೆ.

ಐಪಿಎಲ್‌ಗೆ ಪತಂಜಲಿ ಪ್ರಾಯೋಜಕತ್ವ: ತಮಾಷೆಯ ಮೀಮ್ಸ್ ಇಲ್ಲಿವೆ ನೋಡಿಐಪಿಎಲ್‌ಗೆ ಪತಂಜಲಿ ಪ್ರಾಯೋಜಕತ್ವ: ತಮಾಷೆಯ ಮೀಮ್ಸ್ ಇಲ್ಲಿವೆ ನೋಡಿ

ಮನ್ದೀಪ್ ಸೇರಿದಂತೆ ಭಾರತ ರಾಷ್ಟ್ರೀಯ ಹಾಕಿ ತಂಡದ ಇನ್ನಿತರ ಐದು ಆಟಗಾರರಾದ ನಾಯಕ ಮನ್ಪ್ರೀತ್ ಸಿಂಗ್, ಡಿಫೆಂಡರ್ ಸುರೇಂದರ್ ಕುಮಾರ್, ಜಸ್ಕರನ್ ಸಿಂಗ್, ಡ್ರ್ಯಾಗ್ ಫಿಕ್ಕರ್ ವರುಣ್ ಕುಮಾರ್ ಮತ್ತು ಗೋಲ್‌ ಕೀಪರ್ ಕ್ರಿಶನ್ ಬಹದ್ದೂರ್ ಪಾಠಕ್‌ಗೆ ಕೋವಿಡ್-19 ತಗುಲಿತ್ತು.

'ಆತ ಎಲ್ಲಾ ಮಾದರಿಗಳಲ್ಲಿ ಆಡಲಾರ': ಭಾರತದ ಆಟಗಾರನಿಗೆ ಅಖ್ತರ್ ಎಚ್ಚರಿಕೆ!'ಆತ ಎಲ್ಲಾ ಮಾದರಿಗಳಲ್ಲಿ ಆಡಲಾರ': ಭಾರತದ ಆಟಗಾರನಿಗೆ ಅಖ್ತರ್ ಎಚ್ಚರಿಕೆ!

ಆಗಸ್ಟ್ 20ರಿಂದ ಆರಂಭಗೊಳ್ಳಲಿರುವ ಹಾಕಿ ರಾಷ್ಟ್ರೀಯ ಕ್ಯಾಂಪ್‌ಗಾಗಿ ಈ ಆಟಗಾರರೆಲ್ಲ ಬೆಂಗಳೂರಿಗೆ ಬಂದಿದ್ದರು. ಆ ಬಳಿಕ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ಇಂಗ್ಲೆಂಡ್ vs ಪಾಕಿಸ್ತಾನ: ಕುತೂಹಲಕಾರಿ ದಾಖಲೆಗಳು, ಅಂಕಿ-ಅಂಶಗಳು!ಇಂಗ್ಲೆಂಡ್ vs ಪಾಕಿಸ್ತಾನ: ಕುತೂಹಲಕಾರಿ ದಾಖಲೆಗಳು, ಅಂಕಿ-ಅಂಶಗಳು!

'ಆಗಸ್ಟ್ 10ರಂದು ಮನ್ದೀಪ್ ಸಿಂಗ್ ಅವರನ್ನು ಪರಿಶೀಲಿಸುವಾಗ ಅವರ ರಕ್ತದಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗಿತ್ತು. ಇದು ಅವರ ಕೊರೊನಾ ಸೋಂಕು ಸೌಮ್ಯದಿಂದ ಮಧ್ಯಮ ಹಂತಕ್ಕೆ ತಲುಪಿರುವುದನ್ನು ಸೂಚಿಸುತ್ತಿತ್ತು,' ಎಂದು ಸಾಯ್ ತನ್ನ ಹೇಳಿಕೆಯ ಮೂಲಕ ತಿಳಿಸಿದೆ.

Story first published: Tuesday, August 11, 2020, 17:53 [IST]
Other articles published on Aug 11, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X