ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಹಾಕಿ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು 9ನೇ ಸ್ಥಾನ ಪಡೆದ ಭಾರತ

Hockey World Cup 2023: India Beat South Africa by 5-2 Finish ninth

ಈ ಬಾರಿಯ ಹಾಕಿ ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲುವಿನೊಂದಿಗೆ ತನ್ನ ಹೋರಾಟವನ್ನು ಅಂತ್ಯಗೊಳಿಸಿದೆ. ಶನಿವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 5-2 ಗೋಲುಗಳಿಂದ ಮಣಿಸಿದ ಭಾರತ ತಂಡ ಈ ಟೂರ್ನಿಯಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಭಾರತವು ತಮ್ಮ ಹಾಕಿ ವಿಶ್ವಕಪ್ 2023ರ ಅಭಿಯಾನವನ್ನು ಕೊನೆಗೊಳಿಸಿದೆ.

ನಾಯಕ ಹರ್ಮನ್‌ಪ್ರೀತ್, ಆಕಾಶದೀಪ್ ಮತ್ತು ಶಂಶೇರ್ ಸಿಂಗ್ ಈ ಪಂದ್ಯದಲ್ಲಿ ಗೋಲು ಗಳಿಸಿ ಮಿಂಚಿದ್ದಾರೆ. ಇನ್ನು ಭಾರತವು ವಿಶ್ವಕಪ್‌ನಲ್ಲಿ ಅರ್ಜೆಂಟೀನಾದೊಂದಿಗೆ 9ನೇ ಸ್ಥಾನವನ್ನು ಹಂಚಿಕೊಂಡಿದೆ. ಇದಕ್ಕೂ ಮುನ್ನ ಆತಿಥೇಯ ಭಾರತ ತಂಡ ಜನವರಿ 26 ರಂದು ಜಪಾನ್ ವಿರುದ್ಧ 8-0 ಅಂತರದಿಂದ ಗೆಲುವು ಸಾಧಿಸಿತ್ತು.

ಭಾರತ ತಂಡ ಈ ಪಂದ್ಯದಲ್ಲಿ ಆರಂಭದಲ್ಲಿಯೇ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ನಾಲ್ಕನೇ ನಿಮಿಷದಲ್ಲಿ ಮೊದಲ ಗೋಲು ಗಳಿಸಿತ್ತು. 10ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸಿ ಮುನ್ನಡೆಯನ್ನು ಹೆಚ್ಚಿಸಿದ ಬಳಿಕ 11ನೇ ನಿಮಿಷದಲ್ಲಿ ಮತ್ತೊಂದು ಅವಕಾಶವನ್ನು ಗೋಲಾಗಿ ಪರಿವರ್ಸಿಸಲು ಸಾಧ್ಯವಾಗಲಿಲ್ಲ. ಈ ಮೂಲಕ ಒದಲ ಕ್ವಾರ್ಟರ್‌ನಲ್ಲಿ ಭಾರತ ಎರಡು ಗೋಲು ಗಳಿಸಲು ಸಾಧ್ಯವಾಗಿತ್ತು.

ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಎರಡು ತಂಡಗಳು ಸಾಕಷ್ಟು ಪೈಪೋಟಿ ನಡೆಸಿದವಾದರೂ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಭಾರತ 2-0 ಅಂತರದಿಂದ ಉನ್ನಡೆ ಕಾಯ್ದುಕೊಂಡಿತ್ತು. ಇನ್ನು ಮೂರನೇ ಕ್ವಾರ್ಟರ್‌ಲ್ಲಿ ಭಾರತ ಮೂರನೇ ಗೋಲು ಗಳಿಸುವಲ್ಲಿ ಯಶಸ್ವಿಯಾಯಿತು. ಶಂಶೇರ್ ಸಿಂಗ್ ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. ಇದಾಗಿ 6ನೇ ನಿಮಿಷದಲ್ಲಿ ಭಾರತ ಮತ್ತೊಂದು ಗೋಲು ಸಿಡಿಸುವ ಮೂಲಕ ಭಾರತ ತಂಡ 4-0 ಅಂತರದಿಂದ ಮುನ್ನಡೆ ಪಡೆಯಿತು.

ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ತಂಡ ಕೂಡ ಮೊದಲ ಗೋಲು ಗಳಿಸುವ ಮೂಲಕ ಗೋಲಿನ ಅಂತರ 4-1ಕ್ಕೆ ಏರಿಕೆಯಾಯಿತು. ಅದಾದ ಬಳಿಕ ಸುಕ್‌ಜೀತ್ ಸಿಂಗ್ ಭಾರತದ ಪರವಾಗಿ 5ನೇ ಗೋಲು ಸಿಡಿಸಿ ಮುನ್ನಡೆ ಹೆಚ್ಚಿಸಿದರು. ಇನ್ನು ಪಂದ್ಯದ ಮುಕ್ತಾಯಕ್ಕೆ 30 ಸೆಕೆಂಡ್‌ಗಳು ಇರುವಾದ ದಕ್ಷಿಣ ಆಫ್ರಿಕಾ ಪರವಾಗಿ ಮತ್ತೊಂದು ಗೋಲು ದಾಖಲಾಯಿತು. ಪಂದ್ಯದ ಮುಕ್ತಾಯದ ವೇಳೆಗೆ ಭಾರತ 5-2 ಗೋಲುಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

Story first published: Saturday, January 28, 2023, 23:31 [IST]
Other articles published on Jan 28, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X