Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

FIH Hockey Pro League 2024: ಎಫ್‌ಐಎಚ್ ಹಾಕಿ ಪ್ರೊ ಲೀಗ್‌ಗೆ ಬಲಿಷ್ಠ ಟೀಮ್‌ ಇಂಡಿಯಾ ಪ್ರಕಟ

ಬೆಲ್ಜಿಯಂನ ಆಂಟ್‌ವರ್ಪ್ ಮತ್ತು ಇಂಗ್ಲೆಂಡ್‌ನ ಲಂಡನ್‌ನಲ್ಲಿ ನಡೆಯಲಿರುವ ಎಫ್‌ಐಎಚ್ ಹಾಕಿ ಪ್ರೊ ಲೀಗ್ ನಲ್ಲಿ ಭಾಗವಹಿಸುವ 24 ಸದಸ್ಯರ ಪುರುಷರ ಹಾಕಿ ತಂಡವನ್ನು ಹಾಕಿ ಇಂಡಿಯಾ ಗುರುವಾರ ಪ್ರಕಟಿಸಿದೆ.

ಬೆಲ್ಜಿಯಂನಲ್ಲಿ ಮೊದಲ ಹಂತದ ಪಂದ್ಯಗಳು ಮೇ 22 ರಿಂದ ಮೇ 26 ರವರೆಗೆ ನಡೆಯಲಿದ್ದು, ಎರಡನೇ ಹಂತದ ಪಂದ್ಯಗಳು ಜೂನ್ 1 ರಿಂದ ಜೂನ್ 9 ರವರೆಗೆ ಇಂಗ್ಲೆಂಡ್ ನಲ್ಲಿ ನಡೆಯಲಿದೆ. ಮೇ 22 ರಂದು ಭಾರತ ತನ್ನ ಮೊದಲ ಪಂದ್ಯದಲ್ಲಿ ಅರ್ಜೆಂಟೀನಾವನ್ನು ಎದುರಿಸಲಿದೆ. ಬಳಿಕ ಅರ್ಜೆಂಟೀನಾ, ಬೆಲ್ಜಿಯಂ, ಜರ್ಮನಿ ಮತ್ತು ಗ್ರೇಟ್ ಬ್ರಿಟನ್ ವಿರುದ್ಧ ತಲಾ ಎರಡು ಪಂದ್ಯಗಳನ್ನು ಆಡಲಿದೆ.

India Mens Hockey Team announced for FIH Hockey Pro League

ಭಾರತ ತಂಡವನ್ನು ನಾಯಕನಾಗಿ ಹರ್ಮನ್‌ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ. ಮಿಡ್‌ಫೀಲ್ಡರ್ ಹಾರ್ದಿಕ್ ಸಿಂಗ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಗೋಲ್ ಕೀಪಿಂಗ್ ಜವಾಬ್ದಾರಿ ಪಿಆರ್ ಶ್ರೀಜೇಶ್ ಮತ್ತು ಕೃಷ್ಣ ಬಹದ್ದೂರ್ ಪಾಠಕ್ ಮೇಲಿದ್ದು, ರಕ್ಷಣಾತ್ಮಕ ಕ್ಷೇತ್ರದಲ್ಲಿ ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಸುಮಿತ್, ಸಂಜಯ್, ಜುಗ್ರಾಜ್ ಸಿಂಗ್ ಮತ್ತು ವಿಷ್ಣುಕಾಂತ್ ಸಿಂಗ್ ಇದ್ದಾರೆ.

ಇನ್ನು ಮಿಡ್‌ಫೀಲ್ಡ್ ವಿಭಾಗದಲ್ಲಿ ವಿವೇಕ್ ಸಾಗರ್ ಪ್ರಸಾದ್, ನೀಲಕಂಠ ಶರ್ಮಾ, ಮನ್‌ಪ್ರೀತ್ ಸಿಂಗ್, ಶಂಶೇರ್ ಸಿಂಗ್, ಹಾರ್ದಿಕ್ ಸಿಂಗ್, ರಾಜ್‌ಕುಮಾರ್ ಪಾಲ್ ಮತ್ತು ಮೊಹಮ್ಮದ್ ಅವರಂತಹ ಡೈನಾಮಿಕ್‌ ಆಟಗಾರರು ಸ್ಥಾನ ಪಡೆದಿದ್ದಾರೆ. ಫಾರ್ವರ್ಡ್ ಲೈನ್‌ನಲ್ಲಿ ರಾಹಿಲ್ ಮೌಸಿನ್, ಮನ್‌ದೀಪ್ ಸಿಂಗ್, ಅಭಿಷೇಕ್, ಸುಖಜಿತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಗುರ್ಜಂತ್ ಸಿಂಗ್, ಆಕಾಶದೀಪ್ ಸಿಂಗ್, ಅರ್ಜಿತ್ ಸಿಂಗ್ ಹುಂಡಾಲ್ ಮತ್ತು ಬಾಬಿ ಸಿಂಗ್ ಧಾಮಿ ಇದ್ದಾರೆ.

ತಂಡದ ಆಯ್ಕೆ ಕುರಿತು ಮಾತನಾಡಿದ ಮುಖ್ಯ ಕೋಚ್ ಕ್ರೇಗ್ ಫುಲ್ಟನ್, ನಾವು ಶಿಬಿರದಲ್ಲಿ ಈಗಾಗಲೇ ಸಾಕಷ್ಟು ಅಭ್ಯಾಸ ನಡೆಸಿದ್ದೇವೆ. ಪ್ಯಾರಿಸ್ ಒಲಿಂಪಿಕ್ಸ್‌ಗೂ ಮುನ್ನ ಬಲಿಷ್ಠ ತಂಡಗಳ ವಿರುದ್ಧ ಆಡುತ್ತಿರುವುದು ನಮ್ಮ ಸಾಮರ್ಥ್ಯ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನೊಂದಿಗೆ ಈ ಋತುವನ್ನು ಪ್ರಾರಂಭಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತ ಹಾಕಿ ತಂಡ

ಗೋಲ್‌ಕೀಪರ್‌ಗಳು: ಶ್ರೀಜೇಶ್ ಪರಟ್ಟು ರವೀಂದ್ರನ್, ಕೃಷ್ಣ ಬಹದ್ದೂರ್ ಪಾಠಕ್.

ಡಿಫೆಂಡರ್ಸ್: ಜರ್ಮನ್ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಹರ್ಮನ್ಪ್ರೀತ್ ಸಿಂಗ್, ಸುಮಿತ್, ಸಂಜಯ್, ಜುಗ್ರಾಜ್ ಸಿಂಗ್, ವಿಷ್ಣುಕಾಂತ್ ಸಿಂಗ್‌.

ಮಿಡ್‌ಫೀಲ್ಡರ್‌ಗಳು: ವಿವೇಕ್ ಸಾಗರ್ ಪ್ರಸಾದ್, ನೀಲಕಂಠ ಶರ್ಮಾ, ಮನ್‌ಪ್ರೀತ್ ಸಿಂಗ್, ಶಂಶೇರ್ ಸಿಂಗ್, ಹಾರ್ದಿಕ್ ಸಿಂಗ್, ರಾಜ್‌ಕುಮಾರ್ ಪಾಲ್, ಮೊಹಮ್ಮದ್. ರಾಹಿಲ್ ಮೌಸಿನ್.

ಫಾರ್ವರ್ಡ್: ಮನ್‌ದೀಪ್ ಸಿಂಗ್, ಅಭಿಷೇಕ್, ಸುಖಜಿತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಗುರ್ಜಂತ್ ಸಿಂಗ್, ಆಕಾಶದೀಪ್ ಸಿಂಗ್, ಅರ್ಜಿತ್ ಸಿಂಗ್ ಹುಂಡಲ್, ಬಾಬಿ ಸಿಂಗ್ ಧಾಮಿ.

Story first published: Thursday, May 9, 2024, 16:53 [IST]
Other articles published on May 9, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+