Paris Olympics 2024: ಒಲಿಂಪಿಕ್ಸ್ ಹಾಕಿ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತ ಯಾವಾಗ- ಯಾರನ್ನು ಎದುರಿಸಲಿದೆ?
ಆಗಸ್ಟ್ 3 ಶನಿವಾರ, ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತ ಪುರುಷರ ಹಾಕಿ ತಂಡವು ಅದ್ಭುತ ಪ್ರದರ್ಶನ ನೀಡುತ್ತಿದೆ. ಈ ಮೂಲಕ ಭಾರತ ತಂಡ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಇದೀಗ ಒಲಿಂಪಿಕ್ಸ್ ಹಾಕಿ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತ ಯಾವ ತಂಡವನ್ನು ಯಾವಾಗ ಎದುರಿಸಲಿದೆ ಎಂಬುದು ಅಭಿಮಾನಿಗಳಿಗೆ ಪ್ರಶ್ನೆ ಆಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಭಾರತ ಹಾಕಿ ತಂಡವು ಕ್ವಾರ್ಟರ್‌ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ . ಈ ಪಂದ್ಯವು ಆಗಸ್ಟ್ 4 (ಭಾನುವಾರ) ಭಾರತೀಯ ಕಾಲಮಾನ ಮಧ್ಯಾಹ್ನ 1:30 ಗಂಟೆಗೆ ಆರಂಭವಾಗಲಿದೆ.
ತನ್ನ ಕೊನೆಯ ಪೂಲ್-ಬಿ ಪಂದ್ಯದಲ್ಲಿ 52 ವರ್ಷಗಳ ನಂತರ ಒಲಿಂಪಿಕ್ಸ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾವನ್ನು 3-2 ಗೋಲುಗಳ ಅಂತರದಿಂದ ಸೋಲಿಸಿದ ನಂತರ ಭಾರತದ ಉತ್ಸಾಹವು ಉತ್ತುಂಗದಲ್ಲಿದೆ.
ಹೀಗಾಗಿ ಹಾಕಿ ಕ್ರೀಡೆಯಿಂದ ಚಿನ್ನದ ಪದಕವನ್ನು 140 ಕೋಟಿ ಭಾರತೀಯರು ನಿರೀಕ್ಷಿಸುತ್ತಿದ್ದಾರೆ. ಕಳೆದ 2020 ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಕಂಚಿನ ಪದಕವನ್ನು ಗೆದ್ದಿತ್ತು.
ಪ್ಯಾರಿಸ್ ಒಲಿಂಪಿಕ್ಸ್ ಹಾಕಿ ಕ್ವಾರ್ಟರ್ ಫೈನಲ್ ಪಂದ್ಯಗಳು- ಆಗಸ್ಟ್ 4
1) ಪೂಲ್ ಎ ವಿಜೇತ ಜರ್ಮನಿ ತಂಡವು ಪೂಲ್ ಬಿಯಲ್ಲಿ ನಾಲ್ಕನೇ ಸ್ಥಾನ ಪಡೆದ ಅರ್ಜೆಂಟೀನಾವನ್ನು ಎದುರಿಸಲಿದೆ.
2) ಪೂಲ್ ಎ ನಾಲ್ಕನೇ ಸ್ಥಾನದಲ್ಲಿರುವ ಸ್ಪೇನ್ ವಿರುದ್ಧ ಪೂಲ್ ಬಿ ಟೇಬಲ್-ಟಾಪರ್ ಮತ್ತು ಹಾಲಿ ಒಲಿಂಪಿಕ್ ಚಾಂಪಿಯನ್ ಬೆಲ್ಜಿಯಂ ತಂಡವು ಸೆಣಸಾಡಲಿದೆ.
3) ಪೂಲ್ ಎ ಎರಡನೇ ಸ್ಥಾನ ಗಳಿಸಿರುವ ನೆದರ್ಲ್ಯಾಂಡ್ಸ್ ಎದುರು ಪೂಲ್ ಬಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಕಣಕ್ಕಿಳಿಯಲಿದೆ.
4) ಪೂಲ್ ಬಿ ಎರಡನೇ ಸ್ಥಾನದಲ್ಲಿ ಭಾರತ ತಂಡವು ಪೂಲ್ ಎ ಮೂರನೇ ಸ್ಥಾನದಲ್ಲಿರುವ ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ.
1980ರಲ್ಲಿ ಕೊನೆಯ ಬಾರಿಗೆ ಭಾರತಕ್ಕೆ ಚಿನ್ನ
ಕೊನೆಯ ಬಾರಿಗೆ 1980ರ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ಭಾರತ ಪುರುಷರ ಹಾಕಿ ತಂಡ ಮೊದಲ ಚಿನ್ನದ ಪದಕಕ್ಕೆ ಮುತ್ತಿಕ್ಕಿತ್ತು. ಕಳೆದ ಪಂದ್ಯದಲ್ಲಿ ಕಾಂಗರೂ ಪಡೆ ವಿರುದ್ಧ 2 ಅದ್ಭುತ ಗೋಲುಗಳನ್ನು ಬಾರಿಸಿ ಗೆಲುವಿನಲ್ಲಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 44 ವರ್ಷಗಳ ಕನಸನ್ನು ನನಸಾಗಿಸಲು ಭಾರತ ಸಜ್ಜಾಗಿದೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications