ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS
For Daily Alerts

ಹಾಕಿ ಹಬ್ಬದಲ್ಲಿ ವಿಜಯಿಯಾದ ತಂಡಗಳ ವಿವರ

By ಬಿ.ಎಂ. ಲವಕುಮಾರ್, ಮಡಿಕೇರಿ

Next »

« Previous

19ನೇ ವರ್ಷದ ಕುಪ್ಪಂಡ ಕಪ್ ಹಾಕಿ ನಮ್ಮೆ-2015 ವೀರಾಜಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏ.15ರಿಂದ ಆರಂಭವಾಗಿದ್ದು ಸುಮಾರು 225 ತಂಡಗಳು ಗೆಲುವಿಗಾಗಿ ಸೆಣಸಾಡಲಿವೆ. ವರ್ಣರಂಜಿತ ಸಮಾರಂಭದ ಮೂಲಕ ಹಾಕಿ ಹಬ್ಬಕ್ಕೆ ಚಾಲನೆ ದೊರಕಿದೆ.

1998ರಿಂದ ಆರಂಭವಾದ ಈ ಹಾಕಿ ಉತ್ಸವದಲ್ಲಿ ವಿಜಯೋತ್ಸವದ ಗೋಲು ಬಾರಿಸಿದ ತಂಡಗಳ ವಿವರಗಳು ಕೆಳಗಿನಂತಿವೆ.

Kuppanda cup hockey namme - 2015 - part3

1998ರಲ್ಲಿ ಕಡಂಗದಲ್ಲಿ ನಡೆದ ಕೋಡಿರಕಪ್‌ನಲ್ಲಿ 116 ತಂಡಗಳು ಪಾಲ್ಗೊಂಡು ಕುಲ್ಲೇಟಿರ ತಂಡ ವಿಜಯಿಯಾದರೆ, 1999ರಲ್ಲಿ ಕಾಕೋಟುಪರಂಬುನಲ್ಲಿ ನಡೆದ ಬಲ್ಲಚಂಡಕಪ್‌ನಲ್ಲಿ 140 ತಂಡಗಳು ಪಾಲ್ಗೊಂಡಿದ್ದು ಕೂತಂಡ ಹಾಗೂ ಕುಲ್ಲೇಟಿರ ತಂಡಗಳು ಕಪ್‌ನ ಒಡೆತನವನ್ನು ಹಂಚಿಕೊಂಡಿದ್ದವು.

2000ರಲ್ಲಿ ಪೊನ್ನಂಪೇಟೆಯಲ್ಲಿ ನಡೆದ ಚೆಪ್ಪುಡಿರಕಪ್‌ನಲ್ಲಿ 170 ತಂಡಗಳು ಭಾಗವಹಿಸಿದ್ದು ಕೂತಂಡ ತಂಡ ಗೆಲುವು ಪಡೆದಿತ್ತು.

2001ರಲ್ಲಿ ಅಮ್ಮತ್ತಿಯಲ್ಲಿ ನಡೆದ ನೆಲ್ಲಮಕ್ಕಡ ಕಪ್‌ನಲ್ಲಿ 220 ತಂಡಗಳು ಭಾಗವಹಿಸಿದ್ದು ಕೂತಂಡ ತಂಡ ವಿಜಯಿಯಾಗಿತ್ತು.

2002ರಲ್ಲಿ ಹುದಿಕೇರಿಯಲ್ಲಿ ನಡೆದ ಚಕ್ಕೇರಕಪ್‌ನಲ್ಲಿ 252 ತಂಡಗಳು ಪಾಲ್ಗೊಂಡಿದ್ದು ಅವುಗಳಲ್ಲಿ ಕುಲ್ಲೇಟಿರ ತಂಡ ಒಡೆತನ ಸಾಧಿಸಿತ್ತು.

2003ರಲ್ಲಿ ನಾಪೋಕ್ಲುನಲ್ಲಿ ನಡೆದ ಕಲಿಯಂಡ ಕಪ್‌ನಲ್ಲಿ 280 ತಂಡಗಳು ಭಾಗವಹಿಸಿದ್ದು ನೆಲ್ಲಮಕ್ಕಡ ತಂಡ ಗೆಲುವು ಸಾಧಿಸಿತ್ತು.

2004ರಲ್ಲಿ ಮಾದಾಪುರದಲ್ಲಿ ನಡೆದ ಮಾಳೆಯಂಡ ಕಪ್‌ನಲ್ಲಿ 235 ತಂಡ ಪಾಲ್ಗೊಂಡು ಕೂತಂಡ ತಂಡ ಗೆಲುವು ಪಡೆದಿತ್ತು.

2005ರಲ್ಲಿ ಮಡಿಕೇರಿಯಲ್ಲಿ ನಡೆದ ಬಿದ್ದಂಡ ಕಪ್‌ನಲ್ಲಿ 222 ತಂಡಗಳು ಭಾಗವಹಿಸಿ ನೆಲ್ಲಮಕ್ಕಡ ತಂಡ ವಿಜಯಿಯಾಗಿತ್ತು.

2006ರಲ್ಲಿ ಪೊನ್ನಂಪೇಟೆಯಲ್ಲಿ ನಡೆದ ಕಳ್ಳಿಚಂಡ ಕಪ್‌ನಲ್ಲಿ 217 ತಂಡಗಳು ಭಾಗವಹಿಸಿ ಪಳಂಗಂಡ ತಂಡ ಒಡೆತನ ಸಾಧಿಸಿತ್ತು.

2007ರಲ್ಲಿ ಕಾಕೋಟುಪರಂಬುನಲ್ಲಿ ನಡೆದ ಮಂಡೇಟಿರ ಕಪ್‌ನಲ್ಲಿ 186 ತಂಡ ಪಾಲ್ಗೊಂಡು ಮಂಡೇಪಂಡ ತಂಡ ಗೆಲುವು ಪಡೆದಿತ್ತು.

2008ರಲ್ಲಿ ಪೊನ್ನಂಪೇಟೆಯಲ್ಲಿ ನಡೆದ ಅಳಮೇಂಗಡ ಕಪ್‌ನಲ್ಲಿ 216 ತಂಡಗಳು ಪಾಲ್ಗೊಂಡು ಅಂಜಪರವಂಡ ಗೆಲುವು ಪಡೆದಿತ್ತು.

2009ರಲ್ಲಿ ಅಮ್ಮತ್ತಿಯಲ್ಲಿ ನಡೆದ ಮಂಡೇಪಂಡ ಕಪ್‌ನಲ್ಲಿ 231 ತಂಡಗಳು ಭಾಗವಹಿಸಿ ನೆಲ್ಲಮಕ್ಕಡ ತಂಡ ಒಡೆತನ ಸಾಧಿಸಿತ್ತು.

2010ರಲ್ಲಿ ಪೊನ್ನಂಪೇಟೆಯಲ್ಲಿ ನಡೆದ ಮನೆಯಪಂಡ ಕಪ್‌ನಲ್ಲಿ ಸುಮಾರು 214 ತಂಡಗಳು ಭಾಗವಹಿಸಿದ್ದವಲ್ಲದೆ ಅಂತಿಮವಾಗಿ ಪಳಂಗಂಡ ತಂಡ ಕಪ್‌ನ್ನು ತನ್ನದಾಗಿಸಿಕೊಂಡಿತು.

2011ರಲ್ಲಿ ಪೊನ್ನಂಪೇಟೆಯಲ್ಲಿ ನಡೆದ ಮಚ್ಚಾಮಾಡ ಕಪ್ ಪಂದ್ಯಾವಳಿಯಲ್ಲಿ 228 ತಂಡಗಳು ಭಾಗವಹಿಸಿದ್ದ ಆಟದಲ್ಲಿ ಪಳಂಗಂಡ ತಂಡ ಕಪ್‌ನ್ನು ತನ್ನದಾಗಿಸಿಕೊಂಡಿತ್ತು.

2012ರಲ್ಲಿ ಅಮ್ಮತ್ತಿಯಲ್ಲಿ ನಡೆದ ಐಚೆಟ್ಟಿರ ಕಪ್ ಪಂದ್ಯಾವಳಿಯಲ್ಲಿ 217 ತಂಡಗಳು ಭಾಗವಹಿಸಿದ್ದವಾದರೂ ಪಳಂಗಂಡ ಮೂರನೇ ಬಾರಿಗೆ ಗೆದ್ದು ಹ್ಯಾಟ್ರಿಕ್ ಸಾಧಿಸಿತ್ತು.

2013ರಲ್ಲಿ ವೀರಾಜಪೇಟೆಯ ಬಾಳುಗೋಡುವಿನಲ್ಲಿ ಮಾದಂಡ ಕಪ್ ನಡೆದು 225 ತಂಡಗಳು ಭಾಗವಹಿಸಿ ಅಂಜಪರವಂಡ ತಂಡ ಚಾಂಪಿಯನ್ ಪಟ್ಟ ಪಡೆದುಕೊಂಡರೆ ಹ್ಯಾಟ್ರಿಕ್ ಸಾಧನೆ ಮಾಡಿದ ಪಳಂಗಂಡ ತಂಡ ರನ್ನರ್‌ಗೆ ತೃಪ್ತಿಪಟ್ಟುಕೊಂಡಿತ್ತು.

2014ರಲ್ಲಿ ವೀರಾಜಪೇಟೆಯಲ್ಲಿ ತಾತಂಡಕಪ್ ನಡೆದು 242 ತಂಡಗಳು ಭಾಗವಹಿಸಿ ಕಲಿಯಂಡ ಕುಟುಂಬದ ತಂಡ ಚಾಂಪಿಯನ್ ಪಟ್ಟ ಕಟ್ಟಿಕೊಂಡರೆ ಪಳಂಗಂಡ ರನ್ನರ್‌ಗೆ ತೃಪ್ತಿಪಟ್ಟುಕೊಂಡಿತ್ತು.

Next »

« Previous

Story first published: Wednesday, January 3, 2018, 10:15 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X