IND vs PAK: ಏಷ್ಯಾಕಪ್ ಆಡಲು ಭಾರತಕ್ಕೆ ಬರಲಿದೆ ಪಾಕಿಸ್ತಾನ ತಂಡ; ಯಾವಾಗ, ಎಲ್ಲಿ?
ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದು ವರ್ಷಗಳೇ ಕಳೆದಿವೆ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಇತ್ತೀಚೆಗೆ ನಡೆದ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿತ್ತು. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿತ್ತು. ಹೀಗಾಗಿ ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಿತ್ತು.
ಆದರೆ ಪಾಕಿಸ್ತಾನ ಪುರುಷರ ಹಾಕಿ ತಂಡವು ಭಾರತಕ್ಕೆ ಬರಲು ಸಜ್ಜಾಗಿದೆ.
ಬಿಹಾರದ ರಾಜಗೀರ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರೀಡಾ ಸಂಕೀರ್ಣದಲ್ಲಿ ಆಗಸ್ಟ್ 29 ರಿಂದ ಸೆಪ್ಟೆಂಬರ್ 7 ರವರೆಗೆ ನಡೆಯಲಿರುವ ಹಾಕಿ ಏಷ್ಯಾಕಪ್ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡವು ಭಾರತಕ್ಕೆ ಬರಲಿದೆ. ಇದಕ್ಕೂ ಮುನ್ನ 2024 ರಲ್ಲಿ ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಭಾರತ ಮಹಿಳೆಯರ ತಂಡ ಚಾಂಪಿಯನ್ ಆಗಿತ್ತು.

ಪುರಷರ ಹಾಕಿ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಜಪಾನ್, ಕೊರಿಯಾ, ಚೀನಾ ಮತ್ತು ಮಲೇಷ್ಯಾ ಸೇರಿದಂತೆ ಎಂಟು ತಂಡಗಳು ಭಾಗವಹಿಸಲಿವೆ. ದಕ್ಷಿಣ ಕೊರಿಯಾ ಅತ್ಯಂತ ಯಶಸ್ವಿ ತಂಡವಾಗಿದ್ದು, ಐದು ಬಾರಿ ಪ್ರಶಸ್ತಿಗಳನ್ನು ಗೆದ್ದಿದ್ದರೆ, ಭಾರತ ಮತ್ತು ಪಾಕಿಸ್ತಾನ ತಲಾ ಮೂರು ಪ್ರಶಸ್ತಿಗಳನ್ನು ಗೆದ್ದಿವೆ.
ಪಾಕಿಸ್ತಾನ ತಂಡವು 2023 ರಲ್ಲಿ ಚೆನ್ನೈನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಕೊನೆಯ ಬಾರಿಗೆ ಭಾರತಕ್ಕೆ ಭೇಟಿ ನೀಡಿತ್ತು . ಆರು ತಂಡಗಳ ಟೂರ್ನಿಯಲ್ಲಿ ಪಾಕಿಸ್ತಾನ ಐದನೇ ಸ್ಥಾನ ಪಡೆದಿತ್ತು. ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ಪಂದ್ಯವನ್ನು ಎದುರು ನೋಡುತ್ತಿದ್ದೇನೆ ಎಂದು ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟಿರ್ಕಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಯಾವುದೇ ಪಂದ್ಯವು ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆದರೂ ಅದು ಯಾವಾಗಲೂ ರೋಚಕವಾಗಿರುತ್ತದೆ. 2023 ರಲ್ಲಿ ಚೆನ್ನೈನಲ್ಲಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ನಡೆದಾಗ, ಭಾರತ ಮತ್ತು ಪಾಕಿಸ್ತಾನ ತಂಡಗಳು ಉತ್ತಮವಾಗಿ ಆಡಿದವು. ಎರಡೂ ತಂಡಗಳು ರಾಜ್‌ಗೀರ್‌ನಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಪಾಕಿಸ್ತಾನ ಕ್ರಿಕೆಟ್ ತಂಡ ಭಾರತ ಪ್ರವಾಸ ಮಾಡುವುದಿಲ್ಲ, ಆದರೆ ಪಾಕಿಸ್ತಾನ ಪುರುಷರ ಹಾಕಿ ತಂಡವು ನಿಯಮಿತವಾಗಿ ಭಾರತಕ್ಕೆ ಭೇಟಿ ನೀಡುತ್ತಿದೆ. 2018 ರ ವಿಶ್ವಕಪ್, 2014ರ ಚಾಂಪಿಯನ್ಸ್ ಟ್ರೋಫಿ, 2021 ರ ಜೂನಿಯರ್ ಹಾಕಿ ವಿಶ್ವಕಪ್. ಅಲ್ಲದೆ, ಭಾರತೀಯ ಡೇವಿಸ್ ಕಪ್ ತಂಡ ಕಳೆದ ವರ್ಷ ಪಾಕಿಸ್ತಾನಕ್ಕೆ ಭೇಟಿ ನೀಡಿತ್ತು. ಪಾಕಿಸ್ತಾನ ಫುಟ್ಬಾಲ್ ತಂಡ ಕೂಡ 2023 ರಲ್ಲಿ ಎಸ್‌ಎಎಫ್‌ಎಫ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿತ್ತು. ಅದೇ ವರ್ಷ ಭಾರತ ಬ್ರಿಡ್ಜ್ ತಂಡವು ಲಾಹೋರ್‌ನಲ್ಲಿ ನಡೆದ ಬ್ರಿಡ್ಜ್ ಫೆಡರೇಶನ್ ಆಫ್ ಏಷ್ಯಾ ಮತ್ತು ಮಿಡಲ್-ಈಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿತು. ಈ ಟೂರ್ನಿಯಲ್ಲಿ ಭಾರತ ನಾಲ್ಕು ಚಿನ್ನದ ಪದಕಗಳನ್ನು ಗೆದ್ದಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications